ಇರಾನ್-ಅಮೆರಿಕ ಸಂಧಾನಕ್ಕೆ ‘ಪರಮಾಣು’ ತಡೆ: ಇಸ್ಲಾಮಾಬಾದ್ ಮ್ಯಾರಥಾನ್ ಮಾತುಕತೆ ಹಳಿ ತಪ್ಪಿದ್ದೇಕೆ?
ಇಸ್ಲಾಮಾಬಾದ್, ಏಪ್ರಿಲ್ 12: ಜಾಗತಿಕ ಶಾಂತಿ ಮತ್ತು ಸ್ಥಿರತೆ ಮೇಲೆ ಭಾರಿ ಪರಿಣಾಮ ಬೀರಬಹುದಾಗಿದ್ದ ಅಮೆರಿಕ-ಇರಾನ್(Iran) ನಡುವಿನ ಹೈ-ವೋಲ್ಟೇಜ್ ಸಂಧಾನ ಸದ್ಯಕ್ಕೆ ಹಳಿತಪ್ಪಿದೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಸುದೀರ್ಘ ಮ್ಯಾರಥಾನ್ ಚರ್ಚೆಯು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದ್ದು, ಈ ವೈಫಲ್ಯದ ಹಿಂದಿನ ಆಘಾತಕಾರಿ ಕಾರಣಗಳು ಇಲ್ಲಿವೆ. ಅಮೆರಿಕ ಮತ್ತು ಇರಾನ್ ನಡುವೆ ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯ ಹಾಡಲು ಪಾಕಿಸ್ತಾನ ಹಮ್ಮಿಕೊಂಡಿದ್ದ ಸಂಧಾನ ಸಭೆಯು ಅನಿಶ್ಚಿತವಾಗಿ ಕೊನೆಗೊಂಡಿದೆ. ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್…