ಸಕ್ರೆಬೈಲಿನಲ್ಲಿ ಒಡೆಯನಿಲ್ಲದೆ ‘ಭೀಷ್ಮ’ ಆನೆ ಅನಾಥ: ಹೆತ್ತ ಮಗನಂತೆ ಸಾಕಿ ಸಲಹುತ್ತಿದ್ದ ಮಾವುತ ಸಿದ್ದಿಕ್ ಪಾಷಾ ಇನ್ನಿಲ್ಲ – Kannada News | Sakrebailu mahout siddique pashas demise elephants mourn loss at shivamogga camp
ಶಿವಮೊಗ್ಗ, ಜೂ.12: ರಾಜ್ಯದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಪ್ರಕೃತಿ ಪ್ರೇಮಿಗಳ ಸ್ವರ್ಗ ಎಂದೇ ಹೆಸರಾಗಿರುವ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಲ್ಲಿ ಸದ್ಯ ಸೂತಕದ ಛಾಯೆ ಆವರಿಸಿದೆ. ಕಳೆದ 16 ವರ್ಷಗಳಿಂದ ಕಾಡಾನೆಗಳನ್ನು ಅತ್ಯಂತ ಪ್ರೀತಿಯಿಂದ ಪಳಗಿಸಿ, ಸಲಹುತ್ತಿದ್ದ ಬಿಡಾರದ ದಕ್ಷ ಮಾವುತ ಸಿದ್ದಿಕ್ ಪಾಷಾ (39) ಅವರು ಅನಾರೋಗ್ಯದಿಂದ ಅಕಾಲಿಕ ನಿಧನ ಹೊಂದಿದ್ದಾರೆ. ನೆಚ್ಚಿನ ಮಾವುತನ ಅಗಲಿಕೆಯಿಂದಾಗಿ ಇಡೀ ಆನೆ ಬಿಡಾರದಲ್ಲಿ ಸದ್ಯ ಮೌನ ನೆಲೆಸಿದೆ. ಸುತ್ತಲೂ ದಟ್ಟ ಅರಣ್ಯ, ತುಂಗಾ ನದಿಯ ಹಿನ್ನೀರಿನ…