ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ದೇವೇಗೌಡರ ಅಚ್ಚರಿಯ ಹೇಳಿಕೆ: ಜೆಡಿಎಸ್ ಮುಂದಿನ ನಡೆ ಏನು? – Kannada News | H.D. Deve Gowda Favors Contesting All Upcoming Elections Along with NDA
ಬೆಂಗಳೂರು, ಫೆಬ್ರವರಿ 25: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯ ಕುರಿತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಬೆಂಗಳೂರಿನಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಎನ್ಡಿಎ ಮೈತ್ರಿಕೂಟದ ಭಾಗವಾಗಿರುವುದರಿಂದ, ಮುಂಬರುವ ಕಾರ್ಪೊರೇಷನ್, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಎನ್ಡಿಎ ಜೊತೆಗೇ ಎದುರಿಸಲು ತಮ್ಮ ಪಕ್ಷಕ್ಕೆ ಆಕಾಂಕ್ಷೆ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದು ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ಮತ್ತು ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ನಡುವಿನ ನಿರ್ಧಾರವಾಗಿದ್ದು, ಅಂತಿಮ ತೀರ್ಮಾನವನ್ನು ಬಿಜೆಪಿ ತೆಗೆದುಕೊಳ್ಳಬೇಕು. ಬಿಜೆಪಿಯವರು ಯಾವ…