ಕೇರಳ: ಕಲ್ಲಂಗಡಿ ಟ್ರಕ್ನಲ್ಲಿ ಸ್ಫೋಟಕಗಳು ಪತ್ತೆ – Kannada News | Gelatin Sticks and Detonators Recovered During Vehicle Check in Palakkad
ಪಾಲಕ್ಕಾಡ್, ಫೆಬ್ರವರಿ 05: ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಟ್ರಕ್ನಲ್ಲಿ ಸ್ಫೋಟಕಗಳು(Explosive) ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ. ತಮಿಳುನಾಡಿನ ಧರ್ಮಪುರಿಯ ಪಾಪರಪಟ್ಟಿ ಮೂಲದ ಲಾರಿ ಚಾಲಕ ಸೆಂಥಿಲ್ ಕುಮಾರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 100ಕ್ಕೂ ಹೆಚ್ಚು ಪೆಟ್ಟಿಗೆಗಳಲ್ಲಿ, ಜಿಲೆಟಿನ್ ಹಾಗೂ ಡಿಟೋನೇಟರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಪಾಲಕ್ಕಾಡ್ ಸರ್ಕಾರಿ ವೈದ್ಯಕೀಯ ಕಾಲೇಜು ಬಳಿಯ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಲಾರಿಯ ಮೇಲೆ ರಾಶಿ ಹಾಕಿದ್ದ ಕಲ್ಲಂಗಡಿ ಹಣ್ಣುಗಳನ್ನು ತೆಗೆದು…