Headlines

ರಾಜ್ಯದ ಸಂಸದರ ಜೊತೆಗಿನ ಸಭೆಯಲ್ಲಿ ಏನೆಲ್ಲ ಚರ್ಚೆ?: ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಡಿಕೆ ಶಿವಕುಮಾರ್​​ – Kannada News | Karnataka CM DK Shivakumar to Meet State MPs in Delhi Today Over Pending Irrigation Projects and Drought Relief

ಬೆಂಗಳೂರು, ಜು. 27: ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಿರುವ ನಿಟ್ಟಿನಲ್ಲಿ ಕರ್ನಾಟಕದ (Karnataka) ಸಂಸತ್ ಸದಸ್ಯರನ್ನು ಇಂದು ಭೇಟಿ ಮಾಡುತ್ತಿರೋದಾಗಿ ಸಿಎಂ ಡಿಕೆ ಶಿವಕುಮಾರ್ (DK Shivakumar)​​ ತಿಳಿಸಿದ್ದಾರೆ. ತಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ…

Read More

‘ಅರ್ಚನಾ ಕೊಟ್ಟಿಗೆ ಬಿಗ್ ಬಾಸ್​​ಗೆ ಬರಲಿ’; ವೀಕ್ಷಕರ ಒತ್ತಾಯ – Kannada News | Fans Demand Actress Archana Kottige Entry in Bigg Boss Kannada Season 13 After Viral Interview

ನಟಿ ಅರ್ಚನಾ ಕೊಟ್ಟಿಗೆ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಇಷ್ಟು ದಿನ ಅವರ ನಟನೆಯನ್ನು ಮಾತ್ರ ವೀಕ್ಷಕರು ಕಣ್ತುಂಬಿಕೊಂಡಿದ್ದರು. ಆದರೆ ಇತ್ತೀಚೆಗೆ ಅವರ ಸ್ವಭಾವ ಹೇಗೆ ಎಂಬುದನ್ನು ತಿಳಿದುಕೊಳ್ಳುವ ಅವಕಾಶ ಪ್ರೇಕ್ಷಕರಿಗೆ ಸಿಕ್ಕಿತ್ತು. ಅವರು ರಿಯಲ್ ಲೈಫ್​​ನಲ್ಲಿ ಹೇಗೆ ಎಂದು ತಿಳಿದ ಬಳಿಕ ಅವರು ಬಿಗ್ ಬಾಸ್​​ಗೆ (Bigg Boss) ಬರಲೇಬೇಕು ಎಂದು ವೀಕ್ಷಕರು ಒತ್ತಾಯ ಮಾಡುತ್ತಿದ್ದಾರೆ. ಅವರಿಗೆ ಈ ಬಾರಿ ಬಿಗ್ ಬಾಸ್ ಆಫರ್ ಹೋಗುತ್ತಾ ಎನ್ನುವ ಕುತೂಹಲ ಮೂಡಿದೆ. ಅರ್ಚನಾ ಕೊಟ್ಟಿಗೆ…

Read More

Anti-paper leak Bill 2026 Live Video: ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ – Kannada News | New Law Against Exam Leaks: India’s Bill to End Cheating and Boost Transparency

ದೆಹಲಿ, ಜು.27: ದೇಶದಲ್ಲಿ ನಿರಂತರವಾಗಿ ವರದಿಯಾಗುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ (Question Paper Leak) ಹಾಗೂ ಪರೀಕ್ಷಾ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಅತ್ಯಂತ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಹಾಗೂ ನಂಬಿಕೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026’ ಅನ್ನು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇಂದು (ಜುಲೈ 27, ಸೋಮವಾರ) ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಈ ಬಗ್ಗೆ…

Read More

ಡಿಕೆಶಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಸಭೆ: 12ರಿಂದ 15 ಹೊಸ ಮುಖಗಳಿಗೆ ಮಣೆ? – Kannada News | DK Shivakumar Cabinet Expansion: Crucial Meeting Today; 12–15 New Faces Likely to Be Inducted?

ನವದೆಹಲಿ, ಜುಲೈ 27: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರೊಂದಿಗೆ ಈ ಕುರಿತು ಮಹತ್ವದ ಸಭೆ ನಡೆಯಲಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಯಲಿದೆ. ಈ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಯತ್ತ ಮುಖ ಮಾಡಿದ್ದರೆ, ಮುಖ್ಯಮಂತ್ರಿಗಳು ದೆಹಲಿಗೆ ತೆರಳುವ…

Read More

SCO, BRICS, UNGA: ಒಂದೇ ತಿಂಗಳ ಅವಧಿಯಲ್ಲಿ ಮೂರು ಪ್ರಮುಖ ಜಾಗತಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮೋದಿ – Kannada News | Modi’s Global Diplomatic Push: SCO, BRICS, UNGA Summits in One Month

ನವದೆಹಲಿ, ಜುಲೈ 27: ಪ್ರಧಾನಿ ನರೇಂದ್ರ ಮೋದಿ(Narendra Modi) ಒಂದೇ ತಿಂಗಳ ಅವಧಿಯಲ್ಲಿ ಮೂರು ಪ್ರಮುಖ ಜಾಗತಿಕ ಬಹುಪಕ್ಷೀಯ ಶೃಂಗಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಕಿರ್ಗಿಸ್ತಾನ್‌ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯೊಂದಿಗೆ ಆರಂಭವಾಗುವ ಈ ರಾಜತಾಂತ್ರಿಕ ಪ್ರಯಾಣವು, ನವದೆಹಲಿಯಲ್ಲಿ ನಡೆಯಲಿರುವ ಬ್ರಿಕ್ಸ್ (BRICS) ಶೃಂಗಸಭೆಯ ಮೂಲಕ ಸಾಗಿ, ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ (UNGA) ಭಾಷಣ ಮಾಡುವ ಮೂಲಕ ಮುಕ್ತಾಯಗೊಳ್ಳಲಿದೆ. SCO ಶೃಂಗಸಭೆ ಆಗಸ್ಟ್ 31 – ಸೆಪ್ಟೆಂಬರ್ 1, ಕಿರ್ಗಿಸ್ತಾನ್ ಮ್ಯಾರಥಾನ್ ರಾಜತಾಂತ್ರಿಕ ಕ್ಯಾಲೆಂಡರ್ ಕಿರ್ಗಿಸ್ತಾನ್‌ನ ಬಿಷ್ಕೆಕ್‌ನಲ್ಲಿ…

Read More

Gold Rates 27 July: ಚಿನ್ನದ ಬೆಲೆ ಗ್ರಾಮ್​ಗೆ 85 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 27th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 27: ವಾರಾಂತ್ಯದಲ್ಲಿ ಮತ್ತೆ ಶುರುವಾದ ಚಿನ್ನದ ಬೆಲೆ (Gold Price) ಏರಿಕೆಯ ಟ್ರೆಂಡ್ ಸೋಮವಾರವೂ ಮುಂದುವರಿದಿದೆ. ಇಂದು ಬಂಗಾರದ ದರ 85 ರೂಗಳಷ್ಟು ಏರಿಕೆಯಾಗಿದೆ. ವಿದೇಶಗಳಲ್ಲಿ ಕೆಲವೆಡೆ ಏರಿಕೆಯಾಗಿದೆ. ಇನ್ನೂ ಕೆಲವೆಡೆ ಕಡಿಮೆಗೊಂಡಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಇವತ್ತು ಯಾವುದೇ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,45,860 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ…

Read More

ಮಂಡ್ಯ: ಹೈವೇಗೆ ಉರುಳಿ ಬಿದ್ದ ಬಾಯ್ಲರ್ ಟ್ಯಾಂಕ್, ಮೈಸೂರು – ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್ – Kannada News | Mandya Highway Blocked After Massive Boiler Tank Falls on Mysuru Channarayapatna State Highway

ಮಂಡ್ಯ, ಜುಲೈ 27: ಮಂಡ್ಯ ಜಿಲ್ಲೆಯ ಮುರುಕನಹಳ್ಳಿ ಸಮೀಪ ಮೈಸೂರು-ಚನ್ನರಾಯಪಟ್ಟಣ ಹೆದ್ದಾರಿಯಲ್ಲಿ ಬೃಹತ್ ಬಾಯ್ಲರ್ ಟ್ಯಾಂಕ್ ಉರುಳಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ರಾಜಸ್ಥಾನದಿಂದ ನಂಜನಗೂಡು ಕೈಗಾರಿಕಾ ಪ್ರದೇಶಕ್ಕೆ ಸಾಗಿಸಲಾಗುತ್ತಿದ್ದ ಈ ಬಾಯ್ಲರ್ ಟ್ಯಾಂಕ್ ಹೊತ್ತ ಲಾರಿಯು ಮರಕ್ಕೆ ತಗುಲಿ ರಸ್ತೆಗೆ ಉರುಳಿಬಿದ್ದಿದೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಹೆದ್ದಾರಿಯು ಸಂಪೂರ್ಣವಾಗಿ ಬಂದ್ ಆಗಿದ್ದು, ಸ್ಥಳದಲ್ಲಿ ವಾಹನಗಳ ದೊಡ್ಡ ಸರತಿ ಸಾಲು ಉಂಟಾಗಿದೆ. ಘಟನೆಯ ನಂತರ ವಾಹನ ಸವಾರರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ರಸ್ತೆಯ ಮಧ್ಯೆ…

Read More

‘ಧೂಮ್ 4’ ವದಂತಿಗಳಿಗೆ ಕೊನೆಗೂ ಬ್ರೇಕ್ ಹಾಕಿದ ರಣಬೀರ್ ಕಪೂರ್

ಬಾಲಿವುಡ್ ಸ್ಟಾರ್ ನಟ ರಣಬೀರ್ ಕಪೂರ್ ಸದ್ಯ ತಮ್ಮ ಮೋಸ್ಟ್ ಅಡ್ವೆಂಚರಸ್ ಪ್ರಾಜೆಕ್ಟ್ ‘ರಾಮಾಯಣ’ ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ (SDCC) 2026 ಕಾರ್ಯಕ್ರಮದಲ್ಲಿ ನಿರ್ದೇಶಕ ನಿತೇಶ್ ತಿವಾರಿ, ನಿರ್ಮಾಪಕ ನಮಿತ್ ಮಲ್ಹೋತ್ರಾ ಹಾಗೂ ಸ್ಯಾಂಡಲ್‌ವುಡ್ ರಾಕಿಂಗ್ ಸ್ಟಾರ್ ಯಶ್ ಅವರೊಂದಿಗೆ ಭಾಗವಹಿಸಿ ಚಿತ್ರದ ಪ್ರಚಾರ ಮಾಡಿದ್ದರು. ಈ ಅದ್ಧೂರಿ ವೇದಿಕೆಯಲ್ಲಿ ರಣಬೀರ್ ಕಪೂರ್ ತಮ್ಮ ಮುಂಬರುವ ಸಿನಿಮಾಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ…

Read More

ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿ: ಇಬ್ಬರು ಸಾವು, ಐವರಿಗೆ ಗಂಭೀರ ಗಾಯ – Kannada News | Seattle Food Festival Shooting: 2 Dead, 5 Injured at Bite of Seattle Event

ವಾಷಿಂಗ್ಟನ್, ಜುಲೈ 27: ಅಮೆರಿಕದ ವಾಷಿಂಗ್ಟನ್ ರಾಜ್ಯದ ಸಿಯಾಟಲ್ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಸಿದ್ಧ ಆಹಾರ ಉತ್ಸವದಲ್ಲಿಸಂಭವಿಸಿದ ಸಾಮೂಹಿಕ ಗುಂಡಿನ ದಾಳಿ(Firing) ಕನಿಷ್ಠ ಇಬ್ಬರು ಮೃತಪಟ್ಟು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ನಗರದ ಪ್ರಖ್ಯಾತ ಪ್ರವಾಸಿ ತಾಣವಾದ ‘ಸ್ಪೇಸ್ ನೀಡಲ್’ ಬಳಿಯ ಸಿಯಾಟಲ್ ಸೆಂಟರ್‌ನಲ್ಲಿ ಈ ದುರಂತ ಸಂಭವಿಸಿದೆ. ವಾರ್ಷಿಕವಾಗಿ ನಡೆಯುವ ‘ಬೈಟ್ ಆಫ್ ಸಿಯಾಟಲ್’ ಆಹಾರ ಉತ್ಸವದ ವೇಳೆ ಸಂಜೆ ಸುಮಾರು 6 ಗಂಟೆಗೆ ಈ ಗುಂಡಿನ ಚಕಮಕಿ ನಡೆದಿದೆ. ಉತ್ಸವದಲ್ಲಿ ನೂರಾರು ಅಡುಗೆ ಮಳಿಗೆಗಳು ಹಾಗೂ ಸಂಗೀತ…

Read More

ಅವಕಾಶ​ ಕೈ ತಪ್ಪಿದಾಗ ಬೇಸರವಾಗುತ್ತೆ… ಕಂಬ್ಯಾಕ್​ಗೆ ಅಭಿಷೇಕ್ ಶರ್ಮಾ ಪಣ! – Kannada News | Abhishek Sharma Vows Strong Comeback After Zimbabwe Batting Slump

ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಬ್ಯಾಟಿಂಗ್‌ನಲ್ಲಿ ತೀವ್ರ ಹಿನ್ನಡೆ ಅನುಭವಿಸಿದ ಭಾರತದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಬ್ಯಾಟಿಂಗ್‌ನಲ್ಲಿ ವೈಫಲ್ಯ ಕಂಡರೂ, ಬೌಲಿಂಗ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಯುವ ಆಲ್ ರೌಂಡರ್, ಮುಂಬರುವ ದಿನಗಳಲ್ಲಿ “ಇನ್ನಷ್ಟು ಬಲಿಷ್ಠವಾಗಿ ಕಮ್‌ಬ್ಯಾಕ್” ಮಾಡುವ ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಝಿಂಬಾಬ್ವೆ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್​ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅಭಿಷೇಕ್ ಶರ್ಮಾ, ಅವಕಾಶಗಳು ಕೈ ತಪ್ಪಿದಾಗ ಬೇಸರವಾಗುತ್ತದೆ. ಇದಾಗ್ಯೂ ಮುಂಬರುವ…

Read More