ಜಿಬಿಎ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ? ಹಂತ ಹಂತವಾದ ಮಾಹಿತಿ ಇಲ್ಲಿದೆ
ದಶಕಕ್ಕಿಂತ ಹೆಚ್ಚು ಅವಧಿಯ ನಂತರ ಬೆಂಗಳೂರಿನಲ್ಲಿ ವಾರ್ಡ್ ಕಾರ್ಪೊರೇಟರ್ ಚುನಾವಣೆ ನಡೆಯಲು ಸಿದ್ಧತೆಗಳು ಆರಂಭವಾಗಿವೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಹೊಸದಾಗಿ ರಚನೆಯಾದ ಗ್ರೇಟರ್ ಬೆಂಗಳೂರು ಅಥಾರಿಟಿ ಹಾಗೂ ರಾಜ್ಯ ಚುನಾವಣಾ ಆಯೋಗ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸಲು ಸಜ್ಜಾಗಿವೆ. ಮೊದಲ ಹಂತವಾಗಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ 45,69,193 ಪುರುಷರು, 43,20,583 ಮಹಿಳೆಯರು ಮತ್ತು 1,635 ಇತರೆ ಮತದಾರರ ಹೆಸರುಗಳಿದ್ದು, ವಿವರಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿವೆ. ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸುವ ವಿಧಾನ ಇಲ್ಲಿದೆ….