ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಅಭಾವ: ಬಂಕ್‌ಗಳ ಮುಂದೆ ವಾಹನ ಸವಾರರ ಸಾಲು, ತೀವ್ರಗೊಂಡ ಇಂಧನ ಆತಂಕ – Kannada News | Fuel Crisis in Bengaluru: Petrol and Diesel Shortage in HP and Bharat Petroleum Bunks Due to Supply Issues
ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಮೇ 6: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಟೋ ಎಲ್‌ಪಿಜಿ (Auto LPG) ಬಿಕ್ಕಟ್ಟಿನ ಬೆನ್ನಲ್ಲೇ ಈಗ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲೂ ಭಾರೀ ವ್ಯತ್ಯಯ ಉಂಟಾಗಿದೆ. ನಗರದಲ್ಲಿ ತೈಲ ಪೂರೈಕೆ ಮಾಡುವ ಪ್ರಮುಖ ಕಂಪನಿಗಳಾದ ಎಚ್‌ಪಿ (HP) ಮತ್ತು ಭಾರತ್ ಪೆಟ್ರೋಲಿಯಂ (BP) ಬಂಕ್‌ಗಳಲ್ಲಿ ಕಳೆದ ಎರಡು ದಿನಗಳಿಂದ ಇಂಧನ ದಾಸ್ತಾನು ಖಾಲಿಯಾಗುತ್ತಿದ್ದು, ವಾಹನ ಸವಾರರಲ್ಲಿ ಆತಂಕ ಮನೆಮಾಡಿದೆ. ಖಾಸಗಿ ಬಂಕ್‌ಗಳಲ್ಲಿ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ…