ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಮಥುರಾ, ಏಪ್ರಿಲ್ 10: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದ ಶೃಂಗಾರ್ ಘಾಟ್ ಬಳಿ ಯಮುನಾ ನದಿಯಲ್ಲಿ (Yamuna River) ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮಗುಚಿದ ಪರಿಣಾಮವಾಗಿ 10 ಜನರು ಸಾವನ್ನಪ್ಪಿದ್ದು, ಹಲವಾರು ಜನರು ನಾಪತ್ತೆಯಾಗಿದ್ದಾರೆ. ಪಂಜಾಬ್‌ನ ಲುಧಿಯಾನದ ಸುಮಾರು 25 ಭಕ್ತರು ಪ್ರಯಾಣಿಸುತ್ತಿದ್ದ ಬೋಟ್ ಮಗುಚಿ ಬಿದ್ದಿದೆ. ಬಂಕೆ ಬಿಹಾರಿ ದೇವಸ್ಥಾನಕ್ಕೆ ಭೇಟಿ ನೀಡಲು ಈ ಭಕ್ತರು ಗಂಗಾ ನದಿಯ ಮೂಲಕ ಬೋಟ್ನಲ್ಲಿ ಸಾಗುತ್ತಿದ್ದರು. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮಥುರಾ…