ಸಿಎಂ ಡಿಕೆಶಿ ಸೂಚನೆ ಬೆನ್ನಲ್ಲೇ ರೌಡಿಗಳ ವಿರುದ್ಧ ಸಮರ ಸಾರಿದ ಪೊಲೀಸ್ರು, ವಿಚಾರಣೆಗೆ ಬರದೇ ಆಟವಾಡ್ತಿದ್ದ ರೌಡಿ ಅರೆಸ್ಟ್ – Kannada News
ಬೆಂಗಳೂರು, (ಜೂನ್ 08): ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಖಡಕ್ ಸೂಚನೆ ಬೆನ್ನಲ್ಲೇ ಪೊಲೀಸರು (Police), ರೌಡಿಗಳನ್ನು (Rowdy) ಮಟ್ಟಹಾಕಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂತೆ ಪ್ರಕರಣಗಳ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಯನ್ನು ಬೆಂಗಳೂರು ಸಿಸಿಬಿ ಹೆಡೆಮುರಿಕಟ್ಟಿದೆ. ಹೌದು….ಕೋರ್ಟ್ ವಾರಂಟ್ ಆದೇಶ ಉಲ್ಲಂಘಿಸಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕೆ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ವಿನೋಬನಗರದ ರೌಡಿಶೀಟರ್ ಶಾಹಿದ್ ಪಾಷಾನನ್ನು ಬಂಧಿಸಿದ್ದಾರೆ. ಶಾಹಿದ್ ಪಾಷಾ ವಿರುದ್ಧ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಕೇಸ್ ದಾಖಲಾಗಿದ್ದು, ಪ್ರಕರಣಗಳ…