Headlines

ಆದಷ್ಟು ಬೇಗ ದೇಶ ಬಿಟ್ಟು ಹೊರಡಿ; ಇರಾನ್​​ನ ಭಾರತೀಯ ಪ್ರಜೆಗಳಿಗೆ ಸೂಚನೆ, ಸಹಾಯವಾಣಿ ಸಂಖ್ಯೆ ಬಿಡುಗಡೆ – Kannada News | Indian embassy in Iran issues fresh advisory for nationals amid unrest issues helpline numbers

ನವದೆಹಲಿ, ಜನವರಿ 14: ಇರಾನ್‌ನಲ್ಲಿ ಪ್ರತಿಭಟನೆಗಳು (Iran Protests) ಉಲ್ಬಣಗೊಳ್ಳುತ್ತಿದ್ದಂತೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಹೊಸ ಸೂಚನೆಯನ್ನು ನೀಡಿದೆ. ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು, ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ವಾಣಿಜ್ಯ ವಿಮಾನಗಳು ಸೇರಿದಂತೆ ತಮಗೆ ಲಭ್ಯವಿರುವ ಸಾರಿಗೆ ವಿಧಾನಗಳ ಮೂಲಕ ಕೂಡಲೇ ಇರಾನ್ ಬಿಟ್ಟು ಹೊರಡುವಂತೆ ಭಾರತೀಯ ರಾಯಭಾರ ಕಚೇರಿಯು ಸೂಚನೆ ನೀಡಿದೆ. ಇರಾನ್​ನ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಯಭಾರ ಕಚೇರಿ ಈ ಸೂಚನೆ ನೀಡಿದೆ. ಇರಾನ್‌ನಲ್ಲಿರುವ ಎಲ್ಲಾ ಭಾರತೀಯ…

Read More

ವಿಜಯಪುರ ಗ್ರಾಮೀಣ ಪೊಲೀಸರ ಭರ್ಜರಿ ಬೇಟೆ: ವಿವಿಧ ಪ್ರಕರಣ ಭೇದಿಸಿ 14 ಮಂದಿ ಅರೆಸ್ಟ್​; 1.17 ಕೋಟಿ ಮೌಲ್ಯದ ವಸ್ತುಗಳು ಜಪ್ತಿ – Kannada News | Vijayapura Police Arrest 14 Accused in Various Cases, Seize Assets Worth 1.17 Crore

ಪೊಲೀಸರು ಜಪ್ತಿ ಮಾಡಿರುವ ವಸ್ತುಗಳು. ವಿಜಯಪುರ, ಜನವರಿ 23: ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ವಿಜಯಪುರ ಗ್ರಾಮೀಣ ಪೊಲೀಸರು ಅಂತರ್​​ ಜಿಲ್ಲೆ ಮತ್ತು ಅಂತಾರಾಜ್ಯ ಕಳ್ಳರು, ಖದೀಮರು ಸೇರಿ ಒಟ್ಟು 14 ಮಂದಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಆರೋಪಿಗಳಿಂದ ನಗದು, ಚಿನ್ನಾಭರಣ ಮತ್ತು ವಾಹನಗಳು ಸೇರಿ 1.17 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಖಾಕಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಜಪ್ತಿ ಮಾಡಿದ ಹಣ ಮತ್ತು ಚಿನ್ನವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಹಲವು ಪ್ರಕರಣ ಭೇದಿಸಿದ ಖಾಕಿ 2025ರ…

Read More

ಶ್ರವಣಕುಮಾರನ ಸಾಹಸ… ಟೆಂಪೋ ಡ್ರೈವರ್ ಆಗಿದ್ದವ ನಾಲ್ಕೇ ವರ್ಷದಲ್ಲಿ ವಿಮಾನ ಸಂಸ್ಥೆ ಕಟ್ಟಿದ ಕಥೆ..! – Kannada News | From tempo driver to airlines owner, story of Shankh Air founder Shravan Kumar Vishwakarma

ಕೇಂದ್ರ ಸರ್ಕಾರದಿಂದ ಲೈಸೆನ್ಸ್ ಪಡೆದ ಮೂರು ಹೊಸ ಏರ್ಲೈನ್ ಕಂಪನಿಗಳಲ್ಲಿ ಶಂಖ್ ಏರ್ (Shankh Air) ಒಂದು. ಇದರ ಸ್ಥಾಪನೆ ಹಾಗೂ ಸ್ಥಾಪಕನ ಹಿಂದಿನ ಕಥೆ ನಿಜಕ್ಕೂ ರೋಚಕ. ಮನಸ್ಸಿದ್ದರೆ ಮಾರ್ಗ ಎನ್ನುವುದಕ್ಕೆ ಮಾದರಿ ಶ್ರವಣ್ ಕುಮಾರ್ ವಿಶ್ವಕರ್ಮ (Shravan Kumar Vishwakarma). ಉತ್ತರಪ್ರದೇಶದ ಈ ವ್ಯಕ್ತಿ ಒಂದು ಕಾಲದಲ್ಲಿ ಕಾನಪುರ್​ನ ಬೀದಿಗಳಲ್ಲಿ ಟೆಂಪೋ ಡ್ರೈವರ್ ಆಗಿ ಜೀವನ ನಿರ್ವಹಣೆ ಮಾಡುತ್ತಿದ್ದವ. ಇವತ್ತು ವಿಮಾನ ಕಂಪನಿಯ ಮಾಲೀಕನಾಗಿ ಬೆಳೆದಿದ್ದಾರೆ. ಶಂಖ್ ಏರ್ ಶೀಘ್ರದಲ್ಲೇ ವಿಮಾನಗಳ ಹಾರಾಟ ನಡೆಸಲಿದೆ….

Read More

ಪ್ರಯಾಣಿಕರ ಗಮನಕ್ಕೆ: ಮೇ 17ರಂದು ಈ ಮಾರ್ಗದ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ – Kannada News | BMRCL Announces Temporary Suspension of Purple Line Metro Services for 2 Hours on May 17

ನೇರಳೆ ಮಾರ್ಗದ ಮೆಟ್ರೋImage Credit source: bmrc.co.in ಬೆಂಗಳೂರು, ಮೇ 15: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ (Purple Line) ಪ್ರಯಾಣಿಸುವ ಸಾರ್ವಜನಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಮೇ​ 17ರಂದು ಅಂದರೆ ಭಾನುವಾರ ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಬೆಳಗ್ಗೆ 2 ಗಂಟೆಗಳ ಕಾಲ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಮುಖ್ಯಾಂಶಗಳು ಮೈಸೂರು ರಸ್ತೆಯಲ್ಲಿ ಪ್ರಯಾಣ ಮಾಡುವವರಿಗೆ ಸಂಡೇ ಶಾಕ್​​ 17ರಂದು…

Read More

ಜೂನ್ 12ರಿಂದ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ ಅಕ್ಷಯ್ ಕುಮಾರ್ ಸಿನಿಮಾ ‘ಭೂತ್ ಬಂಗ್ಲ’ – Kannada News

ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಮತ್ತು ಹಿರಿಯ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಷನ್‌ನ ಹಾರರ್ ಕಾಮಿಡಿ ಚಿತ್ರ ‘ಭೂತ್ ಬಂಗ್ಲಾ’ (Bhooth Bangla) ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ಈಗ ಈ ಸಿನಿಮಾ ಒಟಿಟಿ (OTT) ಅಂಗಳಕ್ಕೆ ಬರಲು ಸಜ್ಜಾಗಿದೆ. ಥಿಯೇಟರ್​ನಲ್ಲಿ ಉತ್ತಮ ಕಲೆಕ್ಷನ್ ಮಾಡಿ ಯಶಸ್ಸು ಕಂಡ ಈ ಸಿನಿಮಾ, ಜೂನ್ 12ರಿಂದ ಪ್ರಮುಖ ಒಟಿಟಿ ಸಂಸ್ಥೆಯಾದ ನೆಟ್‌ಫ್ಲಿಕ್ಸ್‌ ಮೂಲಕ ಡಿಜಿಟಲ್ ಪ್ರಸಾರ ಆರಂಭಿಸಲಿದೆ. ಇದರಿಂದ ಅಕ್ಷಯ್ ಕುಮಾರ್ (Akshay Kumar) ಅಭಿಮಾನಿಗಳು ಖುಷಿ ಆಗಿದ್ದಾರೆ. ಏಪ್ರಿಲ್…

Read More

ಪಶ್ಚಿಮ ಬಂಗಾಳದಲ್ಲಿ ಎಸ್​ಐಆರ್​ಗೆ ಫೆ. 21ರವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್ – Kannada News | Supreme Court extends deadline for SIR in West Bengal by one week

ನವದೆಹಲಿ, ಫೆಬ್ರವರಿ 9: ಪಶ್ಚಿಮ ಬಂಗಾಳದಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಫೆಬ್ರವರಿ 14ರವರೆಗೆ ಇದ್ದ ಗಡುವನ್ನು ವಿಸ್ತರಿಸಿದೆ. ಮತಪಟ್ಟಿ ವಿಶೇಷ ಪರಿಷ್ಕರಣೆ (SIR) ಕುರಿತ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ (Supreme Court) ಪಶ್ಚಿಮ ಬಂಗಾಳದ ಡಿಜಿಪಿಗೆ ನೋಟಿಸ್ ಜಾರಿ ಮಾಡಿದೆ. ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಡಿಜಿಪಿಗೆ ನಿರ್ದೇಶನ ನೀಡಿದೆ. ಚುನಾವಣಾ ಆಯೋಗದ ಪರವಾಗಿ SIR ಕರ್ತವ್ಯಗಳಲ್ಲಿ ತೊಡಗಿರುವ ಅಧಿಕಾರಿಗಳಿಗೆ ಬೆದರಿಕೆ ಮತ್ತು…

Read More

ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ – Kannada News | Director Om Praksh remembered old days about Darshan

ಖ್ಯಾತ ನಿರ್ದೇಶಕ ಓಂ ಪ್ರಕಾಶ್, ಶಿವರಾಜ್ ಕುಮಾರ್, ದರ್ಶನ್ (Darshan) ಸೇರಿದಂತೆ ಹಲವು ಸ್ಟಾರ್ ನಟ-ನಟಿಯರ ಜೊತೆಗೆ ಕೆಲಸ ಮಾಡಿದ್ದಾರೆ. ಇತ್ತೀಚೆಗೆ ಓಂ ಪ್ರಕಾಶ್ ಅವರು ಟಿವಿ ಲೋಕಕ್ಕೆ ಹೆಚ್ಚು ಹತ್ತಿರವಾಗುತ್ತಿದ್ದಾರೆ. ರಿಯಾಲಿಟಿ ಶೋಗಳಲ್ಲಿ ಭಾಗಿ ಆಗುತ್ತಿದ್ದಾರೆ. ಹೊಸ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿರುವ ಓಂ ಪ್ರಕಾಶ್ ಅವರು ಟಿವಿ9 ಜೊತೆಗೆ ಮಾತನಾಡುತ್ತಾ ಹಳೆಯ ನೆನಪುಗಳನ್ನು ಮಾಡಿಕೊಂಡಿದ್ದಾರೆ. ನಟ ದರ್ಶನ್​ಗೆ ತಾವು ಉಪ್ಪಿಟ್ಟು ಮಾಡಿಕೊಟ್ಟಿದ್ದನ್ನು ಈ ವೇಳೆ ಓಂ ಪ್ರಕಾಶ್ ಅವರು ನೆನಪು ಮಾಡಿಕೊಂಡಿದ್ದು, ಹಳೆಯ ಘಟನೆಯನ್ನು…

Read More

8ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದಲೇ ಅತ್ಯಾಚಾರ, ಗರ್ಭಿಣಿಯಾದಾಗ ಕೃತ್ಯ ಬಹಿರಂಗ – Kannada News | Deoria Shocked as Schoolgirl’s Pregnancy Exposes Alleged Assault by Classmates

ಡಿಯೋರಿಯಾ, ಫೆಬ್ರವರಿ 04: ಎಂಟನೇ ತರಗತಿ ಬಾಲಕಿ(Girl) ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಡಿಯೋರಿಯಾದಲ್ಲಿ ನಡೆದಿದೆ. ಆಕೆಗೆ ಮಾದಕದ್ರವ್ಯ ಕೊಟ್ಟು ಅತ್ಯಾಚಾರವೆಸಗಿದ್ದಾರೆ. ವಿದ್ಯಾರ್ಥಿನಿ ಗರ್ಭಿಣಿಯಾದಾಗ ಕೃತ್ಯ ಬೆಳಕಿಗೆ ಬಂದಿದೆ. ಎರಡು ತಿಂಗಳ ನಂತರ ವೈದ್ಯಕೀಯ ಪರೀಕ್ಷೆಯಲ್ಲಿ ಅಪ್ರಾಪ್ತ ವಯಸ್ಕ ಗರ್ಭಿಣಿಯಾಗಿದ್ದಾಳೆಂದು ದೃಢಪಟ್ಟ ನಂತರ ಈ ಭಯಾನಕ ಅಪರಾಧ ಬೆಳಕಿಗೆ ಬಂದಿದೆ. ನವೆಂಬರ್​​ನಲ್ಲಿ ಈ ಘಟನೆ ನಡೆದಿತ್ತು, ಅಂದು ಶಿಕ್ಷಕರ ಅನುಪಸ್ಥಿತಿಯ ಲಾಭ ಪಡೆದು ಆಕೆಯ ತರಗತಿಯ ಕೆಲವು ಹುಡುಗರು ಪ್ರಸಾದ್ ಎಂದು ಹೇಳಿ ಮತ್ತು…

Read More

ಜನರೊಂದಿಗಿನ ಎನ್​ಡಿಎ ಬಾಂಧವ್ಯವನ್ನು ಸೂಚಿಸುತ್ತದೆ; ಬಿಎಂಸಿ ಚುನಾವಣೆಯ ಗೆಲುವಿಗೆ ಪ್ರಧಾನಿ ಮೋದಿ ಧನ್ಯವಾದ – Kannada News | Thank You Maharashtra PM Modi hails Mahayutis Big Win in Municipal Corporation elections

ನವದೆಹಲಿ, ಜನವರಿ 16: ಮಹಾರಾಷ್ಟ್ರದ (Maharashtra) ಪುರಸಭೆ ಚುನಾವಣೆಯಲ್ಲಿ ಎನ್‌ಡಿಎ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಶ್ಲಾಘಿಸಿದ್ದಾರೆ. ಈ ಫಲಿತಾಂಶಗಳು ಎನ್​ಡಿಎ ಮೈತ್ರಿಕೂಟದ ಜನಪರ ಉತ್ತಮ ಆಡಳಿತಕ್ಕೆ ಹೆಚ್ಚುತ್ತಿರುವ ಸಾರ್ವಜನಿಕ ಬೆಂಬಲವನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದ್ದಾರೆ. ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಧನ್ಯವಾದಗಳು ಮಹಾರಾಷ್ಟ್ರ! ರಾಜ್ಯದ ಕ್ರಿಯಾಶೀಲ ಜನರು ಎನ್‌ಡಿಎಯ ಜನಪರ ಉತ್ತಮ ಆಡಳಿತದ ಕಾರ್ಯಸೂಚಿಯನ್ನು ಆಶೀರ್ವದಿಸಿದ್ದಾರೆ” ಎಂದು ಹೇಳಿದ್ದಾರೆ. ಇನ್ನೊಂದು ಎಕ್ಸ್ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ ಜನರ ನಡುವೆ…

Read More

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು ಗೊತ್ತಾ?

ಬೆಂಗಳೂರು, ಮಾರ್ಚ್​​ 26: ಆರ್​ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಾಗ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆದಿವೆ. 500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯಿಂದ ಪ್ರಮುಖ ಮಾಕ್ ಡ್ರಿಲ್ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಪೊಲೀಸ್ ಇಲಾಖೆಯು ಈ ಭದ್ರತಾ ಸಿದ್ಧತೆಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಜೂನ್ 4ರಂದು ನಡೆದ ಕಾಲ್ತುಳಿತ ಪ್ರಕರಣದಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ….

Read More