Bomb Threat: ವಿಧಾನಸಭಾ ಸ್ಪೀಕರ್ಗೆ ಬಾಂಬ್ ಬೆದರಿಕೆ, ಮೆಟ್ರೋ ನಿಲ್ದಾಣವನ್ನೂ ಸ್ಫೋಟಿಸುವುದಾಗಿ ಬಂತು ಇ-ಮೇಲ್
ನವದೆಹಲಿ, ಮಾರ್ಚ್ 24: ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬಾಂಬ್ ಬೆದರಿಕೆ(Bomb Threat) ಇ-ಮೇಲ್ ಬಂದಿದೆ. ವಿಧಾನಸಭೆ ಕಟ್ಟಡ ಮತ್ತು ದೆಹಲಿ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ದೆಹಲಿ ವಿಧಾನಸಭಾ ಸ್ಪೀಕರ್ ಕಚೇರಿಯ ಪ್ರಕಾರ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಅವರಿಗೂ ಬೆದರಿಕೆ ಹಾಕಲಾಗಿದೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೂ ಬೆದರಿಕೆ ಹಾಕಲಾಗಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು…