ಬೆಂಗಳೂರಿನಲ್ಲಿ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್, ವಿಡಿಯೋ ನೋಡಿ – Kannada News | Full traffic jam In Bengaluru Hosur Road For national highway collapsed near Attibele
ಆನೇಕಲ್ (ಬೆಂಗಳೂರು) (ಫೆಬ್ರವರಿ.04): ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾದ ಬೆಂಗಳೂರು-ಹೊಸೂರು (Bengaluru Hosur Road) ರಾಷ್ಟ್ರೀಯ ಹೆದ್ದಾರಿ ದಿಢೀರ್ ಕುಸಿದುಬಿದ್ದಿದ್ದು, ಫುಲ್ ಟ್ರಾಫಿಕ್ ಜಾಮ್ (traffic jam) ಉಂಟಾಗಿದೆ. ಹೆದ್ದಾರಿ ಕಾಮಗಾರಿ ನಡೆಯುತ್ತಿರುವಾಗಲೇ ಹಳೇ ಚಂದಾಪುರದ ಬಳಿ ರಸ್ತೆ ಸುಮಾರು 20 ಅಡಿ ಆಳಕ್ಕೆ ಕುಸಿದಿದ್ದು, ಚಂದಾಪುರದಿಂದ ಕರ್ನಾಟಕದ ಗಡಿ ಅತ್ತಿಬೆಲೆವರೆಗೆ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ. ಇನ್ನು ರೋಗಿಗಳು, ಶಾಲಾ ಮಕ್ಕಳು ಸಕಾಲಕ್ಕೆ ತಲುಪಲು ಪರದಾಡಿದರು. ಹಳೇ ಚಂದಾಪುರದ…