Headlines

Horoscope Today 03 January : ಇಂದು ಈ ರಾಶಿಗೆ ಆಕಸ್ಮಿಕವಾಗಿ ಸಿಕ್ಕ ಅವಕಾಶ ಸದುಪಯೋಗ ಮಾಡಿಕೊಳ್ಳುವ ಕಡೆಗೆ ಗಮನವಿರಲಿ – Kannada News | Horoscope Today in Kannada on 03 January Satursday; Dina Bhavishya Tithi Panchanga Details here

ಮೇಷ ರಾಶಿ: ಕಲ್ಪನೆ ಮತ್ತು ವಾಸ್ತವದ ನಡುವೆ ಸಂಘರ್ಷ. ಸೃಜನಾತ್ಮಕ ಕೆಲಸದಲ್ಲಿ ಯಶಸ್ಸು. ಇಂದಿನ ನಿಮ್ಮ ವ್ಯವಹಾರವು ಹತ್ತಾರು ಗೊಂದಲಗಳಿಂದ ಇರಲಿದ್ದು ಮುಂದುವರಿದರೆ ನಷ್ಟವಾಗುವ ಭಯವೂ ಇರಲಿದೆ. ದ್ವಿಚಕ್ರ ಸವಾರರು ಬಹಳ ಎಚ್ಚರಿಕೆಯಿಂದ ಓಡಾಡಬೇಕು. ಅಧ್ಯಾತ್ಮದಲ್ಲಿ ಮನಸ್ಸನ್ನು ಇಡುವಿರಿ. ಇಂದು ನಿಮ್ಮ ಸಮಯವನ್ನು ಸ್ನೇಹಿತರ ಕಾರ್ಯಕ್ಕೆ ಕೊಡಬೇಕಾಗಿಬರಬಹುದು. ಅದ್ದರಿಂದ ನಿಮ್ಮ ಕೆಲಸವು ವಿಳಂಬವಾಗಬಹುದು. ಆಸೆಗಳನ್ನು ನೀವು ನಿಯಂತ್ರಣಕ್ಕೆ ತರಲು ಪ್ರಯತ್ನಿಸುವಿರಿ. ಸಂಗಾತಿಯ ನಡವಳಿಕೆಯನ್ನು ಊಹಿಸಲಾಗದು. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. ಯಾರಿಂದಲೂ ಗೌರವ ಸಿಗಲಿಲ್ಲ ಎಂಬ ನೋವು…

Read More

ಡಿಕೆ ಶಿವಕುಮಾರ್ ವಾಪಸಾಗ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಬಣ ದೆಹಲಿಗೆ! ಕಾಂಗ್ರೆಸ್​ನಲ್ಲಿ ಜೋರಾಯ್ತು ಡೆಲ್ಲಿ ಟೂರ್ ಪಾಲಿಟಿಕ್ಸ್ – Kannada News | Karnataka Congress Leadership Row: Siddaramaiah Camp Rushes to Delhi After DK Shivakumar’s Visit

ಬೆಂಗಳೂರು, ಏಪ್ರಿಲ್ 28: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕಳೆದ ಕೆಲವು ತಿಂಗಳುಗಳಿಂದ ಸದ್ದಿಲ್ಲದೆ ನಡೆಯುತ್ತಿದ್ದ ‘ಕುರ್ಚಿ ಕಿತ್ತಾಟ’ ಈಗ ಮತ್ತೆ ಬಹಿರಂಗಗೊಳ್ಳುವ ಹಾಗೂ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿ ಪ್ರವಾಸ ಮುಗಿಸಿ ವಾಪಸ್ ಆಗುತ್ತಿದ್ದಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಪ್ತ ಬಣ ದೆಹಲಿಗೆ ದೌಡಾಯಿಸಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ದೆಹಲಿಯಲ್ಲಿ ಸಿದ್ದು ಬಣದ ಸಂಚಲನ ಡಿಕೆಶಿ ಅವರ ಮೂರು ದಿನಗಳ ದೆಹಲಿ ವಾಸ್ತವ್ಯದ ಬೆನ್ನಲ್ಲೇ ಸಚಿವರಾದ…

Read More

ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವಿಗೆ ಕೇರಳ, ಪಾಕ್​​ ಖ್ಯಾತೆ: ಕೇಂದ್ರ ಸಚಿವ ಸೋಮಣ್ಣ ಕಿಡಿ – Kannada News | Union Minister V.Somanna Slams Pakistan over Interference in Kogilu Demolition

ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿ ಬೆಂಗಳೂರು, ಡಿಸೆಂಬರ್​​ 30: ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು ಕರ್ನಾಟಕ ಸರ್ಕಾರ ನೆಲಸಮಗೊಳಿಸಿದ ವಿಚಾರ ದೇಶಾದ್ಯಂತ ಚರ್ಚೆಯಲ್ಲಿದೆ. ನೆರೆ ರಾಜ್ಯ ಕೇರಳವಂತೂ ಈ ವಿಚಾರವಾಗಿ ಕರ್ನಾಟಕದ ವಿರುದ್ಧ ನಿಗಿ ನಿಗಿ ಕೆಂಡ ಕಾರಿದೆ. ಆದರೆ ಯಾವುದಕ್ಕೂ ಸಂಬಂಧವೇ ಇಲ್ಲದ ಪಾಪಿ ಪಾಕಿಸ್ತಾನವೂ ಈ ವಿಚಾರದಲ್ಲಿ ಮೂಗು ತೂರಿಸಿರೋದೀಗ ಭಾರಿ ಆಕ್ರೋಶಕ್ಕೆ ಕಾರಣವಾಗ್ತಿದೆ. ಈ ಬಗ್ಗೆ ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿ ಕಾರಿದ್ದಾರೆ. ಸೋಮಣ್ಣ ಆಕ್ರೋಶ ವಿ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಮನೆ ಕೆಲಸಗಳು ನಿಮ್ಮ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತದೆ. ಮಕ್ಕಳ ಶಿಕ್ಷಣದ ಪ್ರಗತಿಗಾಗಿ ನೀವು ಕೆಲವು ತ್ಯಾಗ ಮಾಡಲಿಕ್ಕೆ ಮುಂದಾಗಲಿದ್ದೀರಿ. ಹೆಣ್ಣುಮಕ್ಕಳಿಗೆ ತವರು ಮನೆಯಿಂದ ಉಡುಗೊರೆ ದೊರೆಯಲಿದೆ. ಹೂವು- ಹಣ್ಣಿನ ವ್ಯಾಪಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಏರಿಕೆ ಆಗಲಿದ್ದು, ಹೊಸ ಆರ್ಡರ್ ಗಳು- ಹೊಸ ಗ್ರಾಹಕರು ದೊರೆಯಲಿದ್ದಾರೆ. ಆಸ್ತಮಾ- ಕಫ ಇಂಥ ಸಮಸ್ಯೆ ಈಗಾಗಲೇ ಇದೆ ಎಂದಾದಲ್ಲಿ ಪರಿಸ್ಥಿತಿ ಉಲ್ಬಣ ಅಗುತ್ತದೆ. ಔಷಧದ…

Read More

UPSC New Rule: ಸೇವೆಯಲ್ಲಿರುವ ಐಎಎಸ್​, ಐಎಫ್​ಎಸ್ ಅಧಿಕಾರಿಗಳಿಗೆ ಯುಪಿಎಸ್​ಸಿಯಿಂದ ಹೊಸ ನಿರ್ಬಂಧ – Kannada News | UPSC New Rules: IAS, IFS Officers Restricted from Reappearing for CSE 2026 Exams

ನವದೆಹಲಿ, ಫೆಬ್ರವರಿ 05: ಕೇಂದ್ರ ಲೋಕಸೇವಾ ಆಯೋಗ(UPSC) ತನ್ನ ನಾಗರಿಕ ಸೇವಾ ಪರೀಕ್ಷೆ (CSE)2026ರ ಅಧಿಸೂಚನೆಯಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಪರಿಚಯಿಸಿದೆ. ಇದು ಈಗಾಗಲೇ ಸೇವೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮರು-ಪ್ರಯತ್ನಗಳನ್ನು ಸೀಮಿತಗೊಳಿಸುತ್ತದೆ. ಸೇವೆ ಸಲ್ಲಿಸುತ್ತಿರುವ ಐಎಎಸ್​ ಮತ್ತು ಐಎಫ್​ಎಸ್ ಅಧಿಕಾರಿಗಳು ಸಿಎಸ್​ಇ 2026ರಲ್ಲಿ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಮುಂದಿನ ಪ್ರಯತ್ನದಲ್ಲಿ ತಮ್ಮ ಶ್ರೇಣಿಯನ್ನು ಸುಧಾರಿಸಲು ಬಯಸುವ ಐಪಿಎಸ್ ಅಧಿಕಾರಿಗಳು ಗ್ರೂಪ್ ಎ ಸೇವೆಗಳನ್ನು ಹಂಚಿಕೆ ಮಾಡಿದ ಅಭ್ಯರ್ಥಿಗಳ ಮೇಲೆ ಅಧಿಕಸೂಚನೆಯು ಷರತ್ತುಗಳನ್ನು ವಿಧಿಸುತ್ತದೆ. ಈ ಕ್ರಮವು ಒಂದು ಬಾರಿಯ ಸುಧಾರಣಾ…

Read More

ಲಾಕ್​ಡೌನ್ ಪರಿಸ್ಥಿತಿ ಇರುವುದು ಭಾರತದಲ್ಲಲ್ಲ ಪಾಕಿಸ್ತಾನದಲ್ಲಿ; ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ನವದೆಹಲಿ, ಮಾರ್ಚ್ 27: ಭಾರತದಲ್ಲಿ ಲಾಕ್‌ಡೌನ್ (Lockdown) ಆಗಲಿದೆ ಎಂಬ ವದಂತಿಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ತಳ್ಳಿಹಾಕಿದ್ದಾರೆ. ಆ ವದಂತಿಗಳು “ಆಧಾರರಹಿತ” ಎಂದು ಕರೆದಿದ್ದಾರೆ. ರಾಜಕಾರಣಿಗಳು ಮತ್ತು ಸಾರ್ವಜನಿಕರು ವಿನಾಕಾರಣ ಭಯವನ್ನು ಹರಡದಂತೆ ಅವರು ಒತ್ತಾಯಿಸಿದ್ದಾರೆ. “ಲಾಕ್​ಡೌನ್ ಪರಿಸ್ಥಿತಿ ಪಾಕಿಸ್ತಾನದಲ್ಲಿ ಉಂಟಾಗಿದೆಯೇ ವಿನಃ ಭಾರತದಲ್ಲಿ ಅಲ್ಲ” ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭೆಯಲ್ಲಿ 2026ರ ಹಣಕಾಸು ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ದೇಶಾದ್ಯಂತ ಆಧಾರರಹಿತ ವದಂತಿಗಳನ್ನು ಹರಡಲಾಗುತ್ತಿದೆ….

Read More

NDMA Disaster Alert Message: ನಿಮ್ಮ ಫೋನ್‌ಗೆ ‘ಎಮರ್ಜೆನ್ಸಿ ಅಲರ್ಟ್’ ಬಂದಿದೆಯೇ? ಗಾಬರಿ ಬೇಡ, ಇದು ಕೇಂದ್ರ ಸರ್ಕಾರದ ಹೊಸ ತಂತ್ರಜ್ಞಾನದ ಪರೀಕ್ಷೆ! – Kannada News | India’s New Emergency Alert System: Cell Broadcast and SACHET Explained

ಬೆಂಗಳೂರು: ಇಂದು (ಮೇ 2) ದೇಶದ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಏಕಾಏಕಿ ‘ಎಮರ್ಜೆನ್ಸಿ ಅಲರ್ಟ್’ ಸಂದೇಶಗಳು ಬಂದಿವೆ. ಸೈಲೆಂಟ್ ಮೋಡ್‌ನಲ್ಲಿದ್ದ ಫೋನ್‌ಗಳೂ ಸಹ ಜೋರಾಗಿ ಶಬ್ದ ಮಾಡುತ್ತಾ ಕಂಪಿಸಲು (Vibrate) ಶುರುಮಾಡಿದ್ದರಿಂದ ಆತಂಕಕ್ಕೊಳಗಾಗುವುದು ಸಹಜ. ಆದರೆ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇದು ಕೇಂದ್ರ ಸರ್ಕಾರವು ಹೊಸದಾಗಿ ಜಾರಿಗೆ ತಂದಿರುವ ‘ಸೆಲ್ ಬ್ರಾಡ್‌ಕಾಸ್ಟ್’ (Cell Broadcast) ವ್ಯವಸ್ಥೆಯ ಅಧಿಕೃತ ಪರೀಕ್ಷೆಯಾಗಿದೆ. ಅಮಿತ್ ಶಾ ಅವರಿಂದ ಅಧಿಕೃತ ಚಾಲನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಂವಹನ ಸಚಿವ…

Read More

SRH vs LSG: ನಂಬಲಸಾಧ್ಯ..! ಪವರ್‌ಪ್ಲೇನಲ್ಲಿ ಅತಿ ಕಡಿಮೆ ಮೊತ್ತ ದಾಖಲಿಸಿದ ಸನ್‌ರೈಸರ್ಸ್

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ಹಾಗೂ ಲಕ್ನೋ ಸೂಪರ್​ಜೈಂಟ್ಸ್ (SRH vs LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ತಂಡ ತವರಿನ ಲಾಭ ಪಡೆದು ಬೃಹತ್ ಮೊತ್ತವನ್ನು ಕಲೆಹಾಕಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಲಕ್ನೋ ಬೌಲರ್​ಗಳ ಮಾರಕ ದಾಳಿ ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಆದಾಗ್ಯೂ ಲೋಕಲ್ ಬಾಯ್ ನಿತೀಶ್ ರೆಡ್ಡಿ ಹಾಗೂ…

Read More

ಐಡಿಯಾ ಯಾರದು ಅನ್ನೋದು ಮುಖ್ಯ ಅಲ್ಲ, ಅದನ್ನು ಜಾರಿಗೆ ತರೋನೇ ಜಾಣ: ಚ್ಯಾಟ್​ಜಿಪಿಟಿ ರೂವಾರಿ ಸ್ಯಾಮ್ ಆಲ್ಟ್​ಮ್ಯಾನ್ ಸಲಹೆ ಕೇಳಿ – Kannada News | Sam Altman says, no one cares about your idea, success is on executing that

ನವದೆಹಲಿ, ಫೆಬ್ರುವರಿ 23: ಇವತ್ತು ಬೆಳೆಯುತ್ತಿರುವ ಪ್ರಪಂಚದಲ್ಲಿ ಹೊಸ ಹೊಸ ಆಲೋಚನೆಗಳು, ಬ್ಯುಸಿನೆಸ್ ಐಡಿಯಾಗಳು ಹೊರಹೊಮ್ಮುತ್ತಲೇ ಇರುತ್ತವೆ. ಯಾರಿಗೋ ಬಂದಿದ್ದ ಐಡಿಯಾವನ್ನು ಇನ್ಯಾರೋ ಸಮರ್ಪಕವಾಗಿ ಜಾರಿಗೆ ತಂದು ಯಶಸ್ವಿಯಾಗಿರುವ ಹಲವು ನಿದರ್ಶನಗಳಿವೆ. ಮೊದಲು ಐಡಿಯಾ ಹೊಂದಿದ್ದವರು ಅದನ್ನು ಜಾರಿಗೆ ತರಲು ವಿಫಲರಾಗಿರುವ ನಿದರ್ಶನಗಳೂ ಬಹಳ ಇವೆ. ಓಪನ್ ಎಐ ಸಿಇಒ ಸ್ಯಾಮ್ ಆಲ್ಟ್​ಮ್ಯಾನ್ (Sam Altman) ಈ ವಿಚಾರದ ಬಗ್ಗೆ ಕಡ್ಡಿ ತುಂಡು ಮಾಡಿದಂತೆ ಮಾತನಾಡಿದ್ದಾರೆ. ನಿಮ್ಮಲ್ಲಿ ಐಡಿಯಾ ಇದೆಯಾ ಅನ್ನೋದು ಯಾರಿಗೂ ಬೇಕಾಗಿಲ್ಲ. ಆ ಐಡಿಯಾವನ್ನು…

Read More

ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್: ತಪ್ಪಿದ ಭಾರೀ ಅನಾಹುತ

ಬೆಂಗಳೂರು, ಮಾ.11: ರಾಜಧಾನಿಯ ಹೃದಯಭಾಗದ ಶೇಷಾದ್ರಿಪುರಂನಿಂದ ಆನಂದರಾವ್ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಅಂಡರ್ ಪಾಸ್‌ನಲ್ಲಿ ಇಂದು ಬೆಳಿಗ್ಗೆ ದೊಡ್ಡ ಮಟ್ಟದ ಅಪಾಯವೊಂದು ತಪ್ಪಿದೆ. ರೈಲ್ವೆ ಬ್ರಿಡ್ಜ್ ಕೆಳಭಾಗಕ್ಕೆ ಅಳವಡಿಸಲಾಗಿದ್ದ ಬೃಹತ್ ತಗಡಿನ ಶೀಟ್ ಸಂಚರಿಸುತ್ತಿದ್ದ ಬಸ್‌ಗೆ ತಗುಲಿ ನಡುರಸ್ತೆಯಲ್ಲೇ ಕಳಚಿಬಿದ್ದಿದೆ. ಅಂಡರ್ ಪಾಸ್‌ನ ಮೇಲ್ಭಾಗದ ಶೀಟ್‌ಗಳನ್ನು ಹಿಡಿದಿಟ್ಟಿದ್ದ ಕಬ್ಬಿಣದ ಕ್ಲಿಪ್‌ಗಳು ತುಕ್ಕು ಹಿಡಿದು ಕಟ್ ಆಗಿದ್ದವು. ಈ ವೇಳೆ ಬಸ್ಸು ಹಾದುಹೋಗುವಾಗ ಶೀಟ್‌ಗೆ ತಗುಲಿದ ಪರಿಣಾಮ, ಭಾರೀ ಗಾತ್ರದ ತಗಡು ರಸ್ತೆಗೆ ಬಿದ್ದಿದೆ. ಸದಾ ವಾಹನ…

Read More