ಬಾಗಲಕೋಟೆ ಕಾರು ಸ್ಫೋಟ ಕೇಸ್ಗೆ ಟ್ವಿಸ್ಟ್! ವೈನ್ ಶಾಪ್ ಮ್ಯಾನೇಜರ್ ಕೊಲೆ ಯತ್ನದ ರಹಸ್ಯ ಬಯಲು – Kannada News | Bagalkot Car Explosion Case Takes a Twist: Mystery Behind Attempted Murder of Wine Shop Manager Revealed
ಬಾಗಲಕೋಟೆ, ಆಗಸ್ಟ್ 14: ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಜುಲೈ 25ರಂದು ನಡೆದಿದ್ದ ವೈನ್ ಶಾಪ್ ಮ್ಯಾನೇಜರ್ ಕಾರು ಸ್ಫೋಟ ಪ್ರಕರಣದ (Car Blast) ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ನಾಲ್ಕು ಎಕರೆ ಜಮೀನಿನ ವಿವಾದ ಹಾಗೂ ಹಣಕಾಸಿನ ವಿಚಾರಕ್ಕಾಗಿ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಕಾರನ್ನು ಸ್ಫೋಟಿಸಿ ಕೊಲೆಗೆ ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಲ್ವರ ಬಂಧನ: ಓರ್ವನ ಪತ್ತೆಗೆ ಬಲೆ ಬೀಸಿದ ಪೊಲೀಸ್ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ತಿಗಣಿಬಿದರಿ…