ಭಾನುವಾರ ಭರ್ಜರಿ ಗಳಿಕೆ ಮಾಡಿದ ‘ಕರಾವಳಿ’ ಸಿನಿಮಾ; ಒಟ್ಟೂ ಕಲೆಕ್ಷನ್ ಎಷ್ಟು? – Kannada News | Karavali Box Office Collection Raj B Shetty Starrer Nears 4 Crore Mark After Strong Weekend
ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದಾದ ‘ಕರಾವಳಿ’ (Karavali Movie) ಬಾಕ್ಸ್ ಆಫೀಸ್‌ನಲ್ಲಿ ಮೊದಲ ದಿನ ಸಾಧಾರಣ ಕಲೆಕ್ಷನ್ ಮಾಡಿತ್ತು. ಆದರೆ, ದಿನದಿಂದ ದಿನಕ್ಕೆ ಗಳಿಕೆಯಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಬಿಡುಗಡೆಯಾದ ಮೊದಲ ದಿನ ಕೇವಲ 68 ಲಕ್ಷ ರೂಪಾಯಿ ಗಳಿಸಿದ್ದ ಈ ಚಿತ್ರ, ಆ ಬಳಿಕ ಪ್ರೇಕ್ಷಕರಿಂದ ಸಿಕ್ಕ ಪಾಸಿಟಿವ್ ವಿಮರ್ಶೆಗಳ ಬೆಂಬಲದೊಂದಿಗೆ ಗಲ್ಲಾಪೆಟ್ಟಿಗೆಯಲ್ಲಿ ಅಬ್ಬರಿಸುತ್ತಿದೆ. ಸದ್ಯ ಚಿತ್ರಮಂದಿರಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾದ ಒಟ್ಟಾರೆ ಗಳಿಕೆ ಹೆಚ್ಚುತ್ತಿದೆ. ಸಿನಿಮಾದ ಒಟ್ಟೂ ಗಳಿಕೆ ನಾಲ್ಕು ಕೋಟಿ ರೂಪಾಯಿ…