ಬ್ರಾಹ್ಮಣ ಸಮುದಾಯಕ್ಕೆ ಅವಮಾನ? ಮನೋಜ್ ಸಿನಿಮಾ ವಿರುದ್ಧ ಆಕ್ರೋಶ – Kannada News | Ghooskhor Pandat movie landed in controversy for its name
ಸಿನಿಮಾಗಳು (Cinema) ವಿವಾದಕ್ಕೆ ಸಿಲುಕುವುದು ತೀರ ಸಾಮಾನ್ಯ ಆಗಿಬಿಟ್ಟಿದೆ. ಸಿನಿಮಾಗಳಲ್ಲಿ ಜಾತಿ, ಧರ್ಮ, ಸಮುದಾಯ, ವೃತ್ತಿಯ ಅಪಮಾನ ಮಾಡಲಾಗಿದೆ ಎಂಬ ದೂರು ಇತ್ತೀಚೆಗೆ ಕೇಳಿ ಬರುತ್ತಲೇ ಇರುತ್ತವೆ. ಇದೀಗ ಇದೇ ಸಾಲಿಗೆ ಖ್ಯಾತ ನಟ ಮನೋಜ್ ಬಾಜಪೇಯಿ ನಟನೆಯ ಸಿನಿಮಾ ಸಹ ಸೇರಿಕೊಂಡಿದೆ. ಮನೋಜ್ ನಟನೆಯ ಹೊಸ ಸಿನಿಮಾ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹೆಸರಿನ ಬಗ್ಗೆ ಇದೀಗ ಆಕ್ರೋಶ ವ್ಯಕ್ತವಾಗಿದೆ. ಸಿನಿಮಾದ ಹೆಸರು ಬದಲಾವಣೆ ಮಾಡದಿದ್ದಲ್ಲಿ ಸಿನಿಮಾ ಬಹಿಷ್ಕರಿಸುವುದಾಗಿ ಹಲವರು ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ. ಮನೋಜ್…