‘ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ’; ಕಾಕ್ರೋಚ್ ವಿವಾದಕ್ಕೆ ಸಿಜೆಐ ಸೂರ್ಯಕಾಂತ್ ಬೇಸರ – Kannada News | My statements Misused With Malicious Intent Chief Justice Surya Kant On Cockroach Row
ನವದೆಹಲಿ:, ಆಗಸ್ಟ್ 14: “ದೇಶದ ಯುವಜನರನ್ನು ಹಾದಿತಪ್ಪಿಸುವ ದುರುದ್ದೇಶದಿಂದ ನನ್ನ ಹೇಳಿಕೆಗಳನ್ನು ತಪ್ಪಾಗಿ ಬಿಂಬಿಸಲಾಗಿದೆ ಮತ್ತು ದುರ್ಬಳಕೆ ಮಾಡಿಕೊಳ್ಳಲಾಗಿದೆ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ (CJI Surya Kant) ಹೇಳಿದ್ದಾರೆ. ಮೇ 15ರಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವೊಂದರ ವಿಚಾರಣೆ ನಡೆಸುವಾಗ ಸಿಜೆಐ, ನಕಲಿ ಪದವಿಗಳನ್ನು ಹೊಂದಿರುವ ಕೆಲವು ವ್ಯಕ್ತಿಗಳನ್ನು ಜಿರಳೆಗಳಿಗೆ ಹೋಲಿಸಿದ್ದರು. ಅಂತಹ ವ್ಯಕ್ತಿಗಳು ವ್ಯವಸ್ಥೆಯ ವಿರುದ್ಧ ವಾಗ್ದಾಳಿ ನಡೆಸಲು ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಆರ್‌ಟಿಐ (RTI) ಕಾರ್ಯಕರ್ತರಾಗಿ ಹೊರಹೊಮ್ಮುತ್ತಾರೆ ಎಂದು ಅವರು ಹೇಳಿದ್ದರು….