ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ, ಧೋ ಅಂತ ಸುರಿಯುತ್ತಿದೆ ಮಳೆ!: ಆಫೀಸ್ ಮುಗಿಸಿ ಬರುವ ಉದ್ಯೋಗಿಗಳೇ ಎಚ್ಚರ
ಬೆಂಗಳೂರು, ಮೇ,28: ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ (IMD) ನೀಡಿದ್ದ ‘ಯೆಲ್ಲೋ ಅಲರ್ಟ್’ ಮುನ್ಸೂಚನೆ ಅಕ್ಷರಶಃ ನಿಜವಾಗಿದೆ. ಇದೀಗ ಸಿಲಿಕಾನ್ ಸಿಟಿಯಾದ್ಯಂತ ಹವಾಮಾನ ಸಂಪೂರ್ಣ ತಲೆಕೆಳಗಾಗಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಿದ ಭೀಕರ ಧೂಳಿನ ಬಿರುಗಾಳಿ (Gusty Winds) ಮತ್ತು ಗುಡುಗು-ಮಿಂಚಿನ ಆರ್ಭಟದೊಂದಿಗೆ ಧಾರಾಕಾರ ಮಳೆ ಆರಂಭವಾಗಿದೆ. ಮಧ್ಯಾಹ್ನದವರೆಗೆ ಉರಿ ಬಿಸಿಲಿನಿಂದ ಕಂಗಾಲಾಗಿದ್ದ ಬೆಂಗಳೂರಿನಲ್ಲಿ ಸಂಜೆ 6 ಗಂಟೆಯ ನಂತರ ದಿಢೀರ್ ಆಗಿ ಕಪ್ಪು ಮೋಡಗಳು ಆವರಿಸಿದವು. ಬಿರುಗಾಳಿಯ ತೀವ್ರತೆ ಎಷ್ಟಿತ್ತೆಂದರೆ…