ರಾಜೀನಾಮೆಗೂ ಮುನ್ನವೇ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ
ಬೆಂಗಳೂರು, (ಮೇ 28): ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನಿಡುವುದಾಗಿ ಘೋಷಿಸಿದ್ದು, ಮುಂದಿನ ಮುಖ್ಯಮುಂತ್ರಿ ಡಿಕೆ ಶಿವಕುಮಾರ್ (DK Shivakumar) ಆಗಲಿದ್ದಾರೆ. ಆದ್ರೆ, ಸಿದ್ದರಾಮಯ್ಯನವರ ಪದತ್ಯಾಗಕ್ಕೂ ಮುನ್ನವೇ ಅವರ ಆಪ್ತ ಅಧಿಕಾರಿಗಳ ಸ್ಥಾನಪಲ್ಲಟವಾಗಿದೆ. ಹೌದು… ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ , ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಸಿಎಂ ಜಂಟಿ ಕಾರ್ಯದರ್ಶಿಯಾಗಿದ್ದ ಟಿ.ಎನ್.ಕೃಷ್ಣಮೂರ್ತಿ ಹಾಗೂ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಅವರನ್ನ ವರ್ಗಾವಣೆ ಮಾಡಲಾಗಿದೆ. ಮುಖ್ಯಾಂಶಗಳು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಪದತ್ಯಾಗಕ್ಕೂ…