Headlines

ದರ್ಶನ್ ಅಭಿಮಾನಿಯನ್ನು ಕಾಪಾಡಿದ್ದು ಸುದೀಪ್: ಆ ಘಟನೆ ವಿವರಿಸಿದ ರಜತ್ – Kannada News | BBK 12 Rajath Kishan talks about Kichcha Sudeep and Darshan fans war

ದರ್ಶನ್ ಅಭಿಮಾನಿಗಳು ಮತ್ತು ಕಿಚ್ಚ ಸುದೀಪ್ (Kichcha Sudeep) ಅವರ ಅಭಿಮಾನಿಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ವೇಳೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದೆ. ಡಿಸೆಂಬರ್ 25ರಂದು ‘ಮಾರ್ಕ್’ ಚಿತ್ರ ಬಿಡುಗಡೆ ಆಗಲಿದೆ. ಈ ಸಮಯಕ್ಕೆ ವಿವಾದ ಆರಂಭ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಚರ್ಚೆ ಆಗುತ್ತಿದೆ. ನಟ ರಜತ್ ಕಿಶನ್ (Rajath Kishan) ಅವರು ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ. ಫ್ಯಾನ್ಸ್ ವಾರ್ ಬಗ್ಗೆ ಟಿವಿ9 ಜೊತೆ…

Read More

ಕೆನಡಾ ಶಾಲೆಯಲ್ಲಿ ಗುಂಡು ಹಾರಿಸಿ 9 ಜನರ ಕೊಲ್ಲುವ ಮುನ್ನ ಮನೆಯಲ್ಲಿ ತಾಯಿ, ಸಹೋದರನ ಕೊಂದು ಬಂದಿದ್ದ ಟ್ರಾನ್ಸ್​​ಜೆಂಡರ್ – Kannada News | Canada School Shooting: Transgender Shooter Killed Family Before Deadly Rampage

ಒಟ್ಟಾವಾ, ಫೆಬ್ರವರಿ 12: ಕೆನಡಾದ ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿ(Firing) ಎಲ್ಲರನ್ನೂ ಬೆಚ್ಚಿಬೀಳಿಸಿತ್ತು. ಘಟನೆಯಲ್ಲಿ 9 ಮಂದಿ ಪ್ರಾಣ ಕಳೆದುಕೊಂಡಿದ್ದರು. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಅಂದು ಅವರೆಲ್ಲರ ಮೇಲೆ ಗುಂಡು ಹಾರಿಸಿದ್ದು ಓರ್ವ ಮಂಗಳಮುಖಿ ಎಂಬುದು ತಿಳಿದುಬಂದಿದೆ. ಅದಕ್ಕಿಂತಲೂ ಭಯಾನಕ ವಿಚಾರವೇನೆಂದರೆ ಆಕೆ ಶಾಲೆಯ ಮೇಲೆ ದಾಳಿ ನಡೆಸುವ ಮುನ್ನ ತನ್ನ ತಾಯಿ ಹಾಗೂ ತನ್ನ ಸಹೋದರನ ಮೇಲೆ ಗುಂಡು ಹಾರಿಸಿ ಇಬ್ಬರನ್ನೂ ಕೊಂದು ಬಂದಿದ್ದಳು. ಆಕೆಗಿನ್ನೂ 18 ವರ್ಷ ವಯಸ್ಸು,…

Read More

ರಾತ್ರಿ ವೇಳೆಯೂ ಉಷ್ಣ ಅಲೆ, ಇನ್ನಷ್ಟು ಹೆಚ್ಚಾಗಲಿದೆ ತಾಪಮಾನ: ಹವಾಮಾನ ತಜ್ಞ ಸ್ಫೋಟಕ ಮುನ್ಸೂಚನೆ – Kannada News | Karnataka Weather: Night Temperatures to Rise Further; Meteorologist CS Patil Warns of Heatwave Intensifies

ಬೆಂಗಳೂರು, ಏಪ್ರಿಲ್ 20: ಕರ್ನಾಟಕದಲ್ಲಿ ರಣಬಿಸಿಲಿನಿಂದ ಜನ ತತ್ತರಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಕೆರೆ, ಬಾವಿ ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುವ ಸಾಧ್ಯತೆಗಳು ಗೋಚರಿಸುತ್ತಿವೆ. ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ನೀರಿನ ಅಭಾವ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದಾರೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಗಲು…

Read More

ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು: ಮೃತರ ಸಂಖ್ಯೆ 7ಕ್ಕೆ ಏರಿಕೆ – Kannada News | Chitradurga Bus Accident: Injured Driver Succumbs to Death in Hubli KIMS Hospital, Toll Rises to 7

ಚಿತ್ರದುರ್ಗ, ಹುಬ್ಬಳ್ಳಿ, ಡಿಸೆಂಬರ್ 26: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬಸ್ ಚಾಲಕ ಮಹ್ಮದ್ ರಫೀಕ್ (38) ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಹುಲಗೂರು ಮೂಲದ ರಫೀಕ್ ಕುಟುಂಬದವರಿಗೆ ಆಧಾರವಾಗಿದ್ದರು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ   Source link

Read More

ಗಂಗಾರತಿ ಮೂಲಕ ನದಿ ತಿರುವು ಯೋಜನೆ ವಿರುದ್ಧ ಸತ್ಯಾಗ್ರಹ; ವಿಶಿಷ್ಟ ಕರೆ ನೀಡಿದ ಸ್ವರ್ಣವಲ್ಲಿ ಶ್ರೀಗಳು – Kannada News | Uttara Kannada River Diversion Project Swarnavalli Mutt Leads Gangarati Protest To Save Rivers

ಉತ್ತರ ಕನ್ನಡ ಜಿಲ್ಲೆಗೆ ಸದ್ಯ ನದಿ ತಿರುವು ಯೋಜನೆಯ ಭೂತ ಕಾಡುತ್ತಿದೆ. ಇಲ್ಲಿ ಹರಿಯುವ ವಿವಿಧ ನದಿ ಹಾಗೂ ಹಳ್ಳಗಳಿಗೆ ಡ್ಯಾಮ್ ಕಟ್ಟಿ, ಉತ್ತರ ಕರ್ನಾಟಕದ ಕಡೆಗೆ ನೀರು ತೆಗೆದುಕೊಂಡು ಹೋಗುವ ಯೋಜನೆ ಇದಾಗಿದೆ. ಇದಕ್ಕೆ ಸಾವಿರಾರು ಕೋಟಿ ರೂಪಾಯಿ ಸುರಿಯಲು ಸರ್ಕಾರ ಮುಂದಾಗಿದೆ. ಇದರಿಂದ ಪಶ್ಚಿಮಘಟ್ಟದ ನಾಶ ಖಚಿತ ಎಂಬ ಅಭಿಪ್ರಾಯ ತಜ್ಞರದ್ದು. ಆದಾಗ್ಯೂ ನಾವು ಯೋಜನೆ ಮಾಡಿಯೇ ತಿರುತ್ತೇವೆ ಎಂಬ ಹುಂಬುತನ ರಾಜಕಾಣಿಗಳದ್ದು. ಜನವರಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಯೋಜನೆ ವಿರುದ್ಧ…

Read More

IPL 2026: RCB ಪರ ಇಬ್ಬರು ಪಾದಾರ್ಪಣೆ ಸಾಧ್ಯತೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರ ಮೊದಲ ಪಂದ್ಯದಲ್ಲೇ ಕಣಕ್ಕಿಳಿಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಅಭಿಯಾನ ಶುರು ಮಾಡಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.8) ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ಆರ್​ಸಿಬಿ ಪರ ಇಬ್ಬರು ಆಟಗಾರರು ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗಿದ್ದಾರೆ. ಇಲ್ಲಿ ಜೋಶ್ ಹೇಝಲ್​ವುಡ್ ಫಿಟ್​ನೆಸ್ ಕಾರಣದಿಂದಾಗಿ…

Read More

ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ: ಪ್ರಧಾನಿ ನರೇಂದ್ರ ಮೋದಿ – Kannada News

ನವದೆಹಲಿ, ಜೂನ್​​ 10: ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ ಎಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಪಾದಿಸಿದ್ದಾರೆ. ಪ್ರಧಾನಿಯಾಗಿ 12 ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಜನಸೇವೆಯ ಮಹತ್ವದ ಬಗ್ಗೆ ಸಂದೇಶ ನೀಡಿದ್ದಾರೆ. ಜನಸೇವೆಯು ಉತ್ತಮ ಆಡಳಿತದ ನಿಜವಾದ ಪರೀಕ್ಷೆಯಾಗಿದೆ ಎಂದು ಪ್ರಧಾನಮಂತ್ರಿಯವರು ತಿಳಿಸಿದ್ದಾರೆ. ಮೋದಿಯವರ ಪ್ರಕಾರ, ವಿನಮ್ರತೆ, ಸಮರ್ಪಣಾ ಭಾವನೆ ಮತ್ತು ಕರ್ತವ್ಯ ಪ್ರಜ್ಞೆಯಿಂದ ನಿರಂತರವಾಗಿ ಕೆಲಸ ಮಾಡುವ ವ್ಯಕ್ತಿ ಮಾತ್ರ ಜನರ ವಿಶ್ವಾಸವನ್ನು ಗಳಿಸಲು ಸಾಧ್ಯ. ಸಾರ್ವಜನಿಕರು ನಿಮ್ಮನ್ನು…

Read More

ಪೀಣ್ಯ ಕೈಗಾರಿಕೆಗಳಿಗೆ ಯುದ್ಧದ ಬಿಸಿ: ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ, ಸಾವಿರಾರು ಕಾರ್ಮಿಕರಿಗೆ ಕೆಲಸ ಕಳೆದುಕೊಳ್ಳುವ ಭೀತಿ – Kannada News | Peenya Industries in Trouble: Commercial LPG Supply Disruption and Price Hike Threaten Thousands of Jobs in Bengaluru

ಪೀಣ್ಯ ಕೈಗಾರಿಕೆಗಳಿಗೆ ಯುದ್ಧದ ಬಿಸಿImage Credit source: tv9 ಬೆಂಗಳೂರು, ಮೇ 8: ಜಾಗತಿಕ ಮಟ್ಟದ ಯುದ್ಧದ ಬಿಕ್ಕಟ್ಟು ಕೇವಲ ಕಚ್ಚಾ ತೈಲ ಬೆಲೆಯ ಮೇಲೆ ಮಾತ್ರವಲ್ಲದೆ, ರಾಜಧಾನಿ ಬೆಂಗಳೂರಿನ (Bengaluru) ಕೈಗಾರಿಕೆಗಳ ಮೇಲೂ ಭೀಕರ ಪರಿಣಾಮ ಬೀರಿದೆ. ದಕ್ಷಿಣ ಏಷ್ಯಾದಲ್ಲೇ ಅತಿ ದೊಡ್ಡ ಕೈಗಾರಿಕಾ ವಲಯವೆಂದು ಗುರುತಿಸಲ್ಪಟ್ಟಿರುವ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ (Peenya Industries) ಈಗ ವಾಣಿಜ್ಯ ಇಂಧನ ಪೂರೈಕೆಯ ವ್ಯತ್ಯಯ ಹಾಗೂ ಬೆಲೆ ಏರಿಕೆಯ ‘ಟ್ರಬಲ್’ ಶುರುವಾಗಿದೆ. ಇದರಿಂದಾಗಿ ನೂರಾರು ಕೈಗಾರಿಕೆಗಳು ಮುಚ್ಚುವ ಸ್ಥಿತಿಗೆ…

Read More

Friday Lakshmi Puja: ಮನೆಯಲ್ಲಿ ಸಂಪತ್ತು ಮತ್ತು ಸಮೃದ್ಧಿ ನೆಲೆಸಲು ಶುಕ್ರವಾರ ಈ ರೀತಿ ಮಾಡಿ – Kannada News | Friday Lakshmi Puja: Essential Rituals for Wealth, Peace and Prosperity

ಹಿಂದೂ ಸಂಪ್ರದಾಯಗಳಲ್ಲಿ ಪ್ರತಿ ದಿನಕ್ಕೂ ತನ್ನದೇ ಆದ ಮಹತ್ವವಿದೆ. ಅದರಲ್ಲೂ ಶುಕ್ರವಾರವನ್ನು ವಿಶೇಷವಾಗಿ ಶುಭ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನವು ಸಂಪತ್ತು, ಶಾಂತಿ ಮತ್ತು ಸಮೃದ್ಧಿಯ ಸಂಕೇತವಾದ ಲಕ್ಷ್ಮಿ ದೇವಿಗೆ ಸಮರ್ಪಿತವಾಗಿದೆ. ಆದ್ದರಿಂದ ಅನೇಕ ಭಕ್ತರು ಈ ದಿನದಂದು ಪೂಜೆ, ಜಪ, ದಾನ ಧರ್ಮಗಳ ಮೂಲಕ ಅವಳ ಕೃಪೆಯನ್ನು ಪಡೆಯಲು ಪ್ರಯತ್ನಿಸುತ್ತಾರೆ. ಮಹಾಲಕ್ಷ್ಮಿಯ ಆಶೀರ್ವಾದವು ಕೇವಲ ಹಣಕಾಸಿನ ಸಂಪತ್ತಿಗೆ ಸೀಮಿತವಾಗಿಲ್ಲ. ಅದು ಮನಸ್ಸಿನ ಶಾಂತಿ, ಕುಟುಂಬದಲ್ಲಿ ಸಾಮರಸ್ಯ ಮತ್ತು ಜೀವನದಲ್ಲಿ ಸಮತೋಲನವನ್ನು ನೀಡುತ್ತದೆ ಎಂದು ನಂಬಲಾಗಿದೆ. “ಓಂ…

Read More

ಈ ವಾರ ಒಟಿಟಿಗೆ ಬಂದ ಸಿನಿಮಾಗಳಿವು, ‘ಜೆರಾಕ್ಸ್’ ಮಿಸ್ ಮಾಡ್ಬೇಡಿ – Kannada News | OTT Release this week from April 20 to April 25

ನಾಗಭೂಷಣ್, ಓಂ ಪ್ರಕಾಶ್ ರಾವ್ ಇನ್ನೂ ಹಲವು ಪ್ರತಿಭಾವಂತ ಕಲಾವಿದರು ನಟಿಸಿರುವ ‘ಜೆರಾಕ್ಸ್’ ಹೆಸರಿನ ಕನ್ನಡ ವೆಬ್ ಸರಣಿ ಈ ವಾರ ಒಟಿಟಿಗೆ ಬಂದಿದೆ. ಮನುಷ್ಯರನ್ನು ಝೆರಾಕ್ಸ್ ಮಾಡುವ ಭಿನ್ನ ರೀತಿಯ ಕಾನ್ಸೆಪ್ಟ್ ಅನ್ನು ಈ ವೆಬ್ ಸರಣಿ ಒಳಗೊಂಡಿದೆ. ವೆಬ್ ಸರಣಿಯನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ. Source link

Read More