ಕೋಟಿ ಕೋಟಿ ಆಸ್ತಿ ಇದ್ದರೂ ಗಂಗಾ ತೀರದಲ್ಲಿ ಮಲಗಿದ ಸುನೀಲ್ ಗ್ರೋವರ್; ಕಾಮಿಡಿಯನ್ ಸರಳತೆಗೆ ಫ್ಯಾನ್ಸ್ ಫಿದಾ – Kannada News | Comedian Sunil Grover Slept on the Bank Of Ganga River

ಸುನಿಲ್ ಗ್ರೋವರ್ Image Credit source: Sunil Grover Instagram

ತಮ್ಮ ಅದ್ಭುತ ಹಾಸ್ಯ ಪ್ರಜ್ಞೆಯ ಮೂಲಕ ಕೋಟ್ಯಂತರ ವೀಕ್ಷಕರನ್ನು ನಗಿಸುವ ಜನಪ್ರಿಯ ನಟ ಮತ್ತು ಕಾಮೆಡಿಯನ್ ಸುನೀಲ್ ಗ್ರೋವರ್ (Sunil Grover) ಇತ್ತೀಚೆಗೆ ತಮ್ಮ ಆಧ್ಯಾತ್ಮಿಕ ಮತ್ತು ಸರಳ ಜೀವನದ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಸುನೀಲ್ ಗ್ರೋವರ್ ಇತ್ತೀಚೆಗೆ ಗಂಗಾ ಆರತಿಯನ್ನು ವೀಕ್ಷಿಸಿದ್ದಾರೆ. ಆ ಬಳಿಕ ಭಕ್ತಿ ಮತ್ತು ಪ್ರಶಾಂತತೆಯ ಕ್ಷಣಗಳನ್ನು ಆನಂದಿಸಿದ್ದಾರೆ. ನದಿ ತೀರದಲ್ಲೇ ಅವರು ನಿದ್ರಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ದೀಪಗಳ ಬೆಳಕು, ಮಂತ್ರಘೋಷಗಳ ನಡುವೆ ಮುಳುಗಿದ್ದ ಅವರು, ಯಾವುದೇ ಸ್ಟಾರ್ ಗಿಮಿಕ್ ಇಲ್ಲದೆ ಗಂಗಾ ನದಿಯ ತಟದ ಮೇಲೆ ಸಾಮಾನ್ಯರಂತೆ ಮಲಗಿರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿರುವ ಅವರು ‘ತಾರೆ ಜಮೀನ್ ಪರ್’ (ನೆಲದ ಮೇಲಿನ ನಕ್ಷತ್ರಗಳು) ಎಂದು ಬರೆದುಕೊಂಡಿದ್ದಾರೆ.

25 ಕೋಟಿ ಒಡೆಯನ ಅಪರೂಪದ ಸರಳತೆ!

ಮಾಧ್ಯಮಗಳ ವರದಿಗಳ ಪ್ರಕಾರ, ಸುನೀಲ್ ಗ್ರೋವರ್ ಅವರ ಒಟ್ಟು ಆಸ್ತಿಯ ಮೌಲ್ಯ ಸುಮಾರು 25 ಕೋಟಿ ರೂಪಾಯಿ. ಒಂದು ಕಾಲದಲ್ಲಿ ದಿನಕ್ಕೆ ಕೇವಲ 500 ರೂಪಾಯಿ ದುಡಿಯುತ್ತಿದ್ದ ಸುನೀಲ್, ಇಂದು ಭಾರತದ ಅತ್ಯಂತ ಶ್ರೀಮಂತ ಮತ್ತು ಹೆಚ್ಚು ಸಂಭಾವನೆ ಪಡೆಯುವ ಕಾಮೆಡಿಯನ್‌ಗಳಲ್ಲಿ ಒಬ್ಬರಾಗಿದ್ದಾರೆ. ಇಷ್ಟೊಂದು ಯಶಸ್ಸು ಮತ್ತು ಹಣವಿದ್ದರೂ, ಅವರು ಯಾವುದೇ ಐಷಾರಾಮಿ ಹಮ್ಮು-ಬಿಮ್ಮುಗಳಿಲ್ಲದೆ ನದಿಯ ಘಾಟ್‌ನಲ್ಲಿ ಸಾಧು-ಸಂತರೊಂದಿಗೆ ನೆಲದ ಮೇಲೆ ಮಲಗಿರುವುದು ಅಭಿಮಾನಿಗಳ ಹೃದಯ ಗೆದ್ದಿದೆ.

ಅಭಿಮಾನಿಗಳ ಮೆಚ್ಚುಗೆ: ಸುನೀಲ್ ಅವರ ಈ ಅಪರೂಪದ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ‘ಒಂದೇ ಹೃದಯವನ್ನು ಎಷ್ಟು ಬಾರಿ ಗೆಲ್ಲುತ್ತೀರಿ ಸರ್?’, ‘ನಿಮ್ಮ ಈ ಸರಳತೆಯೇ ನಿಮ್ಮನ್ನು ಅಪ್ರತಿಮ ಕಲಾವಿದನನ್ನಾಗಿ ಮಾಡಿದೆ’ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಚಾರ್ಮ್ ಕಳೆದುಕೊಳ್ಳುತ್ತಿದೆ ಕಪಿಲ್ ಶೋ; ಸುನೀಲ್ ಗ್ರೋವರ್ ಇಲ್ಲವಾದರೆ ಝೀರೋ?

ಕೆಲಸದ ವಿಷಯಕ್ಕೆ ಬರೋದಾದರೆ ಸುನೀಲ್ ಗ್ರೋವರ್ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನಲ್ಲಿ ಬ್ಯುಸಿ ಇದ್ದಾರೆ. ಹಲವು ವರ್ಷಗಳ ಬಳಿಕ ಅವರು ಕಪಿಲ್ ಶರ್ಮಾ ಜೊತೆ ಒಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೇಕೆದಾಟು ಯೋಜನೆಗೆ ತಮಿಳುನಾಡು ಕ್ಯಾತೆ, ಮತ್ತೊಂದು ಹೆಜ್ಜೆ ಮುಂದಿಟ್ಟ ವಿಜಯ್: ಸಿಎಂ ಡಿಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ – Kannada News | Mekedatu Dam Row: Tamil Nadu CM Joseph Vijay Opposes Project; Karnataka CM DK Shivakumar Hits Back Over Bengaluru Water Needs

ಡಿಕೆ ಶಿವಕುಮಾರ್ ಹಾಗೂ ವಿಜಯ್Image Credit source: PTI

ಬೆಂಗಳೂರು, ಜೂನ್ 19: ಕಾವೇರಿ ನದಿ ನೀರಿನ ಹಂಚಿಕೆ ಹಾಗೂ ಮೇಕೆದಾಟು ಜಲಾಶಯ ನಿರ್ಮಾಣದ ವಿಚಾರದಲ್ಲಿ ಕರ್ನಾಟಕ (Karnataka) ಮತ್ತು ತಮಿಳುನಾಡು (Tamil Nadu) ನಡುವಿನ ಕಾನೂನು ಮತ್ತು ರಾಜಕೀಯ ಸಂಘರ್ಷ ಮತ್ತೆ ಬಿಗುವಿನ ರೂಪ ಪಡೆದುಕೊಳ್ಳುವ ಲಕ್ಷಣ ಕಾಣಿಸಿದೆ. ಇತ್ತೀಚೆಗಷ್ಟೇ ಸುಪ್ರೀಂಕೋರ್ಟ್‌ ತಮಿಳುನಾಡು ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕಕ್ಕೆ ನಿರಾಳತೆ ನೀಡಿತ್ತು. ಆದಾಗ್ಯೂ, ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವು ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿದೆ. ತಮಿಳುನಾಡು ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಭಾಷಣದ ಮೂಲಕ, ಯಾವುದೇ ಕಾರಣಕ್ಕೂ ಮೇಕೆದಾಟು ಡ್ಯಾಂ ನಿರ್ಮಿಸಲು ಬಿಡುವುದಿಲ್ಲ ಎಂದು ತಮಿಳುನಾಡು ಪ್ರತಿಜ್ಞೆ ಮಾಡಿದೆ.

ಮುಖ್ಯಾಂಶಗಳು

  • ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡು ಅರ್ಜಿ ವಜಾ.
  • ಮೇಕೆದಾಟು ಯೋಜನೆಗೆ ಕರ್ನಾಟಕ ಸಜ್ಜು.
  • ತಳ ತಲುಪಿದ ಕೆಆರ್​ಎಸ್ ಡ್ಯಾಂ: ಕೃಷಿಗೆ ನೀರಿಲ್ಲ ಎಂದ ಮಂಡ್ಯ ಡಿಸಿ.

ಸಿಎಂ ಡಿಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ

ತಮಿಳುನಾಡು ಸರ್ಕಾರದ ಈ ರಾಜಕೀಯ ಗಿಮಿಕ್‌ಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ‘ಮೇಕೆದಾಟು ಕೇವಲ ನನ್ನ ಹೃದಯಕ್ಕೆ ಹತ್ತಿರವಾದ ಯೋಜನೆಯಲ್ಲ, ಇದು ಇಡೀ ದಕ್ಷಿಣ ಭಾರತದ ಹಿತಾಸಕ್ತಿ ಒಳಗೊಂಡಿರುವ ಪ್ರಾಜೆಕ್ಟ್. ಈ ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿನ ರೈತರಿಗೇ ಹೆಚ್ಚಿನ ಅನುಕೂಲವಾಗಲಿದೆ. ಕೋರ್ಟ್ ಆದೇಶದಂತೆ ಅವರ ಪಾಲಿನ 177 ಟಿಎಂಸಿ ನೀರನ್ನು ಬಿಡಲು ನಾವು ಎಂದಿಗೂ ಬದ್ಧರಾಗಿದ್ದೇವೆ. ಈ ಯೋಜನೆಯಿಂದ ನಾವು ಒಂದು ಬಕೆಟ್ ನೀರನ್ನೂ ಕೃಷಿಗೆ ಬಳಸುವುದಿಲ್ಲ. ಇದು ಕೇವಲ ಬೆಂಗಳೂರಿನ ಕುಡಿಯುವ ನೀರು ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಮಾತ್ರ ಸೀಮಿತವಾಗಿದೆ. ತಮಿಳುನಾಡು ಸರ್ಕಾರದ ಜೊತೆ ಈ ಕುರಿತು ಯಾವುದೇ ಸಮಯದಲ್ಲಿ ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ’ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.

ಬರಿದಾದ ಕಾವೇರಿ, ಕುಡಿಯುವ ನೀರಿಗಷ್ಟೇ ಆದ್ಯತೆ

ಇತ್ತೀಚೆಗೆ ಮುಂಗಾರು ಮಳೆ ಕ್ಷೀಣಿಸಿರುವುದರಿಂದ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಮಟ್ಟ ತಳ ತಲುಪಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಕೈಕೊಟ್ಟಿದ್ದರಿಂದ ಕಾವೇರಿ ನದಿ ಸಂಪೂರ್ಣ ಬರಿದಾಗಿದ್ದು, ಕಳೆದ ವರ್ಷ 15 ಅಡಿಯಷ್ಟಿದ್ದ ನೀರಿನ ಮಟ್ಟ ಈ ಬಾರಿ ಕೇವಲ ಒಂದು ಅಡಿಗೆ ಕುಸಿದಿದೆ. ಕೆಆರ್‌ಎಸ್ (KRS) ಜಲಾಶಯದಲ್ಲಿ ಸದ್ಯ ಲಭ್ಯವಿರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಸಾಧ್ಯವಿದ್ದು, ಕೃಷಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ನೂತನ ಸಿಎಂಗೆ ಆರಂಭದಲ್ಲೇ ಸಾಲು ಸಾಲು ಸವಾಲುಗಳು: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಡಿಕೆ ಶಿವಕುಮಾರ್ ಮಹತ್ವದ ಸಭೆ

ಈ ನಡುವೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಉನ್ನತ ಮಟ್ಟದ ಸಭೆ ನಡೆಸಿ, ರಾಜ್ಯದಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ತುರ್ತು ಯೋಜನೆಗಳನ್ನು ರೂಪಿಸಿದ್ದಾರೆ. ಕರ್ನಾಟಕ ಸರ್ಕಾರವು ಮೇಕೆದಾಟು ಯೋಜನೆಯ ಪರಿಷ್ಕೃತ ವಿವರವಾದ ಯೋಜನಾ ವರದಿಯನ್ನು (DPR) ಕೇಂದ್ರಕ್ಕೆ ಸಲ್ಲಿಸಲು ಸಿದ್ಧತೆ ನಡೆಸಿದ್ದು, ಪರಿಸರ ಇಲಾಖೆಯ ಅನುಮತಿ ಸಿಕ್ಕ ತಕ್ಷಣ ಭೂಮಿ ಪೂಜೆ ನೆರವೇರಿಸಲು ತೀರ್ಮಾನಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೊಡಗು, ಮಂಡ್ಯ, ಮೈಸೂರಿಗೆ ‘ಯೆಲ್ಲೋ ಅಲರ್ಟ್: ಇಂದು ಈ ಜಿಲ್ಲೆಗಳಲ್ಲಿ ಸುರಿಯಲಿದೆ ಗುಡುಗು ಸಹಿತ ಭಾರಿ ಮಳೆ – Kannada News | Karnataka Weather Forecast: Monsoon Weakens, But Heavy Rain Soon; Yellow Alert in South

ಬೆಂಗಳೂರು, ಜೂ.19: ಕರ್ನಾಟಕದಲ್ಲಿ ಸದ್ಯ ಮುಂಗಾರು ಮಳೆ ಕೊಂಚ ಕ್ಷೀಣಿಸಿದ್ದು, ದುರ್ಬಲಗೊಂಡಿದೆ. ಆದಾಗ್ಯೂ ಹವಾಮಾನ ಇಲಾಖೆಯ (IMD) ಇತ್ತೀಚಿನ ವರದಿಯ ಪ್ರಕಾರ ಇಂದು ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಪ್ರಮುಖವಾಗಿ ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ.

ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಆದರೆ ಬರುವ ವಾರ ಅಂದರೆ ಜೂನ್ 22 ರಿಂದ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳಲಿದ್ದು, ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇಂದು ರಾಜ್ಯದಲ್ಲಿ ಗರಿಷ್ಠ ತಾಪಮಾನ 33°C ಹಾಗೂ ಕನಿಷ್ಠ ತಾಪಮಾನ 23°C ಆಸುಪಾಸಿನಲ್ಲಿ ಇರಲಿದೆ.

ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಇಡೀ ಮಲೆನಾಡು ಭಾಗದಲ್ಲಿ ಇಂದು ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆಯು ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಘಾಟ್ ಪ್ರದೇಶಗಳಲ್ಲಿ ಸಂಚರಿಸುವ ಚಾಲಕರು ಜಾಗರೂಕರಾಗಿರಲು ಸೂಚಿಸಲಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಕರಾವಳಿಯ ಕೆಲವು ಭಾಗಗಳಲ್ಲಿ ಸಾಧಾರಣ ಹಾಗೂ ಒಳನಾಡಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಇರಲಿದ್ದು, ಮೀನುಗಾರರು ಎಚ್ಚರಿಕೆ ವಹಿಸಬೇಕು. ಜೂನ್ 22ರ ನಂತರ ಇಲ್ಲಿ ಮಳೆ ಮತ್ತಷ್ಟು ತೀವ್ರಗೊಳ್ಳಲಿದೆ.

ಇದನ್ನೂ ಓದಿ; ರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು: ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದ ಹವಾಮಾನ ತಜ್ಞರು

ಮಲೆನಾಡಿಗೆ ಹೋಲಿಸಿದರೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಸದ್ಯಕ್ಕೆ ಕ್ಷೀಣಿಸಿದೆ. ಕಲಬುರಗಿ, ಬೆಳಗಾವಿ, ಬೀದರ್, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಇಂದು ಪ್ರಧಾನವಾಗಿ ಒಣ ಹವಾಮಾನ ಇರಲಿದೆ. ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 33°C ನಿಂದ 35°C ವರೆಗೆ ದಾಖಲಾಗುವ ಸಾಧ್ಯತೆಯಿದ್ದು, ಸೆಖೆಯ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆಯನ್ನು ಹೊರತುಪಡಿಸಿದರೆ ಭಾರಿ ಮಳೆಯ ಮುನ್ಸೂಚನೆ ಇಲ್ಲ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಮೂಗಿನ ಆಕಾರ ಮತ್ತು ವ್ಯಕ್ತಿತ್ವದ ಬಗ್ಗೆ ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ – Kannada News | Nose Shape Personality Test: Dr Basavaraja Guruji Explains What Your Nose Says About Your Nature as Per Samudrika Shastra

ಮುಖವು ಮನಸ್ಸಿನ ಕನ್ನಡಿ ಎಂಬಂತೆ, ಮುಖದ ಪ್ರತಿಯೊಂದು ಅಂಗವೂ ವ್ಯಕ್ತಿಯ ಸ್ವಭಾವ, ಗುಣ ಮತ್ತು ಭವಿಷ್ಯದ ಬಗ್ಗೆ ಅಮೂಲ್ಯ ಮಾಹಿತಿಯನ್ನು ನೀಡುತ್ತದೆ. ಅದರಲ್ಲೂ ವಿಶೇಷವಾಗಿ ಮೂಗು, ಮುಖದ ಕೇಂದ್ರಬಿಂದುವಾಗಿ ನಮ್ಮ ವ್ಯಕ್ತಿತ್ವವನ್ನು ಎತ್ತಿ ತೋರಿಸುವ ಪ್ರಮುಖ ಅಂಗವಾಗಿದೆ. ಪ್ರಾಚೀನ ವೈದಿಕ ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದ ಪ್ರಕಾರ, ಮೂಗಿನ ಆಕಾರವನ್ನು ಗಮನಿಸಿ ವ್ಯಕ್ತಿಯ ಗುಣಲಕ್ಷಣಗಳನ್ನು ವಿಶ್ಲೇಷಿಸಬಹುದು ಎಂಬುದನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ, ಅಂದರೆ, ‘ಟಿವಿ9’ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ.

ವಿವಿಧ ಆಕಾರಗಳ ಮೂಗು ವಿಭಿನ್ನ ಅರ್ಥಗಳನ್ನು ಹೊಂದಿದೆ. ಉದಾಹರಣೆಗೆ, ನೇರ ಮತ್ತು ಚೂಪಾದ ಮೂಗು ಹೊಂದಿರುವವರು ತೀಕ್ಷ್ಣ ಬುದ್ಧಿವಂತರು, ಶಿಸ್ತುಬದ್ಧರು ಹಾಗೂ ಕಠಿಣ ಪರಿಶ್ರಮಿಗಳಾಗಿರುತ್ತಾರೆ. ಗಿಳಿಯ ಮೂಗಿನಂತೆ ಬಾಗಿದ ಮೂಗು ಇರುವವರು ಪ್ರಾಮಾಣಿಕರು, ನಿಷ್ಠಾವಂತರು ಮತ್ತು ಸ್ವಪ್ರಯತ್ನದಿಂದ ಯಶಸ್ಸು ಸಾಧಿಸುವವರು. ಅಗಲವಾದ ಮೂಗು ಹೊಂದಿರುವವರು ನಾಯಕತ್ವ ಗುಣ, ಸಾಮಾಜಿಕ ಕಳಕಳಿ ಹಾಗೂ ಆಡಳಿತಾತ್ಮಕ ಸಾಮರ್ಥ್ಯ ಹೊಂದಿರುತ್ತಾರೆ. ಚಿಕ್ಕ ಅಥವಾ ಚಪ್ಪಟೆಯಾದ ಮೂಗು ಇರುವವರು ಭಾವಜೀವಿಗಳು, ಬಾಂಧವ್ಯಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡುವವರು ಹಾಗೂ ಕೌಶಲ್ಯವಂತರಾಗಿರುತ್ತಾರೆ ಎಂದು ಅವರು ವಿವರಿಸಿದ್ದಾರೆ. ಕೈರೇಖೆಗಳಂತೆ ಮೂಗಿನ ಆಕಾರವೂ ನಮ್ಮ ಅದೃಷ್ಟ ಮತ್ತು ಭವಿಷ್ಯದ ರಹಸ್ಯಗಳನ್ನು ಒಳಗೊಂಡಿರುತ್ತದೆ. ಇದು ಕೇವಲ ದೈಹಿಕ ಲಕ್ಷಣವಾಗಿರದೆ, ವ್ಯಕ್ತಿಯ ಅಸಲಿ ಸ್ವಭಾವ ಮತ್ತು ಜೀವನದ ಹಾದಿಯ ಮೇಲೆ ಪ್ರಭಾವ ಬೀರುವ ಒಂದು ಪ್ರಮುಖ ಜ್ಯೋತಿಷ್ಯ ಸೂಚಕವಾಗಿದೆ ಎಂದು ಅವರು ಹೇಳಿದ್ದಾರೆ.

Source link

ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ!; ರಾಹುಕಾಲದ ಎಚ್ಚರಿಕೆ ಯಾರಿಗೆ? – Kannada News | TV9 Kannada Horoscope Today: Effects on All 12 Zodiac Signs by Basavaraj Guruji

ಬೆಂಗಳೂರು, ಜೂ.19: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 19-06-2026, ಶುಕ್ರವಾರದ ದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಪಂಚಮಿ ಮತ್ತು ಆಶ್ಲೇಷ ನಕ್ಷತ್ರವಿರುವ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ರಾಹುಕಾಲವು ಬೆಳಗ್ಗೆ 10:43 ರಿಂದ 12:19 ರ ವರೆಗೆ ಇರುತ್ತದೆ. ಸಂಕಲ್ಪ ಕಾಲ, ಸರ್ವ ಸಿದ್ಧಿ ಮತ್ತು ಶುಭ ಕಾಲವು ಮಧ್ಯಾಹ್ನ 12:20 ರಿಂದ 1:57 ರ ವರೆಗೆ ಇರುತ್ತದೆ. ಇಂದಿನ ದಿನ ಶುಕ್ರವಾರ ಮತ್ತು ಶ್ರುತ ಪಂಚಮಿ ಆಗಿದ್ದು, ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಶುಭಕರವಾಗಿದೆ. ಆಶ್ಲೇಷ ನಕ್ಷತ್ರವು ಕರ್ಕಾಟಕ ರಾಶಿಯಲ್ಲಿ ಚಂದ್ರನ ಸಂಚಾರದೊಂದಿಗೆ ಗಜಕೇಸರಿ ಯೋಗವನ್ನು ಸೃಷ್ಟಿಸಿದೆ. ಡಾ. ಬಸವರಾಜ ಗುರೂಜಿ ಅವರು ಮೇಷದಿಂದ ಮೀನದವರೆಗಿನ ದ್ವಾದಶ ರಾಶಿಗಳಿಗೆ ಗ್ರಹಗಳ ಶುಭ ಫಲಗಳು, ಆರೋಗ್ಯ, ಉದ್ಯೋಗ, ಆರ್ಥಿಕ ಸ್ಥಿತಿ, ಮತ್ತು ಸಂಬಂಧಗಳ ಕುರಿತು ವಿವರವಾದ ಭವಿಷ್ಯವನ್ನು ನೀಡಿದ್ದಾರೆ. ಪ್ರತಿಯೊಂದು ರಾಶಿಗೆ ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ಜಪಿಸಬೇಕಾದ ಮಂತ್ರವನ್ನೂ ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯವಹಾರ ಹಲವು ತಿರುವುಗಳಿಂದ ಇರಲಿದೆ.. – Kannada News | Dina Rashi Bhavishya June 19, 2026: Daily Horoscope Predictions for Friday

ಮೇಷ ರಾಶಿ :

ಇಂದು ಆರ್ಥಿಕ ಸಹಾಯಕ್ಕಾಗಿ ನಿಮ್ಮನ್ನು ಯಾರಾದರೂ ಕೇಳಬಹುದು. ಹಗಲು ಪ್ರಯಾಣದಿಂದ ನಿಮ್ಮ ಮಾನಸಿಕ ಶಕ್ತಿ ಹೆಚ್ಚಾಗುವುದು. ಮುಂದಿನ ಹಾದಿಗೆ ದಾರಿ ತೋರುವುದು. ಆದರೆ ಕೆಲವೊಮ್ಮೆ ಒತ್ತಡದ ಸಂದರ್ಭಗಳು ಎದುರಾಗಬಹುದು. ಆದರೆ, ನಿಮ್ಮ ಆಂತರಿಕ ಶಕ್ತಿ ಅದನ್ನು ನಿಭಾಯಿಸಬಲ್ಲದು. ಹಣದ ವ್ಯವಹಾರಗಳಲ್ಲಿ ದೃಢವಾಗಿರಿ. ಕೊಡುಕೊಳ್ಳುವ ವ್ಯವಹಾರದಲ್ಲಿ ಸಣ್ಣ ಬೇಸರವಾಗಬಹುದು. ವಿವಾಹದ ಮಾತುಕತೆ ನಡೆಯಬಹುದು. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಿರಿ.

ವೃಷಭ ರಾಶಿ :

ಹಣದ ಉಳಿತಾಯದಿಂದ ಅನಿವಾರ್ಯವಾದ ಆಭರಣಗಳನ್ನು ಖರೀದಿಸುವಿರಿ. ನಿಮ್ಮನ್ನು ಬೇರೆಯರಿಗಿಂತ ವಿಭಿನ್ನವನ್ನಾಗಿ ತೋರಿಸಬಹುದು. ಆದರೆ, ಪ್ರತಿಯೊಂದು ಮಾತು ಎಣಿಕೆಯಿಂದ ಮಾತಾಡಿ. ಬೇರೆವರಿಗಿಂತ ಭಿನ್ನವಾಗಿರಲು ಇಷ್ಟಪಡುವಿರಿ. ಹಣಕಾಸಿನಲ್ಲಿ ಹೊಸ ದಿಕ್ಕು ಕಂಡುಬರುವ ಸಾಧ್ಯತೆ ಇದೆ. ಸ್ವಾಭಿಮಾನಕ್ಕೆ ಧಕ್ಕೆಯಾಗಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಬೇಕಾದೀತು.

ಮಿಥುನ ರಾಶಿ :

ನಿಮ್ಮ ನಷ್ಟವನ್ನು ಮರೆಮಾಚಲು ತಂತ್ರವನ್ನು ಹೂಡುವಿರಿ. ಕೆಲಸದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ಸಿಗಬಹುದು. ನಿಮ್ಮೊಳಗಿನ ಪ್ರಪಂಚ ನಿಮ್ಮನ್ನು ದೂಡಿ ಹೊರಹಾಕಬಹುದು. ಮನಸ್ಸಿನಲ್ಲಿ ಗಾಬರಿಯ ಸ್ಥಿತಿಯನ್ನು ನಿವಾರಿಸಿಕೊಳ್ಳಿ. ಮನೆಯಲ್ಲಿನ ಪರಿಸ್ಥಿತಿಯಲ್ಲಿ ಸುಧಾರಣೆ ಸಾಧ್ಯ. ಅಳುಕುವ ಅವಶ್ಯಕತೆ ಇಲ್ಲ.‌ ಎಲ್ಲವೂ ನಿಮಗೆ ತಿಳಿದೇ ಆಗಬೇಕು ಎನ್ನುವ ಹಠವಿರುವುದು. ಸಹೋದರನಿಂದ ಯಾವ ಸಹಕಾರವನ್ನು ನಿರೀಕ್ಷಿಸದೇ ಕಾರ್ಯಪ್ರವೃತ್ತರಾಗುವಿರಿ.

ಕರ್ಕಾಟಕ ರಾಶಿ :

ಹೊಸದಾಗಿ ನಿಮ್ಮ ಸಹವಾಸಕ್ಕೆ ಸೇರಿದವರ ಮೇಲೆ ಹದ್ದಿನ ಕಣ್ಣಿಡಿ. ನಿಮ್ಮ ಉತ್ಸಾಹ ಇತರರನ್ನೂ ಪ್ರೇರೇಪಿಸಬಹುದು. ಕೆಲಸಗಳಲ್ಲಿ ಹೆಚ್ಚಿನ ಗಮನ ಬೇಕಾಗಿರುತ್ತದೆ. ಆದರೆ, ಸಮಯ ಸರಿಯಾಗಿ ಬಳಸಿಕೊಳ್ಳುವುದು ಮುಖ್ಯ. ಹಣದ ವಿಚಾರದಲ್ಲಿ ನಿರ್ಧಾರ ಸರಿಯಾಗಿ ತೆಗೆದುಕೊಳ್ಳಿ. ಆತುರದ ನಿರ್ಧಾರಕ್ಕೆ ನಷ್ಟವೊಂದೇ ಫಲ. ದ್ವಿಚಕ್ರ ವಾಹನದಲ್ಲಿ ಆಯ ತಪ್ಪಬಹುದು. ಅದನ್ನು ಯೋಜನೆ ಗೊಳಿಸಿ. ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ.

ಸಿಂಹ ರಾಶಿ :

ನಿಮ್ಮ ಇಷ್ಟದ‌ ಕಾರ್ಯವನ್ನು ಮಾಡಿ ಸಂತೋಷಗೊಳ್ಳುವಿರಿ. ನಿಮ್ಮ ಶ್ರಮಕ್ಕೆ ಕೂಡಲೇ ಫಲ ಸಿಗುತ್ತದೆ ಎನ್ನುವ ಧಾವಂತ‌ ಬೇಡ. ತಾಳ್ಮೆಯ ಅವಶ್ಯಕತೆ ಇದೆ. ನಿಮ್ಮ ಉತ್ಸಾಹವನ್ನು ಉಳಿಸಿಕೊಂಡು ಮುಂದೆ ಸಾಗಬೇಕು. ಹಣಕಾಸಿನ ಚಿಂತೆ ಇತ್ತು ಸಹ ಪರಿಹಾರ ದೊರೆಯಬಹುದು. ಸಲಹೆಯನ್ನು ಸ್ವೀಕರಿಸಿ ಕ್ರಮಬದ್ಧವಾಗಿ ಆಚರಿಸಿ.‌ ಪ್ರಯಾಣದಲ್ಲಿ ಪ್ರೇಮವಾಗುವ ಸಂಭವವಿದೆ. ಸಜ್ಜನರ ಸಹವಾಸ ಸಿಗುವುದು. ಅವರನ್ನು ಆಡಿಕೊಳ್ಳಬೇಡಿ. ಮಕ್ಕಳು ನಿಮ್ಮನ್ನು ಕಂಡು ಹಾಸ್ಯ ಮಾಡಿಯಾರು.‌

ಕನ್ಯಾ ರಾಶಿ :

ನಿಮಗೆ ಇಂದು ಏನಾದರೂ ಹೊಸತನ್ನು ಮಾಡಬೇಕು ಎಂದು ಅನ್ನಿಸುವುದು. ಸ್ಪಷ್ಟತೆಯ ಜೊತೆ ಮುಂದೆ ಸಾಗಿರಿ. ನೀವು ಕುಟುಂಬದ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಿ ಗೊತ್ತಾಗುವುದು. ಹಲವು ರೀತಿಯ ವಿರೋಧವನ್ನು ನೀವು ತೆಗೆದುಕೊಳ್ಳುವ ತೀರ್ಮಾನದಿಂದ ಬರಲಿದೆ. ಭೂ ವ್ಯವಹಾರವು ಇತ್ಯರ್ಥ ಆಗುವುದು ಕಷ್ಟ. ಚೆನ್ನಾಗಿ ಮಾತನಾಡುತ್ತೇನೆಂದು ಬೇರೆಯವರಿಗೆ ನೋವನ್ನು ಕೊಡಬೇಡಿ. ನಗುಮುಖದಿಂದ ಇಂದು ಇದ್ದರು ನಿಮ್ಮ ಬಳಿ ಅನೇಕರು ಮಾತನಾಡಲು ಬರಬಹುದು.

ತುಲಾ ರಾಶಿ :

ನಿಮ್ಮ ಮಾನಸಿಕ ಹಿತಕ್ಕಾಗಿ ಕೆಲಸ ಕೆಲಸ ಮಾಡುವಿರಿ. ಕೆಲಸಗಳಲ್ಲಿ ವಿಶಿಷ್ಟ ಯಶಸ್ಸುಗಳು ಸಂಭವಿಸಬಹುದು. ಆದರೆ, ಕೆಲಸದ ಒತ್ತಡ ಜಾಸ್ತಿಯಾಗಬಹುದು. ಹಣದ ವ್ಯವಹಾರಗಳಲ್ಲಿ ನಿರ್ಣಯ ದೃಢವಾಗಿರಲಿ. ಸ್ವಭಾವವನ್ನು ತಿದ್ದಿಕೊಳ್ಳಲಾಗದೇ ಎಲ್ಲರಿಂದ ನಿಂದನೆಗೆ ಒಳಗಾಗುವಿರಿ. ಸಮಾಜದಲ್ಲಿ ಉತ್ತಮ ಸ್ಥಾನವನ್ನು ಪಡೆಯುವ ಸಾಧ್ಯತೆ ಇದೆ. ನಿಮ್ಮ ಶ್ರಮದ ಬಗ್ಗೆ ಕಹಿಯಾದ ಮಾತುಗಳು ಕೇಳಿಬರಬಹುದು. ಸಾಮಾಜಿಕ ಕಾರ್ಯದಲ್ಲಿ ಅವಮಾನದ ಕಾರಣದಿಂದ ಅದನ್ನು ಮಾಡಲು ಹಿಂದೇಟು ಹಾಕುವಿರಿ.

ವೃಶ್ಚಿಕ ರಾಶಿ :

ಇಂದು ವೃತ್ತಿಯಲ್ಲಿ ಸಮಯ ಬದಲಾವಣೆ ಆಗುವ ಸಾಧ್ಯತೆ ಇದೆ‌. ಸೌಂದರ್ಯದ ಸಾಧನಗಳನ್ನು ಸ್ತ್ರೀಯರು ಹೆಚ್ಚು ಬಳಸುವರು. ಮಕ್ಕಳ ಕಡೆ ಗಮನ ಹೆಚ್ಚು ಬೇಕಾಗುವುದು. ನಿರುತ್ಸಾಹದ ಮಾತಿಗೆ ಕಿವಿಯಾಗದೇ ಇದ್ದರೆ ಒಳ್ಳೆಯದು. ಕೆಲಸವು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತದೆ. ದಂಪತಿಗಳ ನಡುವೆ ಸಾಮರಸ್ಯವಿರುವುದು. ಬೇಸರವಾಗಿ ಎಲ್ಲವೂ ಅಶಾಶ್ವತ ಎಂದೆನಿಸಬಹುದು. ಗೆಳೆತನಕ್ಕೆ ಹೊಸ ವ್ಯಕ್ತಿಗಳು ಸಿಗುವರು.‌

ಧನು ರಾಶಿ :

ಇಂದು ನಿಮ್ಮ ಪರೀಕ್ಷೆಗೆಂದು ಕೆಲವು ಘಟನೆಗಳು ನಡೆಯಬಹುದು. ಇಂದಿನ‌ ಯೋಜನೆಗಳು ಕೊನೆಯ ಕ್ಷಣದಲ್ಲಿ ಬದಲಾಗಬಹುದು.‌ ನಿಮ್ಮ ಕಾರ್ಯಕ್ಷಮತೆ ಇತರರನ್ನು ಪ್ರಭಾವಿತ ಮಾಡುತ್ತದೆ. ಹಿರಿಯರಿಂದ ಮೆಚ್ಚುಗೆ ಸಿಗಬಹುದು. ಹಣಕಾಸಿನ ಪರಿಸ್ಥಿತಿ ಸಮೃದ್ಧವಾಗಬಹುದು. ವಾಹನ ಚಾಲನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವುದು ಉತ್ತಮ. ಮನಸ್ಸು ಹೇಳಿದಂತೆ ಕೇಳಬೇಡಿ, ಸಮಾಧಾನದಿಂದ ಇರಿ. ನೀವು ಉದ್ಯೋಗವನ್ನು ವಿನಮ್ರಭಾವದಿಂದ ನಡೆಸುವಿರಿ.

ಮಕರ ರಾಶಿ :

ನೀವಾಡುವ ಮಾತುಗಳು ನಿಮಗೆ ಮಾತ್ರ ಖುಷಿ ಕೊಡಬಹುದು. ಇಂದು ನಿಮಗೆ ಸಿಗುವ ಬೆಂಬಲ ಇಲ್ಲವಾಗುವುದು. ಕೆಲಸದಲ್ಲಿ ಬದಲಾವಣೆ ಅಥವಾ ಹೊಸ ಅವಕಾಶ ಸಿಗಬಹುದು. ಹಣಕಾಸಿನ ವಿಷಯಗಳಲ್ಲಿ ತಾಳ್ಮೆಯಿಂದ ನಡೆದುಕೊಳ್ಳಿ. ಮನಸ್ಸನ್ನು ಕಡಿಮಾಣ ಹಾಕಿ ನಿಲ್ಲಿಸುವುದು ಉತ್ತಮ. ಮಕ್ಕಳು ಉತ್ಸಾಹದಿಂದ ದಿನವನ್ನು ಪ್ರಾರಂಭಿಸಲಿದ್ದು ಅವರಿಗೆ ಕೊಡಬೇಕಾದ ತಿಳಿವಳಿಕೆಯನ್ನು ಆಗಲೇ ಕೊಡುವುದು ಉತ್ತಮ. ನಿರುಪಯೋಗಿ ವಸ್ತುಗಳನ್ನು ನೀವು ದೂರ ಮಾಡುವಿರಿ.

ಕುಂಭ ರಾಶಿ :

ಹಿರಿಯರ ಆದೇಶದಂತೆ ಮನೆಯಲ್ಲಿ ಮಂಗಲ ಕಾರ್ಯವನ್ನು ಮಾಡುವಿರಿ. ಸ್ನೇಹಿತರಿಂದ ನೆರವು ಸಿಗಬಹುದು. ಏನೇ ಮಾಡಿದರೂ ವಿರೋಧಿಗಳ ಮೀರಿಸುವ ಸಾಮರ್ಥ್ಯ ಬರದು. ಭವಿಷ್ಯದ ಬಗ್ಗೆ ಚಿಂತೆ ಮಾಡದಿರಿ, ಕಾಲ ಸರಿದಂತೆ ಪರಿಹಾರ ಸಿಗುತ್ತದೆ. ಕೆಲವು ಸಮಯದಲ್ಲಿ ಮನಸ್ಸಿಗೆ ನೆಮ್ಮದಿ ಸಿಗಬಹುದು. ನಿಮ್ಮಷ್ಟಕ್ಕೆ ಕಾರ್ಯದಲ್ಲಿ ಮಗ್ನರಾಗಿರುವಿರಿ. ಆಯಾಸವಾದರೆ ವಿಶ್ರಾಂತಿಯ ಜೊತೆ ಕೆಲಸವನ್ನು ಮಾಡಿ. ಗುರಿಯೆಡಗೆ ಪ್ರಯತ್ನವು ನಿರಂತರವಾಗಿರಲಿ.

ಮೀನ ರಾಶಿ :

ಇಂದು ಅನ್ಯರಿಗೆ ಕೊಡಬೇಕಾದ ವಸ್ತುವನ್ನು ಇಟ್ಟುಕೊಳ್ಳುವುದು ಬೇಡ. ಉದ್ಯೋಗಸ್ಥರಿಗೆ ಬಡ್ತಿಯ ಸಾಧ್ಯತೆ ಇದೆ. ಕೆಲವರು ನಿಮ್ಮ ಪ್ರತಿಭೆಯನ್ನು ಗುರುತಿಸುತ್ತಾರೆ. ಇನ್ನೊಬ್ಬರ ಬಗ್ಗೆ ಅಂದುಕೊಂಡಿದ್ದು ಸತ್ಯವಾಗಲಿದೆ. ಆತ್ಮವಿಶ್ವಾಸದಿಂದ ಮುಂದೆ ಸಾಗಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ. ಇಂದು ನಿಮ್ಮ ಮಹತ್ತ್ವದ ಕಾರ್ಯವು ಕೈಗೂಡಬಹುದು. ಹಳೆಯ ಸಮಾಚಾರವನ್ನು ಪುನಃ ನೆನಪಿಸಿಕೊಳ್ಳುವಿರಿ. ಮಾತನ್ನು ಕಡಿಮೆ‌ ಮಾಡಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಮೃಗಶಿರಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಆಶ್ಲೇಷ, ಯೋಗ : ವೃದ್ಧಿ, ಕರಣ : ತೈತಿಲ, ಸೂರ್ಯೋದಯ – 05 – 55 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:45 – 12:21, ಯಮಗಂಡ ಕಾಲ 15:34 – 17:10, ಗುಳಿಕ ಕಾಲ 07:32 – 09:08

– ಲೋಹಿತ್ ಹೆಬ್ಬಾರ್ – 8762924271 (what’s app only)

Source link

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ – Kannada News | Priya Mitra Narendra Jai Hind French President Macrons farewell message for PM Modi in Hindi Video Goes Viral

ಪ್ಯಾರಿಸ್, ಜೂನ್ 18: ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi in France) ಫ್ರಾನ್ಸ್ ಪ್ರವಾಸ ಮುಗಿಸಿದ್ದಾರೆ. ಈ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಳ ಆತ್ಮೀಯವಾದ ಬೀಳ್ಕೊಡುಗೆ ನೀಡಿರುವುದು ಜಗತ್ತಿನ ಗಮನ ಸೆಳೆದಿದೆ. ಭಾರತದ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಪ್ರಧಾನಿ ಮೋದಿಯವರಿಗೆ ಹಿಂದಿಯಲ್ಲೇ ವಿದಾಯ ಹೇಳಿರುವ ವಿಡಿಯೋ ಭಾರೀ ವೈರಲ್ ಆಗಿದೆ.

ಜಿ7 ಶೃಂಗಸಭೆಯ ಪ್ರವಾಸದ ಕೊನೆಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ವಿಡಿಯೋ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮ್ಯಾಕ್ರನ್, “ಪ್ರಿಯ ಮಿತ್ರ ನರೇಂದ್ರ, ನಿಮ್ಮ ಈ ಭೇಟಿಯಿಂದ ನನಗೆ ತುಂಬಾ ಸಂತೋಷವಾಗಿದೆ, ನಿಮ್ಮನ್ನು ಸ್ವಾಗತಿಸುತ್ತಾ, ಫ್ರಾನ್ಸ್ ಮತ್ತು ಭಾರತದ ಸ್ನೇಹ ಅಮರವಾಗಲಿ. ಜೈ ಹಿಂದ್” ಎಂದು ಹಿಂದಿ ಭಾಷೆಯಲ್ಲಿ ಮಾತನಾಡಿದ್ದಾರೆ.

“ನಾನು ಹೇಳಿದ್ದು ಸರಿಯಾಗಿದೆ ಎಂದು ಭಾವಿಸುತ್ತೇನೆ. ನಿಮ್ಮ ಭೇಟಿಗೆ ಧನ್ಯವಾದಗಳು. ನಮ್ಮ ಸ್ನೇಹಕ್ಕಾಗಿ ಧನ್ಯವಾದಗಳು. ಇದೊಂದು ಅತ್ಯಂತ ಫಲಪ್ರದ ಭೇಟಿಯಾಗಿದೆ. ಫ್ರಾನ್ಸ್ ನಿಮ್ಮನ್ನು ಪ್ರೀತಿಸುತ್ತದೆ. ಮುಂಬರುವ ಫೆಬ್ರವರಿಯಲ್ಲಿ ನಾವು ನಿಮ್ಮನ್ನು ಮತ್ತೊಮ್ಮೆ ಭೇಟಿಯಾಗಲು ಉತ್ಸುಕರಾಗಿದ್ದೇವೆ. ಜೈ ಹಿಂದ್” ಎಂದು ಬಳಿಕ ಇಂಗ್ಲಿಷ್​​ನಲ್ಲಿ ಮ್ಯಾಕ್ರನ್ ಮಾತನಾಡಿದ್ದಾರೆ.

(Video Source: Elysee Palace via XP Division, MEA)

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಗತ್ತಿನಲ್ಲೇ ಅತಿ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆ ನಮ್ಮದು; ಪ್ಯಾರಿಸ್‌ನ ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ – Kannada News | Worlds Fastest Growing Economy PM Modi Hails India At Paris diaspora event

ಪ್ಯಾರಿಸ್, ಜೂನ್ 18: ಪ್ರಧಾನಿ ನರೇಂದ್ರ ಮೋದಿ (PM Modi in France) ಫ್ರಾನ್ಸ್​ ಪ್ರವಾಸದ ಕೊನೆಯ ಹಂತವಾಗಿ ಪ್ಯಾರಿಸ್​​ಗೆ ಭೇಟಿ ನೀಡಿದ್ದಾರೆ. ಇಲ್ಲಿ ಮೋದಿಗಾಗಿ “ಬೊಂಜೊರ್ ಮೋದಿ” ಎಂಬ ವಿಶೇಷ ಕಾರ್ಯಕ್ರಮವನ್ನು ಭಾರತೀಯ ವಲಸಿಗರು ಆಯೋಜಿಸಿದ್ದರು. ಇದರಲ್ಲಿ ಪಾಲ್ಗೊಂಡ ಮೋದಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪ್ರಸ್ತುತ ಭಾರತವು ತಂತ್ರಜ್ಞಾನ ಮತ್ತು ನಾವೀನ್ಯತೆಯ ಜಾಗತಿಕ ಕೇಂದ್ರವಾಗಿ ಹೇಗೆ ಬದಲಾಗುತ್ತಿದೆ ಎಂಬುದನ್ನು ಮೋದಿ ವಿವರಿಸಿದರು. ಭಾರತ ಭವಿಷ್ಯದ ಸಿದ್ಧತೆಯನ್ನು ಮಾತ್ರ ಮಾಡುತ್ತಿಲ್ಲ, ಅದು ಭವಿಷ್ಯವನ್ನು ರೂಪಿಸುತ್ತಿದೆ ಎಂದು ಹೇಳಿದರು. ಕಳೆದ ಒಂದು ದಶಕದಲ್ಲಿ ಭಾರತವು ತಂತ್ರಜ್ಞಾನದ ಸಹಾಯದಿಂದ ದೊಡ್ಡ ಆರ್ಥಿಕ ಮತ್ತು ಸಾಮಾಜಿಕ ಪರಿವರ್ತನೆಗೆ ಸಾಕ್ಷಿಯಾಗಿದೆ ಎಂದರು.

“ಜಗತ್ತಿನ ಒಟ್ಟು ಡಿಜಿಟಲ್ ವಹಿವಾಟುಗಳಲ್ಲಿ ಶೇ. 50ರಷ್ಟು ಭಾರತದಲ್ಲೇ ನಡೆಯುತ್ತಿವೆ. ಭಾರತದ ಹೆಮ್ಮೆಯ ‘ಯುಪಿಐ’ ತಂತ್ರಜ್ಞಾನ ಈಗ ಫ್ರಾನ್ಸ್‌ನಲ್ಲೂ ಲಭ್ಯವಿರುವುದನ್ನು ನೋಡಿ ಖುಷಿಯಾಗುತ್ತಿದೆ. ತಂತ್ರಜ್ಞಾನದ ಲಾಭ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿದಾಗಲೇ ನಿಜವಾದ ಪ್ರಗತಿ ಸಾಧ್ಯ. ಫ್ರಾನ್ಸ್‌ನಲ್ಲಿ ನೆಲೆಸಿರುವ ಭಾರತೀಯರು ಎರಡು ದೇಶಗಳ ನಡುವಿನ ಬಾಂಧವ್ಯದ ಜೀವಂತ ಸೇತುವೆಯಾಗಿದ್ದಾರೆ. ಅವರು ತಮ್ಮ ಕಠಿಣ ಪರಿಶ್ರಮದಿಂದ ಭಾರತದ ಸಂಸ್ಕೃತಿ ಮತ್ತು ಮೌಲ್ಯಗಳನ್ನು ವಿದೇಶಿ ಮಣ್ಣಿನಲ್ಲಿ ಎತ್ತಿಹಿಡಿಯುತ್ತಿದ್ದಾರೆ” ಎಂದು ಮೋದಿ ಶ್ಲಾಘಿಸಿದರು.

ಭಾರತ-ಫ್ರಾನ್ಸ್ ಸಂಬಂಧಗಳನ್ನು ಬಲಪಡಿಸುವಲ್ಲಿ ಅನಿವಾಸಿ ಭಾರತೀಯರ ಕೊಡುಗೆಯನ್ನು ಶ್ಲಾಘಿಸಿದ ಅವರು, ವಿದೇಶದಲ್ಲಿ ವಾಸಿಸುತ್ತಿರುವ ಸಮುದಾಯದಲ್ಲಿ ಪ್ರತಿಫಲಿಸುತ್ತಿರುವ ಭಾರತದ ಸಾಂಸ್ಕೃತಿಕ ವೈವಿಧ್ಯತೆಯನ್ನು ಕೊಂಡಾಡಿದರು. “ಪ್ಯಾರಿಸ್ ಬೆಳಕಿನ ನಗರಿ. ಇದು ಬಣ್ಣಗಳ ನಗರ. ಇಲ್ಲಿ ಆಲೋಚನೆಗಳಿವೆ ಮತ್ತು ನಾವೀನ್ಯತೆಗೆ ಸ್ಫೂರ್ತಿಯಿದೆ. ಭಾರತದ ವಿವಿಧ ರಾಜ್ಯಗಳಿಂದ ಬಂದಿರುವ ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸಿದ್ದೀರಿ. ನೀವು ಇದಕ್ಕೆ ಹೊಸ ಬಣ್ಣಗಳನ್ನು ತುಂಬಿದ್ದೀರಿ. ಇಲ್ಲಿ ಕೆಲವರು ತಮಿಳರು, ಕೆಲವರು ಪಂಜಾಬಿಗಳು, ಕೆಲವರು ಗುಜರಾತಿಗಳು, ಕೆಲವರು ಮರಾಠಿಗರು ಮತ್ತು ಕೆಲವರು ಬೆಂಗಾಲಿಗಳಿದ್ದಾರೆ. ಭಾರತದ ಪ್ರತಿಯೊಂದು ಮೂಲೆಯೂ ಇಲ್ಲಿ ಪ್ರತಿನಿಧಿಸಲ್ಪಟ್ಟಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: ಪ್ಯಾರಿಸ್‌ಗೆ ಪ್ರಧಾನಿ ಮೋದಿ ಆಗಮನ: ಜಾಗತಿಕ ಪ್ರಗತಿಗೆ ಭಾರತ-ಫ್ರಾನ್ಸ್ ಸಹಭಾಗಿತ್ವ ಅತ್ಯಗತ್ಯ

ದ್ವಿಪಕ್ಷೀಯ ಬಾಂಧವ್ಯವನ್ನು ಗಟ್ಟಿಗೊಳಿಸುವಲ್ಲಿ ಭಾರತೀಯ ಸಮುದಾಯದ ಪಾತ್ರವನ್ನು ಒತ್ತಿಹೇಳಿದ ಪ್ರಧಾನಿ ಮೋದಿ, “ಅನಿವಾಸಿ ಭಾರತೀಯರು ಭಾರತ ಮತ್ತು ಫ್ರಾನ್ಸ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ ಪ್ರಮುಖ ಪಿಲ್ಲರ್ ಆಗಿ ಹೊರಹೊಮ್ಮಿದ್ದಾರೆ” ಎಂದರು.


ಕಳೆದ ದಶಕದಲ್ಲಿ ಭಾರತ ಸಾಧಿಸಿದ ಪ್ರಗತಿಯನ್ನು ಎತ್ತಿಹಿಡಿದ ಅವರು, ಕಳೆದ 12 ವರ್ಷಗಳು ದೇಶದ 140 ಕೋಟಿ ಜನರ ಅಪಾರ ಸಾಮರ್ಥ್ಯವನ್ನು ಜಗತ್ತಿಗೆ ಸಾಬೀತುಪಡಿಸಿವೆ ಎಂದರು. “ಈ ಅವಧಿಯಲ್ಲಿ ಭಾರತದ ಜಿಡಿಪಿ (GDP) ದ್ವಿಗುಣಗೊಂಡಿದೆ. ವಿಮಾನ ನಿಲ್ದಾಣಗಳ ಸಂಖ್ಯೆ ದುಪ್ಪಟ್ಟಾಗಿದೆ. ವಿಶ್ವವಿದ್ಯಾಲಯಗಳ ಸಂಖ್ಯೆಯೂ ದ್ವಿಗುಣಗೊಂಡಿದೆ. ಹೆದ್ದಾರಿ ನಿರ್ಮಾಣದ ವೇಗ ದುಪ್ಪಟ್ಟಾಗಿದೆ” ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮೋದಿ ಬಹಳ ಸುಂದರ ವ್ಯಕ್ತಿ, ಕೆಲಸದ ವಿಷಯದಲ್ಲಿ ಮಾತ್ರ ಕಿಲ್ಲರ್; ಗೆಳೆಯನನ್ನು ಹೊಗಳಿದ ಟ್ರಂಪ್

“ಕಳೆದ 12 ವರ್ಷಗಳಲ್ಲಿ ಭಾರತದ ರಫ್ತು 35 ಪಟ್ಟು ಹೆಚ್ಚಾಗಿದೆ. ಭಾರತದಲ್ಲಿ ಮೊಬೈಲ್ ಫೋನ್ ಉತ್ಪಾದನಾ ಘಟಕಗಳು ನೂರು ಪಟ್ಟು ಹೆಚ್ಚಾಗಿವೆ. ಭಾರತವು ಇಂದು ವಿಶ್ವದ ಎರಡನೇ ಅತಿ ದೊಡ್ಡ ಮೊಬೈಲ್ ಫೋನ್ ಉತ್ಪಾದಕ ದೇಶವಾಗಿದೆ. ಈ ತೀವ್ರ ವೇಗ ಮತ್ತು ಪ್ರಗತಿಯ ಫಲವಾಗಿ, ಭಾರತವು ಇಂದು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಜಾರ್ಖಂಡ್ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ಗೆ ಮುಖಭಂಗ, ಕ್ರಾಸ್ ವೋಟಿಂಗ್​ನಿಂದ ಗೆದ್ದು ಬೀಗಿದ ಪರಿಮಳ್ ನತ್ವಾಣಿ – Kannada News | BJP backed candidate Parimal Nathwani wins Jharkhand Rajya Sabha polls after cross voting big jolt to Congress

ರಾಂಚಿ, ಜೂನ್ 18: ಜಾರ್ಖಂಡ್‌ನಲ್ಲಿ ನಡೆದ 2 ರಾಜ್ಯಸಭಾ ಚುನಾವಣೆಗಳ (Rajya Sabha Election Results) ಫಲಿತಾಂಶ ಪ್ರಕಟವಾಗಿದೆ. ಎನ್‌ಡಿಎ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಪರಿಮಳ್ ನತ್ವಾಣಿ ಒಂದು ಸ್ಥಾನವನ್ನು ಗೆದ್ದಿದ್ದಾರೆ. ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಅಭ್ಯರ್ಥಿ ಬೈದ್ಯನಾಥ್ ರಾಮ್ ಇನ್ನೊಂದು ಸ್ಥಾನವನ್ನು ಗೆದ್ದರು. ಕಾಂಗ್ರೆಸ್ ಅಭ್ಯರ್ಥಿ ಪ್ರಣವ್ ಝಾ ಸೋತಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ 3 ಮತಗಳು ತಿರಸ್ಕೃತಗೊಂಡವು. ಪರಿಮಳ್ ನತ್ವಾಣಿ ಸಂಸತ್ತಿನ ಮೇಲ್ಮನೆಗೆ ಆಯ್ಕೆಯಾಗುತ್ತಿರುವುದು ಇದು ನಾಲ್ಕನೇ ಬಾರಿ. ಅವರು 28 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಕೇವಲ 20 ಮತಗಳನ್ನು ಪಡೆದರು.

2 ಸ್ಥಾನಗಳಿಗೆ ನಡೆದ ಈ ಚುನಾವಣೆಯಲ್ಲಿ ಮೂವರು ಅಭ್ಯರ್ಥಿಗಳು ಕಣದಲ್ಲಿದ್ದರು. ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಅಭ್ಯರ್ಥಿ ಬೈದ್ಯನಾಥ್ ರಾಮ್ ಮತ್ತು ಬಿಜೆಪಿಯ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪರಿಮಳ್ ನತ್ವಾಣಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಣವ್ ಝಾ ಹೀನಾಯ ಸೋಲು ಅನುಭವಿಸಿದ್ದಾರೆ. ಜಾರ್ಖಂಡ್‌ನಿಂದ ರಾಜ್ಯಸಭೆ ಪ್ರವೇಶಿಸಲು ಒಬ್ಬ ಅಭ್ಯರ್ಥಿಗೆ ಕನಿಷ್ಠ 28 ಮತಗಳ ಅಗತ್ಯವಿತ್ತು. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನವು ಎನ್‌ಡಿಎ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಪರಿಮಳ್ ನತ್ವಾಣಿ ಅವರ ಗೆಲುವಿಗೆ ದಾರಿ ಮಾಡಿಕೊಟ್ಟಿತು.

ಇದನ್ನೂ ಓದಿ: ಕಾಂಗ್ರೆಸ್​ ಎಡವಟ್ಟಿನಿಂದ ಮಧ್ಯಪ್ರದೇಶದ ಎಲ್ಲ ರಾಜ್ಯಸಭಾ ಸ್ಥಾನಗಳೂ ಬಿಜೆಪಿ ತೆಕ್ಕೆಗೆ

ಬಿಜೆಪಿ ಬೆಂಬಲಿತ ಪರಿಮಳ್ ನತ್ವಾಣಿ ಒಟ್ಟು 30 ಮತಗಳನ್ನು ಪಡೆದಿದ್ದರು. ಆದರೆ ಅವರಲ್ಲಿ 2 ಮತಗಳು ಅಸಿಂಧು ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಅವರ ಅಧಿಕೃತ ಮತಗಳ ಸಂಖ್ಯೆ 28ಕ್ಕೆ ತಲುಪಿತು. ಇದು ಗೆಲುವಿಗೆ ಬೇಕಾದ ನಿಖರ ಸಂಖ್ಯೆಯಾಗಿದ್ದರಿಂದ ಅವರು ಜಯಶಾಲಿ ಎಂದು ಘೋಷಿಸಲ್ಪಟ್ಟರು.

ಜೆಎಂಎಂ ಅಭ್ಯರ್ಥಿ ಬೈದ್ಯನಾಥ್ ರಾಮ್ ಅವರು 1 ಮತ ತಿರಸ್ಕೃತಗೊಂಡ ನಂತರ ಒಟ್ಟು 30 ಮತಗಳನ್ನು ಪಡೆದು ಸುಲಭವಾಗಿ ಆಯ್ಕೆಯಾದರು. ಮೈತ್ರಿಯಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಪ್ರಣವ್ ಝಾ ಅವರು ಕೇವಲ 20 ಮತಗಳನ್ನು ಪಡೆದರು. ಆಡಳಿತಾರೂಢ ಮೈತ್ರಿಕೂಟದ ಶಾಸಕರೇ ಕಾಂಗ್ರೆಸ್ ವಿರುದ್ಧ ಕ್ರಾಸ್ ವೋಟಿಂಗ್ ಮಾಡಿರುವುದು ಈ ಸೋಲಿಗೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಈ ಗೆಲುವಿನೊಂದಿಗೆ 245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಅದರ ಮಿತ್ರಪಕ್ಷಗಳ ಒಟ್ಟು ಸಂಖ್ಯಾಬಲ 153ಕ್ಕೆ ಏರಿಕೆಯಾಗಿದೆ. ಪಶ್ಚಿಮ ಬಂಗಾಳದ ಟಿಎಂಸಿ ಪಕ್ಷದ ಸುಖೇಂದು ಶೇಖರ್ ರಾಯ್, ಸುಶ್ಮಿತಾ ದೇವ್ ಸೇರಿದಂತೆ 4 ಸಂಸದರ ರಾಜೀನಾಮೆಯಿಂದಾಗಿ ಸದ್ಯ 4 ಸ್ಥಾನಗಳು ಖಾಲಿಯಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಂಗ್ಲೆಂಡ್‌ ಟೆಸ್ಟ್ ತಂಡದಿಂದ ಹೊರಬಿದ್ದ ಬೆನ್ ಸ್ಟೋಕ್ಸ್ ಹೊಸ ತಂಡಕ್ಕೆ ಎಂಟ್ರಿ – Kannada News | Ben Stokes Dropped: Nightclub Brawl Leads to England Exclusion, County Return

ಪ್ರಸ್ತುತ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಇಂಗ್ಲೆಂಡ್‌ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಇದೀಗ ಉಭಯ ತಂಡಗಳ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಆದರೆ ಈ ಪಂದ್ಯದಲ್ಲಿ ಇಂಗ್ಲೆಂಡ್‌ ಟೆಸ್ಟ್ ತಂಡದ ನಿಯಮಿತ ನಾಯಕ ಬೆನ್ ಸ್ಟೋಕ್ಸ್ (Ben Stokes) ಆಡುತ್ತಿಲ್ಲ. ಹೀಗಾಗಿ ಅವರ ಬದಲಿಗೆ ಜೋ ರೂಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಷ್ಟಕ್ಕೂ ಬೆನ್ ಸ್ಟೋಕ್ಸ್ ಏಕೆ ಈ ಪಂದ್ಯವನ್ನು ಆಡುತ್ತಿಲ್ಲ ಎಂಬುದಕ್ಕೆ ಕಾರಣ, ನೈಟ್ ಕ್ಲಬ್​ನಲ್ಲಿ ಬೆನ್ ಸ್ಟೋಕ್ಸ್ ಕುಡಿದು ಜಗಳವಾಡಿದ್ದು.

ಈ ಕಾರಣದಿಂದಾಗಿ ಇಂಗ್ಲೆಂಡ್ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ಅವರನ್ನು ತಂಡದಿಂದ ಕೈಬಿಡಲಾಯಿತು. ಆದಾಗ್ಯೂ, ಸ್ಟೋಕ್ಸ್ ಕ್ರಿಕೆಟ್ ಮೈದಾನಕ್ಕೆ ಮರಳಿದ್ದು, ಕೌಂಟಿ ಕ್ರಿಕೆಟ್​ನಲ್ಲಿ ಡರ್ಹಾಮ್ ತಂಡದ ಪರ ಆಡಲು ಸಜ್ಜಾಗಿದ್ದಾರೆ. ಡರ್ಹಾಮ್ ತಂಡ ಶುಕ್ರವಾರದಿಂದ ನಾರ್ಥಾಂಪ್ಟನ್ಶೈರ್ ವಿರುದ್ಧ ಕೌಂಟಿ ಚಾಂಪಿಯನ್‌ಶಿಪ್ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೆ ಸ್ಟೋಕ್ಸ್ ಜೊತೆಗೆ, ಗಸ್ ಅಟ್ಕಿನ್ಸನ್ ಕೂಡ ದೇಶೀಯ ಕ್ರಿಕೆಟ್ ಆಡಲು ಅನುಮತಿ ಪಡೆದಿದ್ದಾರೆ. ಅಟ್ಕಿನ್ಸನ್ ಗ್ಲಾಮೋರ್ಗನ್ ವಿರುದ್ಧ ಸರ್ರೆ ಪರ ಆಡಲಿದ್ದಾರೆ.

ಬೆನ್ ಸ್ಟೋಕ್ಸ್ ತಂಡದಿಂದ ಹೊರಬೀಳಲು ಕಾರಣವೇನು?

ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧದ ಗೆಲುವಿನ ನಂತರ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಲಂಡನ್ ನೈಟ್‌ಕ್ಲಬ್‌ನಲ್ಲಿ ವಿಪರೀತ ಮದ್ಯ ಸೇವಿಸಿ ತಂಡದ ಸಹ ಆಟಗಾರ ಗಸ್ ಅಟ್ಕಿನ್ಸನ್ ಅವರೊಂದಿಗೆ ಸೇರಿ, ಅದೇ ಕ್ಲಬ್‌ನಲ್ಲಿದ್ದ ರಗ್ಬಿ ಆಟಗಾರನ ಮೇಲೆ ಹಲ್ಲೆ ನಡೆಸಿದರು. ಬೆನ್ ಸ್ಟೋಕ್ಸ್ ಅವರ ಈ ಕೃತ್ಯದ ವೀಡಿಯೊ ಸೋಶಿಯಲ್ ಮೀಡಿಯಾದಲ್ಲೂ ವೈರಲ್ ಆಗಿತ್ತು. ಇದಾದ ಬಳಿಕ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ತಕ್ಷಣ ಕ್ರಮ ಕೈಗೊಂಡು ಸ್ಟೋಕ್ಸ್ ಅವರನ್ನು ಓವಲ್ ಟೆಸ್ಟ್‌ನಿಂದ ಕೈಬಿಟ್ಟಿತು.

ಬೆನ್ ಸ್ಟೋಕ್ಸ್ ವಿವಾದ

  • ಬೆನ್ ಸ್ಟೋಕ್ಸ್ ಈ ರೀತಿಯ ವಿವಾದಕ್ಕೆ ಸಿಲುಕುತ್ತಿರುವುದು ಇದೇ ಮೊದಲಲ್ಲ. ತಮ್ಮ ವೃತ್ತಿಜೀವನದ ಆರಂಭದಿಂದಲೂ, ಅವರು ಮದ್ಯಪಾನ ಮಾಡುವ ಮೂಲಕ ಹಲವಾರು ಬಾರಿ ತಂಡದ ನಿಯಮಗಳನ್ನು ಮುರಿದಿದ್ದಾರೆ. 2011 ರಲ್ಲಿ, ಅವರು ಡರ್ಹಾಮ್‌ನಲ್ಲಿ ಪೊಲೀಸರೊಂದಿಗೆ ಕುಡಿದ ಮತ್ತಿನಲ್ಲಿ ವಾಗ್ವಾದ ನಡೆಸಿದ್ದರು. ನಂತರ ಅವರನ್ನು ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿತ್ತು.
  • 2013 ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಇಂಗ್ಲೆಂಡ್ ತಂಡದ ಜೊತೆಗೆ ಬೆನ್ ಸ್ಟೋಕ್ಸ್ ಮದ್ಯಪಾನ ಮಾಡುವ ಮೂಲಕ ತಂಡದ ನಿಯಮ ಉಲ್ಲಂಘಿಸಿದ ಕಾರಣ ಅವರನ್ನು ಮನೆಗೆ ಕಳುಹಿಸಲಾಗಿತ್ತು.
  • 2014 ರ ವೆಸ್ಟ್ ಇಂಡೀಸ್ ಪ್ರವಾಸದ ಸಮಯದಲ್ಲಿ ಬೆನ್ ಸ್ಟೋಕ್ಸ್ ಕೈ ಮುರಿದುಕೊಂಡಿದ್ದರು. ಕೋಪದ ಭರದಲ್ಲಿ, ಅವರು ಡ್ರೆಸ್ಸಿಂಗ್ ರೂಮ್ ಲಾಕರ್‌ಗೆ ಗುದ್ದಿದರು, ಇದರ ಪರಿಣಾಮವಾಗಿ ಕೈ ಮೂಳೆ ಮುರಿದಿತು. ಇದರ ಪರಿಣಾಮವಾಗಿ ಅವರು 2014 ರ ಟಿ20 ವಿಶ್ವಕಪ್‌ನಿಂದ ಹೊರಗುಳಿಯಬೇಕಾಯಿತು.
  • 2017 ರಲ್ಲಿ, ಬೆನ್ ಸ್ಟೋಕ್ಸ್ ಬ್ರಿಸ್ಟಲ್ ನೈಟ್‌ಕ್ಲಬ್‌ನಲ್ಲಿ ಇಬ್ಬರು ಪುರುಷರ ಮೇಲೆ ಹಲ್ಲೆ ನಡೆಸಿದರು. ಹೀಗಾಗಿ ಸ್ಟೋಕ್ಸ್​ಗೆ ದಂಡವನ್ನು ವಿಧಿಸಲಾಗಿತ್ತು. ಇದರ ಜೊತೆಗೆ ಎಂಟು ಪಂದ್ಯಗಳಿಂದ ಅವರನ್ನು ಹೊರಗಿಡಲಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:40 pm, Thu, 18 June 26

Source link

Exit mobile version