ಉದ್ಯಮಿ ಮನೆಯಲ್ಲಿ ದರೋಡೆ ಕೇಸ್ಗೆ ಬಿಗ್ ಟ್ವಿಸ್ಟ್: ಪ್ರಾಣ ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್
ಬೆಂಗಳೂರು, ಮಾರ್ಚ್ 08: ಪೊಲೀಸರ ಹೆಸರಲ್ಲಿ ಮನೆಗೆ ಎಂಟ್ರಿಕೊಟ್ಟ ಗ್ಯಾಂಗ್ ಒಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ನಡೆದಿತ್ತು. ಈ ಪ್ರಕರಣವನ್ನು ಭೇದಿಸಿರುವ ಬ್ಯಾಡರಹಳ್ಳಿ ಪೊಲೀಸರು ಈ ಹಿಂದೆ ನಾಗೇಂದ್ರ ಹಾಗೂ ಬಚ್ಚನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ತನಿಖೆ ಮುಂದುವರಿದಾಗ ಅಸಲಿ ಸತ್ಯ ಬಯಲಾಗಿದ್ದು, ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಹೆಸರು…