ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ – Kannada News | DC G.M. Gangadharaswamy’s Home Faces Bomb Threat in Davangere; Police Probe
ದಾವಣಗೆರೆ, ಮಾ.4: ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಬಂದ ಕೇವಲ ಒಂದು ತಿಂಗಳ ಅಂತರದಲ್ಲಿ, ಈಗ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸಕ್ಕೂ ಬಾಂಬ್ ಬೆದರಿಕೆ ಬಂದಿರುವುದು ಪೊಲೀಸರನ್ನು ಹೈರಾಣಾಗಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಜಿಲ್ಲಾಧಿಕಾರಿಗಳ ಮನೆಗೆ ಬಿಗಿ ಭದ್ರತೆ ಒದಗಿಸಿದ್ದಾರೆ. ಪೊಲೀಸ್ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬರು, ದಾವಣಗೆರೆ ನಗರದ ರಿಂಗ್ ರೋಡ್‌ನಲ್ಲಿರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರ ಸರ್ಕಾರಿ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ…