IND vs AFG: ಅಫ್ಘನ್ ವಿರುದ್ಧ 12ನೇ ಟೆಸ್ಟ್ ಶತಕ ಬಾರಿಸಿದ ಕನ್ನಡಿಗ ಕೆಎಲ್ ರಾಹುಲ್ – Kannada News
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರ ಶನಿವಾರದಿಂದ ನ್ಯೂ ಚಂಡೀಗಢದ ಮಹಾರಾಜ ಯಾದವೇಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿದೆ. ಎಂಟು ವರ್ಷಗಳ ನಂತರ ಎರಡೂ ದೇಶಗಳ ನಡುವೆ ಈ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಕನ್ನಡಿಗ ಕೆಎಲ್ ರಾಹುಲ್ ಟೆಸ್ಟ್ ಪಂದ್ಯದ ಮೊದಲ ದಿನವೇ ಭರ್ಜರಿ ಶತಕ ಬಾರಿಸಿದ್ದಾರೆ. ತಮ್ಮ ಟೆಸ್ಟ್ ವೃತ್ತಿಜೀವನದ…