ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತೆ ಕಣಕ್ಕಿಳಿಯುವುದು ಯಾವಾಗ? – Kannada News | When will Virat Kohli and Rohit Sharma play next?
ವಿಜಯ ಹಝಾರೆ ಟೂರ್ನಿಯ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ದೇಶೀಯ ಕ್ರಿಕೆಟ್ಗೆ ಮರಳಿದ್ದಾರೆ. ಬೆಂಗಳೂರಿನ ಸಿಒಇ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕಿಂಗ್ ಕೊಹ್ಲಿ ದೆಹಲಿ ಪರ ಕಣಕ್ಕಿಳಿದರೆ, ಜೈಪುರದಲ್ಲಿ ನಡೆದ ಮತ್ತೊಂದು ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟ್ ಬೀಸಿದ್ದರು. ವಿಶೇಷ ಎಂದರೆ ಈ ಇಬ್ಬರು ದಿಗ್ಗಜರು ಮೊದಲ ಮ್ಯಾಚ್ನಲ್ಲೇ ಶತಕ ಸಿಡಿಸಿದ್ದಾರೆ. ಆಂಧ್ರ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ದೆಹಲಿ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ 101 ಎಸೆತಗಳಲ್ಲಿ 3…