Gold Rate: ಬಂಗಾರ ಮತ್ತಷ್ಟು ಅಗ್ಗ; ನಿನ್ನೆ 395 ರೂ, ಇವತ್ತು 195 ರೂ ಕುಸಿತ – Kannada News
ನವದೆಹಲಿ, ಜೂನ್ 11: ನಿನ್ನೆ ಬರೋಬ್ಬರಿ 395 ರೂಗಳಷ್ಟು ಭರ್ಜರಿ ಇಳಿಕೆ ಕಂಡಿದ್ದ ಆಭರಣ ಚಿನ್ನದ ಬೆಲೆ (Gold Rates) ಇವತ್ತು ಗುರುವಾರವೂ 195 ರೂ ಕುಸಿತ ಕಂಡಿದೆ. ಎರಡು ದಿನದಲ್ಲಿ ಬಂಗಾರದ ದರ ಸುಮಾರು 600 ರೂಗಳಷ್ಟು ಕಡಿಮೆಗೊಂಡಿದೆ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಭರ್ಜರಿ ಕುಸಿತವಾಗಿದೆ. ಆದರೆ, ಸತತ ಎರಡು ಬಾರಿ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆ ಗುರುವಾರ ಶಾಂತವಾಗಿದೆ. ಅದರ ಬೆಲೆ ಗ್ರಾಮ್ಗೆ 250 ರೂನಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22…