Headlines

2 ದಿನಗಳ ಭೇಟಿಗೆ ಫೆ. 25ರಂದು ಪ್ರಧಾನಿ ಮೋದಿ ಇಸ್ರೇಲ್​ಗೆ ಪ್ರವಾಸ – Kannada News | PM Modi to visit Israel on February 25 Netanyahu says India is enormously powerful and popular

ಟೆಲ್ ಅವಿವ್, ಫೆಬ್ರವರಿ 16: ಪ್ರಧಾನಿ ನರೇಂದ್ರ ಮೋದಿ (PM Modi) ಫೆಬ್ರವರಿ 25ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಂದು ಘೋಷಿಸಿದ್ದಾರೆ. ಅಮೇರಿಕನ್ ಯಹೂದಿ ಸಂಘಟನೆಗಳ ಅಧ್ಯಕ್ಷರ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ನೆತನ್ಯಾಹು ಈ ಘೋಷಣೆ ಮಾಡಿದ್ದಾರೆ. “ಮುಂದಿನ ವಾರ ಇಲ್ಲಿಗೆ ಯಾರು ಬರುತ್ತಿದ್ದಾರೆ ಗೊತ್ತಾ? ಭಾರತದಿಂದ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ” ಎಂದು ನೆತನ್ಯಾಹು ಸಭೆಗೆ ತಿಳಿಸಿದ್ದಾರೆ. “ಇಸ್ರೇಲ್ ಮತ್ತು ಭಾರತದ ನಡುವಿನ ಅಗಾಧ ಮೈತ್ರಿಯಿದೆ….

Read More

ಬೆಂಗಳೂರಿನ ಏರ್​ಪೋರ್ಟ್​ಗೆ ಬಂತು ಬೆತ್ತಲೆ ಫೋಟೋಗಳ ಪಾರ್ಸೆಲ್! ವಾಮಾಚಾರದ ಬಾಕ್ಸ್​ ನೋಡಿ ಸಿಬ್ಬಂದಿ ಶಾಕ್

ದೇವನಹಳ್ಳಿ, ಮಾರ್ಚ್​ 10: ಇತರರ ಮೇಲಿನ ದ್ವೇಷಕ್ಕೆ ಮನೆಯಲ್ಲಿ ಅಷ್ಟೇ ಅಲ್ಲದೆ ರಸ್ತೆಗಳಲ್ಲಿ, ಹೋಟೆಲ್​ಗಳಲ್ಲಿ ಸಹ ವಾಮಾಚಾರ ಮಾಡಿದ ಸಾಕ್ಷಿಗಳು ಸಿಗುತ್ತಿದ್ದವು. ಆದರೆ ಲಕ್ಷಾಂತರ ಜನರು ಓಡಾಡುವ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ (Airport) ಇಂತಹ ಘಟನೆ ನಡೆದಿರುವುದು ಆತಂಕ ಸೃಷ್ಟಿಸಿದೆ. ವಿಮಾನ ನಿಲ್ದಾಣದ ಅಂಚೆ ಕಚೇರಿಗೆ ವಾಮಾಚಾರದ ಪಾರ್ಸೆಲ್ ಒಂದು ಬಂದಿದ್ದು, ಅದರಲ್ಲಿದ್ದ ವಸ್ತುಗಳು ಸಿಬ್ಬಂದಿಯನ್ನು ಬೆಚ್ಚಿ ಬೀಳಿಸಿವೆ. ಬಾಕ್ಸ್​ನಲ್ಲಿ ಸಿಕ್ಕಿದ್ದೇನೇನು ಗೊತ್ತಾ? ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಮಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದ್ದು,…

Read More

ಇರಾನ್ ಮತ್ತು ಅಮೆರಿಕ ನಡುವೆ 45 ದಿನಗಳ ಕದನ ವಿರಾಮಕ್ಕೆ ಪಾಕ್ ಯತ್ನ

ಟೆಹ್ರಾನ್, ಏಪ್ರಿಲ್ 06: ಅಮೆರಿಕ ಮತ್ತು ಇಸ್ರೇಲ್ ಮತ್ತು ಇರಾನ್(Iran) ನಡುವೆ ನಡೆಯುತ್ತಿರುವ ಸಂಘರ್ಷ ಈಗ 37 ನೇ ದಿನವನ್ನು ತಲುಪಿದೆ ಮತ್ತು ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಹದಗೆಡುತ್ತಲೇ ಇದೆ. ಏತನ್ಮಧ್ಯೆ, ರಾಜತಾಂತ್ರಿಕ ಪರಿಹಾರದ ಭರವಸೆ ಇದೆ ಎಂದು ತೋರುತ್ತದೆ. ವರದಿಗಳ ಪ್ರಕಾರ, 45 ದಿನಗಳ ಕದನ ವಿರಾಮದ ಕುರಿತು ಮೂರು ಕಡೆಯ ನಡುವೆ ಮಾತುಕತೆ ತೀವ್ರಗೊಂಡಿದೆ. ಆಕ್ಸಿಯಾಸ್ ವರದಿಯ ಪ್ರಕಾರ, ಈ ಪ್ರಸ್ತಾಪದ ಕುರಿತು ಅಮೆರಿಕ, ಇರಾನ್ ಮತ್ತು ಪ್ರಾದೇಶಿಕ ಮಧ್ಯಸ್ಥಿಕೆ ವಹಿಸುವ ದೇಶಗಳ ನಡುವೆ ಗಂಭೀರ…

Read More

IPL 2026: ರಾಜಸ್ಥಾನ್ ಟ್ರೋಫಿ ಗೆಲ್ಲುವುದು ಕಷ್ಟ ಎನ್ನುತ್ತಿವೆ ಅಂಕಿ ಅಂಶಗಳು

ಐಪಿಎಲ್ 2026 (IPL 2026) ರ ಫೈನಲ್​ನಲ್ಲಿ ಆರ್​ಸಿಬಿಯನ್ನು (RCB) ಯಾವ ತಂಡ ಎದುರಿಸಲಿದೆ ಎಂಬುದು ಕೆಲವೇ ಗಂಟೆಗಳಲ್ಲಿ ತಿಳಿಯಲಿದೆ. ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್‌ (RR) ಎರಡೂ ತಂಡಗಳು ಕ್ವಾಲಿಫೈಯರ್ 2 ರಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್​ಗೇರಿದರೆ, ಸೋತ ತಂಡ ಐಪಿಎಲ್​ನಿಂದ ಹೊರಬೀಳಲಿದೆ. ಕ್ವಾಲಿಫೈಯರ್ 2 ಪಂದ್ಯವು ಮೇ 29 ರಂದು ನಡೆಯಲಿದೆ. ಇದಾದ ನಂತರ ಮೇ 31 ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಆವೃತ್ತಿಯಲ್ಲಿ ರಾಜಸ್ಥಾನ್…

Read More

ವಿಜಯ್ ಕೊನೆಯ ಸಿನಿಮಾ ಸೌದಿ ಅರೆಬಿಯಾನಲ್ಲಿ ಬ್ಯಾನ್: ಕಾರಣವೇನು? – Kannada News | Vijay starrer Jana Nayagan movie facing ban in Saudi Arabia

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಬೆಂಗಳೂರು ಸೇರಿದಂತೆ ಇನ್ನೂ ಕೆಲವು ನಗರಗಳಲ್ಲಿ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಓಪನ್ ಆಗಿದೆ. ರಾಜಕೀಯಕ್ಕೆ ಎಂಟ್ರಿ ನೀಡಿರುವ ದಳಪತಿ ವಿಜಯ್, ‘ಜನ ನಾಯಗನ್’ ಬಳಿಕ ತಾವು ಇನ್ಯಾವುದೇ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಹೀಗಾಗಿ ಸಿನಿಮಾ ವೀಕ್ಷಿಸಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ವಿಜಯ್​ಗೆ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಮೆರಿಕ, ಮಲೇಷ್ಯಾ, ಸಿಂಗಪುರ, ಗಲ್ಫ್ ರಾಷ್ಟ್ರಗಳಲ್ಲೂ ಅಭಿಮಾನಿಗಳನ್ನು ವಿಜಯ್…

Read More