ಮಂಗಳೂರು: ಅತ್ತಾವರದಲ್ಲಿ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಪಕ್ಕದಲ್ಲೇ ನಿಲ್ಲಿಸಿದ್ದ ಕಾರುಗಳು ನಜ್ಜುಗುಜ್ಜು! – Kannada News | Mangaluru Rain: Compound Wall Collapses in Attavar; Multiple Cars Smashed Under Debris
ಮಂಗಳೂರು, ಏಪ್ರಿಲ್ 22: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆ ಕೆಲವೆಡೆ ಅವಾಂತರ ಸೃಷ್ಟಿಸಿದೆ. ಮಂಗಳೂರಿನ ಅತ್ತಾವರದಲ್ಲಿ ವರ್ಷದ ಹಿಂದೆಯಷ್ಟೇ ನಿರ್ಮಿಸಲಾಗಿದ್ದ ಕಾಂಪೌಂಡ್ ಗೋಡೆಯೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಗೋಡೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಕಾರುಗಳು ಗೋಡೆಯ ಅವಶೇಷಗಳಡಿ ಸಿಲುಕಿ ಸಂಪೂರ್ಣ ಜಖಂಗೊಂಡಿವೆ. ಸ್ಥಳೀಯವಾಗಿ ಧಾರ್ಮಿಕ ಕಾರ್ಯಕ್ರಮವೊಂದು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನಗಳು ಬಂದಿದ್ದವು. ಪಾರ್ಕಿಂಗ್‌ಗೆ ಜಾಗವಿಲ್ಲದ ಕಾರಣ ಕಾರು ಮಾಲೀಕರು ಅನಿವಾರ್ಯವಾಗಿ ಗೋಡೆಯ ಪಕ್ಕದಲ್ಲಿ ವಾಹನಗಳನ್ನು ನಿಲ್ಲಿಸಿದ್ದರು….