ಒಂದೇ ಒಂದು ಪಂದ್ಯ ಆಡದಿದ್ದರೂ ಭಾರತಕ್ಕೆ ಕಂಚಿನ ಪದಕ ಖಚಿತವಾಗಿದ್ದು ಹೇಗೆ? – Kannada News | Lovlina Borgohain Secures Medal Without Firing a Punch at CWG 2026
ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನ (CWG 2026) ಮೊದಲ ದಿನವೇ ಭಾರತಕ್ಕೆ ಕಂಚಿನ ಪದಕ ಖಚಿತವಾಗಿದೆ. ಅದು ಕೂಡ ಬಾಕ್ಸಿಂಗ್ ವಿಭಾಗದಲ್ಲಿ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದಿದ್ದ ಭಾರತದ ಸ್ಟಾರ್ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್, ಈ ಕ್ರೀಡಾಕೂಟದಲ್ಲಿ ಒಂದೇ ಒಂದು ಪಂದ್ಯವನ್ನು ಆಡದೆ ಕಂಚಿನ ಪದಕವನ್ನು ಖಚಿತಪಡಿಸಿರುವುದು ವಿಶೇಷ. ಮಹಿಳೆಯರ 75 ಕೆಜಿ ಬಾಕ್ಸಿಂಗ್ ವಿಭಾಗದಲ್ಲಿ ಸ್ಪರ್ಧಿಸುತ್ತಿರುವ ಅಸ್ಸಾಂನ 28 ವರ್ಷದ ಲವ್ಲಿನಾ, ನೇರವಾಗಿ ಸೆಮಿಫೈನಲ್ ಪ್ರವೇಶಿಸುವ ಮೂಲಕ ಈ ಅಪರೂಪದ ಸಾಧನೆ ಮಾಡಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್…