ಮಂಡ್ಯ ವಿವಿಯ ಯುವಸಂಭ್ರಮಕ್ಕೆ ವರುಣನ ಅಡ್ಡಿ: ಮಳೆ ಅಬ್ಬರಕ್ಕೆ ವೇದಿಕೆಯೇ ನೆಲಸಮ – Kannada News | Mandya University Yuvasambrama Postponed After Storm Damages Event Stage
ಮಂಡ್ಯ, ಏಪ್ರಿಲ್ 30: ನಿನ್ನೆ (ಏಪ್ರಿಲ್ 29) ರಾತ್ರಿ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ನವ ವಸಂತ ಯುವಸಂಭ್ರಮ ಕಾರ್ಯಕ್ರಮಕ್ಕೂ ಮಳೆ ಅಡ್ಡಿಯಾಗಿದೆ. ಕಳೆದ ರಾತ್ರಿ ಬೀಸಿದ ಬಿರುಗಾಳಿ ಸಹಿತ ಮಳೆಯಿಂದಾಗಿ ಕಾರ್ಯಕ್ರಮಕ್ಕಾಗಿ ನಿರ್ಮಿಸಿದ್ದ ಬೃಹತ್ ಪೆಂಡಾಲ್ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಪಡಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಶಾಸಕ ರವಿ ಗಣಿಗ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿಗಳ ನಿರೀಕ್ಷೆಗೆ ತಕ್ಕಂತೆ ಕಾರ್ಯಕ್ರಮವನ್ನು ಮುಂದೊಂದು…