ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ – Kannada News | Chikkaballapur Student Talks about Cuts janivara During CET Exam
ಚಿಕ್ಕಬಳ್ಳಾಪುರ, (ಏಪ್ರಿಲ್ 25): ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ, ಸಂಹಿತೆಯ ಬಗ್ಗೆ ವಿವರಿಸಿದೆ. ಆದರೂ ಸಹ ಮೊನ್ನೆ ನಡೆದ ಸಿಇಟಿ ಪರೀಕ್ಷೆ ವೇಳೆ ಅಭ್ಯರ್ಥಿಗಳ ಜನಿವಾರಕ್ಕೆ ಕತ್ತರಿ ಹಾಕಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಸಂಬಂಧ ಕೆಲವರನ್ನು ಅಮಾನತು ಸಹ ಮಾಡಲಾಗಿದೆ. ಇಂತಹ ಘಟನೆ ನಡೆದಿರುವುದು ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣದ ತನಿಖೆಗಾಗಿ ತಂಡ ರಚಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ಜನಿವಾರ…