ಸುಪ್ರೀಂನಲ್ಲಿ ಎಸ್ಐಆರ್ ವಿರುದ್ಧದ ಅರ್ಜಿ ವಿಚಾರಣೆ, ಮಮತಾ ಬ್ಯಾನರ್ಜಿ ವಾದ ಮಂಡಿಸುವ ಸಾಧ್ಯತೆ – Kannada News | Bengal SIR Case, Mamata Banerjee Appears Before Supreme Court Today
ನವದೆಹಲಿ, ಫೆಬ್ರವರಿ 04: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆ ನಡೆಸಲಿದೆ. ಈ ನಿರ್ಣಾಯಕ ವಿಚಾರಣೆಯ ಸಮಯದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖುದ್ದು ಹಾಜಗಲಿದ್ದಾರೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್ ಪ್ರಕಾರ, ಈ ವಿಷಯವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ…