CSK vs DC: ಸಿಎಸ್​ಕೆ ಪರ ಮೊದಲ ಅರ್ಧಶತಕ ಬಾರಿಸಿದ ಸಂಜು ಸ್ಯಾಮ್ಸನ್

CSK vs DC: ಸಿಎಸ್​ಕೆ ಪರ ಮೊದಲ ಅರ್ಧಶತಕ ಬಾರಿಸಿದ ಸಂಜು ಸ್ಯಾಮ್ಸನ್

ಈ ಆವೃತ್ತಿಯಿಂದ ಐಪಿಎಲ್​ನಿಂದ ಸಿಎಸ್​ಕೆ ತಂಡದ ಪರ ಆಡುತ್ತಿರುವ ಸಂಜು ಸ್ಯಾಮನ್ಸ್​ ಕೊನೆಗೂ ತಮ್ಮ ಲಯ ಕಂಡುಕೊಂಡಿದ್ದಾರೆ. ಆವೃತ್ತಿಯ ಮೊದಲ ಮೂರು ಪಂದ್ಯಗಳಲ್ಲಿ ನಿರಾಶೆ ಮೂಡಿಸಿದ ಸಂಜು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಆರಂಭದಿಂದಲೂ ತಾಳ್ಮೆಯ ಆಟ ಪ್ರದರ್ಶಿಸಿದ ಸಂಜು ಸ್ಯಾಮ್ಸನ್, ಮುಖೇಶ್ ಕುಮಾರ್ ಎಸೆದ ಇನ್ನಿಂಗ್ಸ್‌ನ ಒಂಬತ್ತನೇ ಓವರ್‌ನ ಮೊದಲ ಎಸೆತದಲ್ಲಿ ಸಿಂಗಲ್ ಪಡೆಯುವ ಮೂಲಕ ತಮ್ಮ ಅರ್ಧಶತಕ ಪೂರೈಸಿದರು.

ಸಂಜು ಕೇವಲ 26 ಎಸೆತಗಳಲ್ಲಿ ಒಟ್ಟು 9 ಬೌಂಡರಿಗಳ ಸಹಿತ ಸಿಎಸ್​ಕೆ ಪರ ತಮ್ಮ ಮೊದಲ ಅರ್ಧಶತಕ ಬಾರಿಸಿದರು. ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್‌ಮೆಂಟ್ ತನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಸಂಜು ಸ್ಯಾಮ್ಸನ್ ಈ ಅರ್ಧಶತಕ ಬಾರಿಸುವ ಮೂಲಕ ಉಳಿಸಿಕೊಂಡಿದ್ದಾರೆ. ರುತುರಾಜ್ ಔಟಾದ ನಂತರ ಒತ್ತಡಕ್ಕೆ ಮಣಿಯದೆ ಜವಾಬ್ದಾರಿಯುತ ಇನ್ನಿಂಗ್ಸ್ ಆಡುತ್ತಿರುವ ಸಂಜು ಶತಕದತ್ತ ಸಾಗುತ್ತಿದ್ದಾರೆ.

Source link

ಮೋದಿಯಿಂದ ಹೊಸ ಪ್ರಯೋಗ; ಬಂಗಾಳ ರ‍್ಯಾಲಿ ವೇಳೆ ವ್ಲಾಗರ್ ಆದ ಪ್ರಧಾನಿ

ನವದೆಹಲಿ, ಏಪ್ರಿಲ್ 11: ಪಶ್ಚಿಮ ಬಂಗಾಳದ ಪುರ್ಬಾ ವರ್ಧಮಾನ್‌ನಲ್ಲಿ ತಮ್ಮ ರ‍್ಯಾಲಿಗೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನರನ್ನು ಉದ್ದೇಶಿಸಿ ಒಂದು ವಿಡಿಯೋ ಮಾಡಿ ರಿಲೀಸ್ ಮಾಡಿದ್ದಾರೆ. ಈ ವಿಡಿಯೋ ಮೂಲಕ ಪ್ರಧಾನಿ ಮೋದಿ (PM Modi) ವ್ಲಾಗರ್ ಆಗಿ ಬದಲಾಗಿದ್ದಾರೆ. ಪಶ್ಚಿಮ ಬಂಗಾಳದ ಹೆಲಿಪ್ಯಾಡ್‌ನಲ್ಲಿ ನೆರೆದಿದ್ದ ದೊಡ್ಡ ಜನಸಮೂಹವನ್ನು ಅದ್ಭುತ ದೃಶ್ಯ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಬಿಸಿಲಿನ ಬೇಗೆಯ ಹೊರತಾಗಿಯೂ ಜನರ ಉತ್ಸಾಹ ಕಡಿಮೆಯಾಗದೆ ಹಾಗೆಯೇ ಉಳಿದಿದೆ ಎಂದು ಅವರು ಹೇಳಿದ್ದಾರೆ.

ಬಿಸಿಲಿನ ಬೇಗೆಯ ಹೊರತಾಗಿಯೂ ಮಧ್ಯಾಹ್ನಕ್ಕೂ ಮೊದಲೇ ಹೆಲಿಪ್ಯಾಡ್‌ನಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರು. ಇದು ಈ ದಿನದ ಮೋದಿಯವರ ಮೊದಲ ಸಭೆಯಾಗಿದ್ದು, ಅವರು ಸ್ಥಳಕ್ಕೆ ಬರುವ ಮೊದಲೇ ಹೆಚ್ಚಿನ ಸಂಖ್ಯೆಯ ಜನರು ಅವರಿಗಾಗಿ ಕಾಯುತ್ತಿದ್ದರು ಎಂಬುದನ್ನು ಮೋದಿ ತಮ್ಮ ವಿಡಿಯೋದಲ್ಲಿ ವಿವರಿಸಿದ್ದಾರೆ. ಈ ರೀತಿ ಮೋದಿ ತಮ್ಮ ಚುನಾವಣಾ ರ‍್ಯಾಲಿಯ ನೇರಪ್ರಸಾರ ಮಾಡುತ್ತಾ, ಲೈವ್ ಕಮೆಂಟರಿ ನೀಡಿದ್ದು ಇದೇ ಮೊದಲು. ಈ ಮೂಲಕ ಪ್ರಧಾನಿ ಮೋದಿ ಹೊಸ ಪ್ರಯೋಗ ಮಾಡಿದ್ದಾರೆ.


ಇದನ್ನೂ ಓದಿ: ಬಂಗಾಳಿಗಳನ್ನು ಅಲ್ಪಸಂಖ್ಯಾತರಾಗಲು ಬಿಡುವುದಿಲ್ಲ; ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಭರವಸೆ

ಪುರ್ಬಾ ಬರ್ಧಮಾನ್‌ನಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಗೆ ಮುನ್ನ ಪ್ರಧಾನಿ ಮೋದಿ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಈ ಸಣ್ಣ ವೀಡಿಯೊ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದಾರೆ. ಇದು ಭಾರೀ ವೈರಲ್ ಆಗಿದೆ. ಈ ಕ್ಲಿಪ್ ಅನ್ನು ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷ: ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ; ಬೆಳ್ಳಿಹಬ್ಬದ ಮೂಲಕ ಜಿಬಿಎ ಚುನಾವಣೆಗೆ ರಣಕಹಳೆ

ಬೆಂಗಳೂರು, ಏಪ್ರಿಲ್​ 11: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯನ್ನೇ ಟಾರ್ಗೆಟ್ ಮಾಡಿ ಬೆಂಗಳೂರಿನಲ್ಲಿ ಜೆಡಿಎಸ್​ ಪಕ್ಷ ಶಕ್ತಿ ಪ್ರದರ್ಶನ ಮಾಡಿದೆ. ಜೆಡಿಎಸ್ (JDS) 25ನೇ ವರ್ಷದ ಬೆಳ್ಳಿ ಹಬ್ಬದ ಆಚರಣೆ ನೆಪದಲ್ಲಿ ಸುಮಾರು 50 ಸಾವಿರಕ್ಕೆ ಹೆಚ್ಚು ಕಾರ್ಯಕರ್ತರನ್ನ ಸೇರಿಸುವ ಮೂಲಕ ಬೆಂಗಳೂರಿನಲ್ಲಿ ಜೆಡಿಎಸ್ ಇದೆಯಾ ಎಂಬ ಟೀಕೆಗಳಿಗೆ ದಳಪತಿಗಳು ಉತ್ತರ ನೀಡಿದ್ದಾರೆ.

ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷ

ಪ್ರಾದೇಶಿಕ ಪಕ್ಷ ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷವಾಗಿದೆ‌. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಕೊಮ್ಮಗಟದಲ್ಲಿ ಬೃಹತ್ ಸಮಾವೇಶ ಮಾಡಲಾಗಿದ್ದು, ಆ ಮೂಲಕ ದಳಪತಿಗಳು ಭರ್ಜರಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ, ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರನ್ನ ಸೇರಿಸಿ ಜಿಬಿಎ ಚುನಾವಣೆಗೆ ದಳಪತಿಗಳು ರಾಷ್ಟ್ರೀಯ ಪಕ್ಷಗಳಿಗಿಂತ ಮುಂಚಿತವಾಗಿ ರಣ ಕಹಳೆ ಊದಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಸಮಾವೇಶ ಉದ್ಘಾಟಿಸಿದರೆ, ಇಡೀ ದಳಪತಿಗಳ ಸೈನ್ಯವೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಯುದ್ಧ ಸಾರಿದೆ.

ಕುಮಾರಸ್ವಾಮಿ ಸರ್ಕಾರ ತೆಗೆದಿದ್ದು ಕಾಂಗ್ರೆಸ್​: ಹೆಚ್​ಡಿ ದೇವೇಗೌಡ ಕಿಡಿ

ಒಂದೆಡೆ 93ರ ಹರೆಯದಲ್ಲೂ ಗರ್ಜಿಸಿದ ಹೆಚ್​ಡಿ ದೇವೇಗೌಡ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು. ಮುಸ್ಲಿಂ ಲೀಡರ್ ಗೆಲ್ಲಿಸುವುದಕ್ಕೆ ದರಿದ್ರ ನಾರಾಯಣ ರ‍್ಯಾಲಿ ಮಾಡಿದೆ. ಆ ರ‍್ಯಾಲಿಗೆ ಸಿದ್ದರಾಮಯ್ಯ ಬರಲಿಲ್ಲ. ಕುಮಾರಸ್ವಾಮಿ ಸರ್ಕಾರ ತೆಗೆದಿದ್ದು ಕಾಂಗ್ರೆಸ್​ನವರು. ಇವರೆಲ್ಲಾ ಮೋದಿಯವರನ್ನ ನೋಡಿ ಕಲಿಬೇಕು. ನಿತೀಶ್ ಕುಮಾರ್ 20 ವರ್ಷ ಬಿಹಾರ ಸಿಎಂ ಆಗಿದ್ದರು. ಅವರಿಗೆ ಶಕ್ತಿ ಕೊಟ್ಟಿದ್ದು ಮೋದಿ. ಮೋದಿಯವರು ಜೊತೆಗೆ ಬನ್ನಿ ಎಂದು ಕರೆದರು, ನಾನು ಓಕೆ ಎಂದೆ. ನಮಗೆ ಕಾಂಗ್ರೆಸ್ ಜೊತೆ ಇದ್ದು ಏಟಿನ ಮೇಲೆ ಏಟು ತಿಂದಿದ್ದೇವೆ. ಹಾಗಾಗಿ ಮೋದಿ ಜೊತೆಗೆ ಹೋಗಲು ಕುಮಾರಸ್ವಾಮಿಗೆ ಒಪ್ಪಿಗೆ ಕೊಟ್ಟೆ. ಈಗ ಕೇಂದ್ರ ಸಚಿವರಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದಾರೆ. ಆದರೆ ಕರ್ನಾಟಕದಲ್ಲಿ ಸರ್ಕಾರ ಕುಮಾರಸ್ವಾಮಿಗೆ ಸಹಕಾರ ಕೊಡುತ್ತಿಲ್ಲ ಅಂತ ವಾಗ್ದಾಳಿ ಮಾಡಿದ್ದಾರೆ.

ಬೆಂಗಳೂರಿನ ಜನರನ್ನ ಪ್ರತಿದಿನ ಸರ್ಕಾರ ಲೂಟಿ ಮಾಡುತ್ತಿದೆ: ನಿಖಿಲ್ ಕುಮಾರಸ್ವಾಮಿ ಆಕ್ರೋಶ

ಸಮಾವೇಶದಲ್ಲಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ಮಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜಿಬಿಎ ಮಾಡಿರುವುದೇ ಸರ್ಕಾರದ ಸಾಧನೆಯಾಗಿದೆ‌. ಬೆಂಗಳೂರಿನ ಅಭಿವೃದ್ಧಿಗಾಗಿ ಹಲವಾರು ದೇವೇಗೌಡ್ರು, ಕುಮಾರಸ್ವಾಮಿ ಹಲವು ಯೋಜನೆಗಳನ್ನ ಮಾಡಿದ್ದರು. ಇದನ್ನ ಜನರು ಮರೆಯಬಾರದು. ಕಾಂಗ್ರೆಸ್ ತಂದಿರುವ ಜಿಬಿಎ ಅಂದರೆ ಏನು ಗೊತ್ತಾ ಎಂದು ಪ್ರಶ್ನಿಸಿದ ನಿಖಿಲ್,  ಜಿ ಅಂದರೆ ಗಾರ್ಬೇಜ್, ಬಿ ಅಂದರೆ ಬ್ಯಾಡ್ ರೋಡ್ ಮತ್ತು ಎ ಅಂದರೆ ಅಕೌಂಟ್ ಸ್ಕ್ಯಾಮ್​. ಇವಿಷ್ಟೇ ಕಾಂಗ್ರೆಸ್ ಸಾಧನೆ. ಅಷ್ಟೇ ಅಲ್ಲ ಬೆಂಗಳೂರಿನ ಸಮಸ್ಯೆ ಹೇಳಿದ ಉದ್ಯಮಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಬೆದರಿಕೆ ಹಾಕಿದ್ದಾರೆ ಎಂದು ಅವರ ವಿರುದ್ಧ ಗುಡುಗಿದರು.

ಗ್ರಹಣ ಬಿಡಿಸಲು ನನ್ನ ನಾಯಕತ್ವಕ್ಕೆ ಅವಕಾಶ ಕೊಡಿ: ಹೆಚ್​​ಡಿ ಕುಮಾರಸ್ವಾಮಿ

ಇನ್ನು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಬೆಂಗಳೂರಿನ ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿದರು. ಮೆಟ್ರೋ, ಫ್ಲೈ ಓವರ್, ಕಾವೇರಿ ಯೋಜನೆ ತಂದಿದ್ದು ದೇವೇಗೌಡರು ಮತ್ತು ನಾವು. ಆದರೆ ಈ ಸರ್ಕಾರ ಸ್ಕೈಡೆಕ್ ಹೆಸರಲ್ಲಿ ಲೂಟಿ ಮಾಡುತ್ತಿದೆ. ಬೆಂಗಳೂರಿಗೆ ಹಿಡಿದಿರುವ ಗ್ರಹಣ ಬಿಡಿಸಲು ನನ್ನ ನಾಯಕತ್ವಕ್ಕೆ ಒಂದು ಅವಕಾಶ ಕೊಡಿ ಎಂದು ಹೆಚ್​​ಡಿ ಕುಮಾರಸ್ವಾಮಿ ಭಾವುಕವಾಗಿ ಮನವಿ ಮಾಡಿದರು.

ಇದನ್ನೂ ಓದಿ: ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅಚ್ಚರಿ ಮಾತು

ಜಿಬಿಎ ಎಲೆಕ್ಷನ್ ಘೋಷಣೆಗೂ ಮುಂಚಿತವಾಗಿಯೇ ಬೆಂಗಳೂರಿನ ಗದ್ದುಗೆ ಹಿಡಿಯುವುದಕ್ಕೆ ದಳಪತಿಗಳು ಕಸರತ್ತು ಆರಂಭಿಸಿದ್ದು, ಪ್ರತಿ ವಾರ್ಡ್​ನಲ್ಲೂ ಒಂದು ಗಂಟೆ ಕೆಲಸ ಮಾಡಬೇಕಿದೆ ಎಂಬ ಸಂದೇಶ ನೀಡಿದ್ದಾರೆ. ಒಟ್ಟಿನಲ್ಲಿ ರಾಷ್ಟ್ರೀಯ ಪಕ್ಷಗಳಿಗಿಂತ ಮುಂಚಿತವಾಗಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಶದ ಮೂಲಕ ಸಂಘಟನೆಗೆ ಚಾಲನೆ ನೀಡಿದ ದಳಪತಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ಮತದಾರ ಎಷ್ಟರಮಟ್ಟಿಗೆ ಕೈಹಿಡಿಯುತ್ತಾನೆ ಕಾದು ನೋಡಬೇಕಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಿಬಿಐ ಅಧಿಕಾರಿ ಸೋಗಿನಲ್ಲಿ ಉದ್ಯಮಿಗೆ ಗಾಳ: 30 ದಿನಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ 15 ಕೋಟಿ ಲೂಟಿ!

ಬೆಂಗಳೂರು,ಏ. 11 : ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ವಂಚನೆ ಜಾಲಗಳು ಹೆಚ್ಚಾಗಿದೆ. ಸಾಮಾನ್ಯರಿಂದ ಹಿಡಿದು, ದೊಡ್ಡ ವ್ಯಕ್ತಿಗಳನ್ನು ಈ ಜಾಲದಲ್ಲಿ ಸಿಲುಕಿಸಲಾಗುತ್ತಿದೆ. ಇದೀಗ ಸಿಬಿಐ (CBI) ಅಧಿಕಾರಿಗಳೆಂದು ನಂಬಿಸಿ ಉದ್ಯಮಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಭೀತಿಯಲ್ಲಿಟ್ಟು ಬರೋಬ್ಬರಿ 15 ಕೋಟಿ 45 ಲಕ್ಷ ರೂಪಾಯಿ ದೋಚಿದ್ದ ಇಬ್ಬರು ಆರೋಪಿಗಳನ್ನು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಮೂಲದ ವೆಂಕಟೇಶ್ ಶರತ್ ನಾಯಕ್ ಮತ್ತು ಡೆವಗತ್ ಶ್ರೀಪಾದ್ ನಾಯಕ್ ಬಂಧಿತ ಆರೋಪಿಗಳು.

ಬೆಳಗಾವಿ ಮೂಲದ ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವರಿಗೆ ಕಳೆದ ಫೆಬ್ರವರಿ 7 ರಂದು ಅಪರಿಚಿತ ಕರೆ ಬಂದಿತ್ತು. ಕರೆ ಮಾಡಿದ ವ್ಯಕ್ತಿ ತನ್ನನ್ನು ಸಿಬಿಐ ನಿರ್ದೇಶಕ ಕೆ. ಸುಬ್ರಹ್ಮಣ್ಯಂ ಎಂದು ಪರಿಚಯಿಸಿಕೊಂಡಿದ್ದ. “ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್‌ಗಳು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನರೇಶ್ ಗೋಯಲ್ ಅವರಿಗೆ ಸಂಬಂಧಿಸಿವೆ. ನಿಮ್ಮ ಖಾತೆಯಿಂದ 25 ಲಕ್ಷ ರೂ. ವರ್ಗಾವಣೆ ಆಗಿದ್ದು, ನಿಮಗೆ 5 ಲಕ್ಷ ರೂ. ಕಮಿಷನ್ ಸಂದಾಯವಾಗಿದೆ” ಎಂದು ಹೆದರಿಸಿದ್ದ.

ಬಂಧನದ ಭೀತಿ ಹುಟ್ಟಿಸಿದ ವಂಚಕರು, ಉದ್ಯಮಿಯನ್ನು ವಿಡಿಯೋ ಕಾಲ್ ಮೂಲಕ ಸುಮಾರು ಒಂದು ತಿಂಗಳ ಕಾಲ (30 ದಿನಗಳು) ನಿರಂತರವಾಗಿ ಕಣ್ಗಾವಲಿನಲ್ಲಿಟ್ಟಿದ್ದರು (Digital Arrest). ತನಿಖೆಗೆ ಸಹಕರಿಸದಿದ್ದರೆ ಜೈಲಿಗೆ ಹಾಕುವುದಾಗಿ ಬೆದರಿಸಿ, ಫೆಬ್ರವರಿ 9 ರಂದು ಅಜಿತ್ ಗೋಪಾಲಕೃಷ್ಣ ಅವರಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ 15,45,00,000 ರೂಪಾಯಿಗಳನ್ನು RTGS ಮೂಲಕ ವರ್ಗಾಯಿಸಿಕೊಂಡಿದ್ದರು.

ಇದನ್ನೂ ಓದಿ: ಈ ತಕ್ಷಣವೇ ರಾಜೀನಾಮೆ ನೀಡಿ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ಗೆ ಸೂಚನೆ! ಮುಂದಿನ ತಲೆದಂಡ ಸಚಿವ ಜಮೀರ್?

ವಂಚನೆಗೊಳಗಾದ ಉದ್ಯಮಿ ಬೆಳಗಾವಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಸೈಬರ್ ಕಮಾಂಡ್ ಡಿಜಿಪಿ ಪ್ರಣವ್ ಮೋಹಂತಿ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದ ಸಿಸಿಬಿಯ ಸೈಬರ್ ವಿಭಾಗದ (CCU) ತಂಡ, ಆರೋಪಿಗಳು ಬಳಸಿದ್ದ 10ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಪತ್ತೆಹಚ್ಚಿದೆ. ಹೈದರಾಬಾದ್‌ನ ಗಚ್ಚಿಬೌಲಿ ಹಾಸ್ಟೆಲ್‌ನಲ್ಲಿ ಅಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, 2 ಕೋಟಿ ರೂಪಾಯಿ ಹಣವನ್ನು ಫ್ರೀಜ್ ಮಾಡಲಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಸದ್ಯ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಮುಂದುವರಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ಗೆಲುವಿನ ಬೆನ್ನಲ್ಲೆ ಆರ್​​ಎಸ್​​ಎಸ್ ಕಚೇರಿಗೆ ರಣ್ವೀರ್ ಸಿಂಗ್ ಭೇಟಿ

ರಣ್ವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಕಳೆದ ತಿಂಗಳು ಬಿಡುಗಡೆ ಆಗಿದ್ದು ಚಿತ್ರಮಂದಿರದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ಭಾರತದಲ್ಲಿ 1000 ಕೋಟಿ ಗಳಿಕೆಯನ್ನು ದಾಟಿದ್ದು, ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇತ್ತೀಚೆಗಷ್ಟೆ ಚುನಾವಣಾ ಪ್ರಚಾರವೊಂದರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸಿನಿಮಾದ ಬಗ್ಗೆ ಧನಾತ್ಮಕವಾಗಿ ಮಾತನಾಡಿದ್ದಾರೆ. ಇದೆಲ್ಲದರ ಬೆನ್ನಲ್ಲೆ ನಟ ರಣ್ವಿರ್ ಸಿಂಗ್ ಆರ್​​ಎಸ್​​ಎಸ್ ಕಚೇರಿಗೆ ಭೇಟಿ ನೀಡಿದ್ದು ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದ್ದಾರೆ.

ನಾಗ್ಪುರದ ರೇಶಿಮ್‌ಬಾಗ್‌ನಲ್ಲಿರುವ ಡಾ ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ ರಣ್​​ವೀರ್ ಸಿಂಗ್, ಆರ್‌ಎಸ್‌ಎಸ್ ಸಂಸ್ಥಾಪಕ ಕೆಬಿ ಹೆಡ್ಗೆವಾರ್ ಮತ್ತು ಎಂಎಸ್ ಗೋಲ್ವಾಲ್ಕರ್ ಅವರ ಸ್ಮಾರಕಗಳಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಪ್ರತಿನಿಧಿಗಳು ರಣವೀರ್ ಅವರಿಗೆ ಹಿಂದುತ್ವ ಸಂಘಟನೆಯ ಮೊದಲ ಇಬ್ಬರು ಮುಖ್ಯಸ್ಥರ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಸ್ಮೃತಿ ಮಂದಿರದ ಇತಿಹಾಸ ತಿಳಿಸಿಕೊಟ್ಟಿದ್ದಾರೆ. ರಣವೀರ್ ಸಿಂಗ್ ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಅವರ ಸಿನಿಮಾ ಮತ್ತು ಸಂಘದ ಸೇವಾ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯಿತು ಎನ್ನಲಾಗಿದೆ.

ಇದನ್ನೂ ಓದಿ:‘ಧುರಂಧರ್’ ನಾಯಕಿಗೆ ಭರ್ಜರಿ ಅವಕಾಶ, ಲಿಜೆಂಡರಿ ನಟಿಯ ಪಾತ್ರದಲ್ಲಿ ಸಾರಾ

ಆರ್​​ಎಸ್​​ಎಸ್​​ನ ಕಾರ್ಯಕ್ರಮಗಳಿಗೆ ಬಾಲಿವುಡ್​​ನ ಕೆಲವು ಸೆಲೆಬ್ರಿಟಿಗಳು ಹೋಗಿ ಬರುತ್ತಲೇ ಇರುತ್ತಾರೆ. ಇತ್ತೀಚೆಗಷ್ಟೆ ಸಂಘದ 100ನೇ ವರ್ಷದ ಕಾರ್ಯಕ್ರಮದ ವೇಳೆ ಸಲ್ಮಾನ್ ಖಾನ್, ರಣ್​​ಬೀರ್ ಕಪೂರ್, ವಿಕ್ಕಿ ಕೌಶಲ್, ಶಿಲ್ಪಾ ಶೆಟ್ಟಿ, ಅನನ್ಯಾ ಪಾಂಡೆ, ಪಾಕ್ ಮೂಲದ ಗಾಯಕ ಅದ್ನಾನ್ ಸಮಿ ಇನ್ನೂ ಹಲವು ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಮೋಹನ್ ಭಾಗವತ್ ಹಾಗೂ ಇನ್ನಿತರೆ ಆರ್​​ಎಸ್​​ಎಸ್ ಮುಖಂಡರ ಭಾಷಣಗಳನ್ನು ಆಲಿಸಿದರು. ಇದೀಗ ರಣ್​ವೀರ್ ಸಿಂಗ್ ಸಹ ಆರ್​​ಎಸ್​​ಎಸ್ ಕಚೇರಿಗೆ ಭೇಟಿ ನೀಡಿದ್ದಾರೆ.

ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಗಳಿಕೆ ಮಾಡುವ ಮೂಲಕ ದಾಖಲೆ ನಿರ್ಮಿಸಿದೆ. ಸಿನಿಮಾವು ಬಿಜೆಪಿ ಪರವಾದ ವಿಚಾರಗಳನ್ನು ಒಳಗೊಂಡಿದೆ ಎಂದು ಒಂದು ವರ್ಗ ಆರೋಪ ಮಾಡುತ್ತಿದೆ. ಆದರೆ ಇದನ್ನು ನಿರ್ದೇಶಕ ಆದಿತ್ಯ ಧರ್ ನಿರಾಕರಿಸಿದ್ದಾರೆ. ‘ಧುರಂಧರ್ 2’ ಸಿನಿಮಾವು ಭಾರತದ ಸೈನಿಕನೊಬ್ಬ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರನ್ನು ಮಟ್ಟ ಹಾಕುವ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ರಣ್​​ವೀರ್ ಸಿಂಗ್ ಜೊತೆಗೆ ಆರ್ ಮಾಧವನ್, ಅರ್ಜುನ್ ರಾಂಪಾಲ್, ಸಾರಾ ಅರ್ಜುನ್, ಅಕ್ಷಯ್ ಖನ್ನಾ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

PBKS vs SRH: ಪಂಜಾಬ್​ ಅಜೇಯ ಓಟ; ಸನ್‌ರೈಸರ್ಸ್​ಗೆ ಮೂರನೇ ಸೋಲು

ಐಪಿಎಲ್ 2026 (IPL 2026) ಟೂರ್ನಮೆಂಟ್‌ನ 17 ನೇ ಪಂದ್ಯದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ (SRH vs PBKS) ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 219 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 6 ವಿಕೆಟ್‌ಗಳ ಜಯ ಸಾಧಿಸಿತು. ಎಂದಿನಂತೆ ಈ ಪಂದ್ಯದಲ್ಲೂ ಸನ್‌ರೈಸರ್ಸ್ ಹೈದರಾಬಾದ್‌ನ ಬೌಲಿಂಗ್ ತೀರ ಕಳಪೆಯಾಗಿತ್ತು. ಹೀಗಾಗಿ ಪಂಜಾಬ್ ಕಿಂಗ್ಸ್ ಪವರ್‌ಪ್ಲೇನಲ್ಲಿಯೇ ಅರ್ಧದಷ್ಟು ಪಂದ್ಯವನ್ನು ಗೆದ್ದುಕೊಂಡಿತ್ತು. ಅಂತಿಮವಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸುವ ಮೂಲಕ, ಪಂಜಾಬ್ ಕಿಂಗ್ಸ್ ಟೂರ್ನಿಯಲ್ಲಿ ತಮ್ಮ ಮೂರನೇ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ, ಪಂಜಾಬ್ ಕಿಂಗ್ಸ್ 7 ಅಂಕಗಳನ್ನು ಹೊಂದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ತಲುಪಿದರೆ, ರಾಜಸ್ಥಾನ ರಾಯಲ್ಸ್ 8 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ.

ಹೈದರಾಬಾದ್​ಗೆ ಅಬ್ಬರದ ಆರಂಭ

ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಜೋಡಿ ತಂಡಕ್ಕೆ ಆಕ್ರಮಣಕಾರಿ ಆರಂಭ ನೀಡಿತು. ಈ ಜೋಡಿ ಮೊದಲ ವಿಕೆಟ್‌ಗೆ 120 ರನ್‌ಗಳ ಜೊತೆಯಾಟ ನೀಡಿತು. ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ 74 ರನ್ ಗಳಿಸಿದರೆ, ಟ್ರಾವಿಸ್ ಹೆಡ್ 23 ಎಸೆತಗಳಲ್ಲಿ 38 ರನ್ ಗಳಿಸಿದರು. ಆದಾಗ್ಯೂ ಇವರಿಬ್ಬರ ವಿಕೆಟ್ ಪತನದ ಬಳಿಕ ಸನ್​ರೈಸರ್ಸ್​ ಬ್ಯಾಟಿಂಗ್ ಕುಸಿಯಿತು. ನಾಯಕ ಇಶಾನ್ ಕಿಶನ್ 17 ಎಸೆತಗಳಲ್ಲಿ 27 ರನ್ ಗಳಿಸಿದರೆ, ಹೆನ್ರಿಕ್ ಕ್ಲಾಸೆನ್ 33 ಎಸೆತಗಳನ್ನು ಎದುರಿಸಿ 39 ರನ್ ಗಳಿಸಿದರು. ಇದು ರನ್ ರೇಟ್ ಹೆಚ್ಚಿಸುವಲ್ಲಿ ಹೆಚ್ಚು ಸಹಾಯ ಮಾಡಲಿಲ್ಲ. ಅನಿಕೇತ್ ವರ್ಮಾ 18 ರನ್ ಗಳಿಸಿದರೆ, ಸಲೀಲ್ ಅರೋರಾ 9 ರನ್ ಗಳಿಸಿದರು. ನಿತೀಶ್ ಕುಮಾರ್ ರೆಡ್ಡಿ ಔಟಾಗದೆ 0 ರನ್ ಮತ್ತು ಹರೀಶ್ ದುಬೆ ಔಟಾಗದೆ 1 ರನ್ ಗಳಿಸಿದರು.

PBKS vs SRH IPL 2026 Highlights: ಸನ್​ರೈಸರ್ಸ್ ವಿರುದ್ಧ ಪಂಜಾಬ್​ಗೆ 6 ವಿಕೆಟ್ ಜಯ

ಪಂಜಾಬ್ ಪರ ಮೂವರ ಅರ್ಧಶತಕ

220 ರನ್​ಗಳ ಗುರಿ ಬೆನ್ನಟ್ಟಿದ ಪಂಜಾಬ್ ಪರ ಪ್ರಿಯಾಂಶ್ ಆರ್ಯ ಮತ್ತು ಪ್ರಭ್ಸಿಮ್ರಾನ್ ಸಿಂಗ್ ಜೋಡಿ ಮೊದಲ ವಿಕೆಟ್‌ಗೆ 6.2 ಓವರ್‌ಗಳಲ್ಲಿ 99 ರನ್‌ಗಳ ಪಾಲುದಾರಿಕೆಯನ್ನು ನೀಡಿತು. ಪ್ರಿಯಾಂಶ್ ಆರ್ಯ 20 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ಗಳೊಂದಿಗೆ 57 ರನ್ ಗಳಿಸಿದರೆ, ಪ್ರಭ್ಸಿಮ್ರಾನ್ ಸಿಂಗ್ 25 ಎಸೆತಗಳಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ 51 ರನ್ ಬಾರಿಸಿದರು. ಕೂಪರ್ ಕೊನೊಲಿ ಕೇವಲ 11 ರನ್‌ಗಳಿಗೆ ಔಟಾದರು. ಅದರ ನಂತರ, ನಾಯಕ ಶ್ರೇಯಸ್ ಅಯ್ಯರ್ ಮತ್ತು ನೆಹಾಲ್ ವಧಾರ ಇನ್ನಿಂಗ್ಸ್ ಜವಾಬ್ದಾರಿ ವಹಿಸಿಕೊಂಡರು. ಇಬ್ಬರ ಅರ್ಧಶತಕದ ಪಾಲುದಾರಿಕೆಯಿಂದಾಗಿ ಪಂಜಾಬ್‌ನ ಗೆಲುವಿನ ಹಾದಿ ಸುಲಭವಾಯಿತು. ಶ್ರೇಯಸ್ ಅಯ್ಯರ್ 24 ಎಸೆತಗಳಲ್ಲಿ ಅರ್ಧಶತಕ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡುವಲ್ಲಿ ಅಮೂಲ್ಯ ಕೊಡುಗೆ ನೀಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಂಗಾಳದ ಸಿಲಿಗುರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ; ಜನರಿಂದ ಜೈ ಶ್ರೀರಾಮ್ ಘೋಷಣೆ

ಸಿಲಿಗುರಿ, ಏಪ್ರಿಲ್ 11: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Modi) ಅವರು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಈ ರೋಡ್ ಶೋ ಪಶ್ಚಿಮ ಬಂಗಾಳದಲ್ಲಿ ಭಾರಿ ಜನಸಮೂಹವನ್ನು ಆಕರ್ಷಿಸಿತು. ಪ್ರಧಾನ ಮಂತ್ರಿಯನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಸಿಲಿಗುರಿಯ ಬೀದಿಗಳು ತುಂಬಿ ತುಳುಕುತ್ತಿದ್ದವು. ಅಲ್ಲಿ ಸೇರಿದ್ದ ಜನರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ, ಕೇಸರಿ ಬಾವುಟಗಳನ್ನು ಹಾರಿಸುತ್ತಾ ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು. ಈ ರೋಡ್ ಶೋ ಬಂಗಾಳದಲ್ಲಿ ಚುನಾವಣೆಗೂ ಮುಂಚಿತವಾಗಿ ಒಂದು ಪ್ರಮುಖ ರಾಜಕೀಯ ಶಕ್ತಿ ಪ್ರದರ್ಶನವಾಗಿ ಹೊರಹೊಮ್ಮಿದೆ. ಮಾರ್ಗದುದ್ದಕ್ಕೂ ಬಿಜೆಪಿ ಬೆಂಬಲಿಗರು ಸಾಲುಗಟ್ಟಿ ನಿಂತು, ಧ್ವಜಗಳನ್ನು ಬೀಸುತ್ತಾ ಮತ್ತು ಘೋಷಣೆಗಳನ್ನು ಕೂಗುತ್ತಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

CSK vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Chennai Super Kings vs Delhi Capitals IPL 2026 Live Cricket Score CSK vs DC Match on 11th April latest news in Kannada

ಐಪಿಎಲ್ 2026 ರ 18 ನೇ ಪಂದ್ಯವು ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಈ ಪಂದ್ಯವನ್ನು ತಮ್ಮ ತವರು ಮೈದಾನವಾದ MA ಚಿದಂಬರಂ ಕ್ರೀಡಾಂಗಣದಲ್ಲಿ ಆಡುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಈ ಋತುವಿನ ಮೊದಲ ಗೆಲುವಿಗಾಗಿ ಕಾಯುತ್ತಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಮೂರನೇ ಗೆಲುವಿನ ನಿರೀಕ್ಷೆಯಲ್ಲಿದೆ.

Source link

ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು

ಬೆಂಗಳೂರು, ಏಪ್ರಿಲ್​ 11: ಮಧ್ಯಪ್ರಾಚ್ಯದಲ್ಲಿ ಕದನ ವಿರಾಮ ಘೋಷಣೆಯಾದ ನಂತರ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಆಗಿದೆ. ಈ ಹಿಂದೆ ಯುದ್ಧದ ಸಂದರ್ಭದಲ್ಲಿ ಚಿನ್ನದ ಬೆಲೆ ಕಡಿಮೆ ಆಗಿತ್ತು. ಆದರೆ ಈಗ ಏರಿಕೆ ಕಂಡಿರುವುದು ಗ್ರಾಹಕರು ಬೇಜಾರು ಆಗಿದ್ದಾರೆ. ಕಳೆದ ಮೂರು ವಾರಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಸುಮಾರು 11 ಸಾವಿರ ರೂಪಾಯಿಗಳಷ್ಟು ವ್ಯತ್ಯಾಸ ಕಂಡುಬಂದಿದೆ. ಅಕ್ಷಯ ತೃತೀಯ ಸಮೀಪಿಸುತ್ತಿರುವ ಕಾರಣ, ಅನೇಕ ಗ್ರಾಹಕರು ಬೆಲೆ ಏರಿಕೆಯ ನಡುವೆಯೂ ಚಿನ್ನ ಖರೀದಿಗೆ ಮುಂದಾಗಿದ್ದಾರೆ. ಭವಿಷ್ಯದಲ್ಲಿ ಮತ್ತಷ್ಟು ಏರಿಕೆಯಾಗಬಹುದು ಎಂಬ ಆತಂಕವೂ ಖರೀದಿಗೆ ಕಾರಣವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

PBKS vs SRH: ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಪ್ರಿಯಾಂಶ್ ಆರ್ಯ

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ 2026 (IPL 2026) ರ 17ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್‌ (SRH vs PBKS) ತಂಡಕ್ಕೆ 220 ರನ್‌ಗಳ ಗುರಿ ನೀಡಿತು. ಇದಕ್ಕೆ ಪ್ರತಿಯಾಗಿ ಈ ಗುರಿ ಬೆನ್ನಟ್ಟಿದ ಪಂಜಾಬ್ ಉತ್ತಮ ಆರಂಭ ಪಡೆಯಿತು. ಆರಂಭಿಕರಾದ ಪ್ರಿಯಾಂಶ್ ಆರ್ಯ (Priyansh Arya ) ಮತ್ತು ಪ್ರಭ್ಸಿಮ್ರಾನ್ ಸಿಂಗ್ ಜೋಡಿ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಇಬ್ಬರು ಆರಂಭಿಕರು ಕೇವಲ 6.2 ಓವರ್‌ಗಳಲ್ಲಿ ಮೊದಲ ವಿಕೆಟ್‌ಗೆ 99 ರನ್‌ಗಳನ್ನು ಸೇರಿಸಿದರು.

ಪ್ರಿಯಾಂಶ್ ಸ್ಫೋಟಕ ಅರ್ಧಶತಕ

ಎಂದಿನಂತೆ ಹೊಡಿಬಡಿ ಆಟದೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಪ್ರಿಯಾಂಶ್ ಆರ್ಯ 20 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ಗಳೊಂದಿಗೆ 57 ರನ್ ಗಳಿಸುವ ಮೂಲಕ ಅಬ್ಬರದ ಇನ್ನಿಂಗ್ಸ್ ಆಡಿದರು. ಮುಖ್ಯವಾಗಿ, ಅವರು ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದು ಅವರ ಸ್ಫೋಟಕ ಬ್ಯಾಟಿಂಗ್​ಗೆ ಹಿಡಿದ ಕೈಗನ್ನಡಿಯಾಗಿತ್ತು. ಇದು ಮೊದಲ ಇನ್ನಿಂಗ್ಸ್‌ನಲ್ಲಿ 18 ಎಸೆತಗಳಲ್ಲಿ 50 ರನ್ ಗಳಿಸಿದ ಅಭಿಷೇಕ್ ಶರ್ಮಾ ಅವರಿಗಿಂತ ವೇಗವಾಗಿತ್ತು. ಹಾಗೆಯೇ ಐಪಿಎಲ್ ವೃತ್ತಿಜೀವನದಲ್ಲಿ ಇದು ಪ್ರಿಯಾಂಶ್ ಅವರ ವೇಗದ ಅರ್ಧಶತಕವೂ ಆಗಿದೆ.

ಅರ್ಧಶತಕ ಬಾರಿಸಿದ ಪ್ರಭಸಿಮ್ರನ್ ಸಿಂಗ್

ಪ್ರಿಯಾಂಶ್ ಜೊತೆಗೆ ಪ್ರಭ್ಸಿಮ್ರನ್ ಸಿಂಗ್ ಕೂಡ 25 ಎಸೆತಗಳಲ್ಲಿ 51 ರನ್ ಬಾರಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ನಾಲ್ಕು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳು ಸೇರಿದ್ದವು. ಈ ಇಬ್ಬರು ಬ್ಯಾಟ್ಸ್‌ಮನ್‌ಗಳ ನಡುವಿನ ಪಾಲುದಾರಿಕೆಯು ಪಂಜಾಬ್ ಕಿಂಗ್ಸ್‌ಗೆ 220 ರನ್‌ಗಳ ಗುರಿಯತ್ತ ಬಲವಾದ ಆರಂಭವನ್ನು ನೀಡಿತು. 6.2 ಓವರ್‌ಗಳಲ್ಲಿ 99 ರನ್‌ಗಳ ಈ ಪಾಲುದಾರಿಕೆ SRH ಗೆ ದೊಡ್ಡ ಹೊಡೆತವಾಗಿ ಪರಿಣಮಿಸಿತು.

PBKS vs SRH: 18 ಎಸೆತಗಳಲ್ಲಿ ಅರ್ಧಶತಕ; ಅಭಿಷೇಕ್ ಅಬ್ಬರ ಹೇಗಿತ್ತು ನೋಡಿ

ಆವೃತ್ತಿಯ ಮೊದಲ ಅರ್ಧಶತಕ

ಗಮನಾರ್ಹವಾಗಿ, ಇದು ಪ್ರಿಯಾಂಶ್ ಆರ್ಯ ಮತ್ತು ಪ್ರಭ್ಸಿಮ್ರಾನ್ ಸಿಂಗ್ ಅವರ ಈ ಸೀಸನ್​ನ ಮೊದಲ ಅರ್ಧಶತಕವಾಗಿದೆ. ಇದಕ್ಕೂ ಮೊದಲು, ಪ್ರಭ್ಸಿಮ್ರಾನ್ ಸಿಂಗ್ ಸಿಎಸ್‌ಕೆ ವಿರುದ್ಧ 43 ರನ್ ಮತ್ತು ಗುಜರಾತ್ ವಿರುದ್ಧ 37 ರನ್ ಗಳಿಸಿದ್ದರೆ, ಪ್ರಿಯಾಂಶ್ ಆರ್ಯ ಸಿಎಸ್‌ಕೆ ವಿರುದ್ಧ 39 ರನ್ ಮತ್ತು ಗುಜರಾತ್ ವಿರುದ್ಧ 7 ರನ್ ಬಾರಿಸಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version