ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ, ಆಸ್ಪತ್ರೆಗೆ ದಾಖಲು! – Kannada News | Food Poisoning Hits Tirthahalli Residential School; Over 50 Students Hospitalised
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ನ್ಯಾಷನಲ್ ರೆಸಿಡೆನ್ಸಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಸುಮಾರು 50ರಿಂದ 70 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ವಸತಿ ಶಾಲೆಯಲ್ಲಿ ರಾತ್ರಿ ಅವಲಕ್ಕಿ ಹಾಗೂ ದಾಲ್ ಚಪಾತಿ ತಿಂದಿದ್ದ ವಿದ್ಯಾರ್ಥಿಗಳಲ್ಲಿ ದಿಢೀರ್ ವಾಂತಿ-ಭೇದಿ ಕಾಣಿಸಿಕೊಂಡು ಆರೋಗ್ಯ ಏರುಪೇರಾಗಿತ್ತು. ತಕ್ಷಣವೇ ಅಸ್ವಸ್ಥ ಮಕ್ಕಳನ್ನು ಕೋಣಂದೂರು ಸರ್ಕಾರಿ ಆಸ್ಪತ್ರೆ ಹಾಗೂ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಈ ಪೈಕಿ ತೀವ್ರ ಅಸ್ವಸ್ಥಗೊಂಡಿದ್ದ 11 ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್…