ಶಿವಮೊಗ್ಗ: ರಸ್ತೆ ಅಗಲೀಕರಣ ವೇಳೆ ಭೀಕರ ದುರಂತ; ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು

ಶಿವಮೊಗ್ಗ: ರಸ್ತೆ ಅಗಲೀಕರಣ ವೇಳೆ ಭೀಕರ ದುರಂತ; ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು

ಶಿವಮೊಗ್ಗ, ಏಪ್ರಿಲ್​ 09: ರಸ್ತೆ ಅಗಲೀಕರಣ ವೇಳೆ ಗುಡ್ಡ ಕುಸಿದು ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್​ನಲ್ಲಿ ನಡೆದಿದೆ. ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತರು. ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ.

Source link

ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ

ಮುಂಬೈ, ಏಪ್ರಿಲ್ 9: ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Mumbai Airport) ಟರ್ಮಿನಲ್ 1 ಬಿ ಒಳಗೆ ಇಂದು ಸಂಜೆ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಟರ್ಮಿನಲ್ ಒಳಗಿನ ಕೇಬಲ್ ಟ್ರೇಗಳು ಮತ್ತು ಸ್ವಿಚ್ ಬಾಕ್ಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮುಂಬೈ ಅಗ್ನಿಶಾಮಕ ದಳದ ಮುಖ್ಯ ಅಗ್ನಿಶಾಮಕ ಅಧಿಕಾರಿ ರವೀಂದ್ರ ಅಂಬಲ್ಗೇಕರ್ ಹೇಳಿದ್ದಾರೆ. ಬೆಂಕಿ ಟರ್ಮಿನಲ್‌ನ ನೆಲ ಮಹಡಿಯಲ್ಲಿ ಮಾತ್ರ ಕಾಣಿಸಿಕೊಂಡಿದ್ದು ಮಾಹಿತಿ ಪಡೆದ ಕೂಡಲೇ ಮುಂಬೈ ಅಗ್ನಿಶಾಮಕ ದಳ, ಪೊಲೀಸರು ಮತ್ತು ವಾರ್ಡ್ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಧಾವಿಸಿದರು. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಬೆಂಕಿಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

KKR vs LSG: ಅಂಪೈರ್​ಗಳ ಅಜಾಗರೂಕತೆ; ಕೆಕೆಆರ್​ಗೆ ಮಹಾಮೋಸ? ವಿಡಿಯೋ ನೋಡಿ

ಐಪಿಎಲ್ 2026 (IPL 2026) ರ 15 ನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (KKR vs LSG) ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್​ಗೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಫಿನ್ ಅಲೆನ್ ಮತ್ತೊಮ್ಮೆ ಬಹುಬೇಗ ವಿಕೆಟ್ ಒಪ್ಪಿಸಿದ್ದಾರೆ. ಆದರೆ ಇದೀಗ ಆ ವಿಕೆಟ್ ಹೊಸ ವಿವಾದಕ್ಕೆ ಕಾರಣವಾಗಿದೆ. ಪಂದ್ಯದ ಎರಡನೇ ಓವರ್‌ನಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ವೇಗಿ ಪ್ರಿನ್ಸ್ ಯಾದವ್ ಫಿನ್ ಅಲೆನ್ ಅವರನ್ನು ಔಟ್ ಮಾಡಿದರು. ಆದಾಗ್ಯೂ, ಅಂಪೈರ್ ಅವರ ಜಾಗರೂಕತೆಯಿಂದ ಕೆಕೆಆರ್​ಗೆ ಅನ್ಯಾಯವಾಗಿದೆ ಎಂಬುದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿರುವ ವಿಷಯವಾಗಿದೆ.

ಫಿನ್ ಅಲೆನ್ ನಾಟೌಟ್?

ವಾಸ್ತವವಾಗಿ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಇನ್ನಿಂಗ್ಸ್‌ನ ಎರಡನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಪ್ರಿನ್ಸ್ ಯಾದವ್ ಕೆಕೆಆರ್ ಆರಂಭಿಕ ಆಟಗಾರ ಫಿನ್ ಅಲೆನ್ ಅವರನ್ನು ಔಟ್ ಮಾಡಿದರು. ಆಫ್ ಸ್ಟಂಪ್ ಹೊರಗೆ ಹೋಗುತ್ತಿದ್ದ ಚೆಂಡನ್ನು ಅಲೆನ್ ಪುಲ್ ಶಾಟ್ ಮಾಡಲು ಪ್ರಯತ್ನಿಸಿದನು, ಆದರೆ ಚೆಂಡು ಅವರ ಬ್ಯಾಟ್‌ನ ಮೇಲಿನ ಅಂಚನ್ನು ತಾಗಿ ಮೇಲಕ್ಕೆ ಏರಿತು. ಡೀಪ್ ಥರ್ಡ್ ಮ್ಯಾನ್​ನಲ್ಲಿ ನಿಂತಿದ್ದ ದಿಗ್ವೇಶ್ ರಥಿ ಬೌಂಡರಿ ಬಳಿ ಅದ್ಭುತ ಕ್ಯಾಚ್ ಹಿಡಿದರು.

ಬೌಂಡರಿ ಕುಶನ್‌ನಲ್ಲಿ ಸ್ವಲ್ಪ ಚಲನೆ

ಆರಂಭದಲ್ಲಿ, ಅದು ಅದ್ಭುತ ಕ್ಯಾಚ್‌ನಂತೆ ಕಾಣುತ್ತಿತ್ತು. ಆದರೆ ರಿಪ್ಲೇಗಳಲ್ಲಿ ದಿಗ್ವೇಶ್ ರಥಿ ಕ್ಯಾಚ್ ತೆಗೆದುಕೊಳ್ಳುವಾಗ ಬೌಂಡರಿ ಹಗ್ಗವನ್ನು ಮುಟ್ಟಿದ್ದಾರೆಂದು ಸ್ಪಷ್ಟವಾಗಿ ತೋರಿಸಿದೆ. ಒಂದು ಕ್ಷಣ, ಅವರ ಕಾಲು ಹಗ್ಗವನ್ನು ತಾಗುತ್ತಿರುವಂತೆ ಕಂಡುಬಂದಿದೆ. ಇದಲ್ಲದೆ, ಬೌಂಡರಿ ಕುಶನ್‌ನಲ್ಲಿ ಸ್ವಲ್ಪ ಚಲನೆ ಕಂಡುಬಂದಿದೆ. ಆದರೂ, ಅಂಪೈರ್ ಅದನ್ನು ಪರಿಶೀಲಿಸದೆ ಫಿನ್ ಅಲೆನ್‌ರನ್ನು ಔಟ್ ಎಂದು ಘೋಷಿಸಿದ್ದಾರೆ. ಈ ನಿರ್ಧಾರವು ತಕ್ಷಣವೇ ವಿವಾದವನ್ನು ಹುಟ್ಟುಹಾಕಿದ್ದು, ಅಂಪೈರ್ ಜಾಗರೂಕರಾಗಿದ್ದರೆ, ಅಲೆನ್ ಔಟ್ ಆಗುತ್ತಿರಲಿಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯವಾಗಿದೆ.

KKR vs LSG IPL 2026 Live Score: ಕೆಕೆಆರ್ 4ನೇ ವಿಕೆಟ್ ಪತನ

ಅಂಪೈರ್ ವಿರುದ್ಧ ಅಸಮಾಧಾನ

ಅಂಪೈರ್ ಅವರ ಈ ನಿರ್ಧಾರದಿಂದ ಕೋಪಗೊಂಡಿರುವ ನೆಟ್ಟಿಗರು #FinnAllenNotOut ಮತ್ತು #BadUmpiring ನಂತಹ ಹ್ಯಾಶ್‌ಟ್ಯಾಗ್‌ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಮಾಡಲು ಪ್ರಾರಂಭಿಸಿದ್ದಾರೆ. ಏತನ್ಮಧ್ಯೆ, ಈ ಅಂಪೈರ್‌ನ ತಪ್ಪಿನಿಂದಾಗಿ, ಕೋಲ್ಕತ್ತಾ ನೈಟ್ ರೈಡರ್ಸ್ ಕೇವಲ 15 ರನ್‌ಗಳಿಗೆ ತಮ್ಮ ಮೊದಲ ವಿಕೆಟ್ ಕಳೆದುಕೊಂಡಿತು. ಫಿನ್ ಅಲೆನ್ 8 ಎಸೆತಗಳಲ್ಲಿ 9 ರನ್​ಗಳಿಸಲಷ್ಟೇ ಶಕ್ತರಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮನೆಯಲ್ಲೇ ಕುಳಿತು ಹಣ ಸಂಪಾದಿಸಲು ಇಲ್ಲಿವೆ ಬೆಸ್ಟ್‌ ಐಡಿಯಾ

ಇಂದಿನ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಬಯಸಿದ ಕೆಲಸವನ್ನು (Job) ಗಳಿಸವುದು ಅಷ್ಟು ಸುಲಭವಲ್ಲ. ಒಂದು ಕೆಲಸ ಗಿಟ್ಟಿಸಿಕೊಳ್ಳಲು ತುಂಬಾನೇ ಕಷ್ಟಪಡಬೇಕಾಗುತ್ತದೆ. ಹೀಗೆ ಕೆಲಸವನ್ನು ಹುಡುಕಲು ಹಲವರು ಕಷ್ಟಪಡುತ್ತಿರುತ್ತಾರೆ. ಇನ್ನೂ ಕೆಲವರು ಕೆಲಸವೇ ಇಲ್ಲದೇ ಮನೆಯಲ್ಲಿಯೇ ಟೈಮ್‌ ಪಾಸ್‌ ಮಾಡುತ್ತಿರುತ್ತಾರೆ. ಇಂತಹವರಿಗೆ ಮನೆಯಲ್ಲಿಯೇ ಕುಳಿತು ಸುಲಭವಾಗಿ ಕೈ ತುಂಬಾ ಹಣ ಸಂಪಾದನೆ ಮಾಡಬಹುದು. ಹೌದು ಇಂದಿನ ಈ ಇಂಟರ್‌ನೆಟ್‌ ಯುಗದಲ್ಲಿ ಮನೆಯಲ್ಲಿಯೇ ಕುಳಿತು ಸ್ಮಾರ್ಟ್‌ ಫೋನ್‌ ಮೂಲಕ ಕೆಲಸ ಮಾಡಲು ಹಲವು ವೇದಿಕೆಗಳಿದ್ದು, ಇವುಗಳ ಸರಿಯಾದ ಸದ್ಬಳಕೆಯಿಂದ, ನಿಮ್ಮಲ್ಲಿರುವ ಕೌಶಲ್ಯಗಳಿಂದ ನೀವು ಕೂಡ ಕೈ ತುಂಬಾ ಹಣ ಸಂಪಾದನೆ ಮಾಡಬಹುದು.

ಮನೆಯಲ್ಲಿಯೇ ಕುಳಿತು ಹಣ ಗಳಿಸುವುದು ಹೇಗೆ?

ಸ್ವತಂತ್ರ್ಯೋದ್ಯಮ: ಕಂಟೆಂಟ್‌ ರೈಟಿಂಗ್‌, ವಿಡಿಯೋ ಎಡಿಟಿಂಗ್‌, ಗ್ರಾಫಿಕ್‌ ಡಿಸೈನ್‌ ಇತ್ಯಾದಿಗಳಲ್ಲಿ ನೀವು ಪರಿಣಿತಿಯನ್ನು ಹೊಂದಿದ್ದರೆ, ಈ ಫೀಲ್ಡ್‌ಗಳ ಮೂಲಕ ನೀವು ಮನೆಯಲ್ಲಿಯೇ ಕುಳಿತು ಸಾಕಷ್ಟು ಹಣ ಗಳಿಸಬಹುದು.

ಯೂಟ್ಯೂಬ್‌ ಬಾನೆಲ್: ಇಂದಿನ ಈ ಡಿಜಿಟಲ್‌ ಯುಗದಲ್ಲಿ ಹಲವರು ಯೂಟ್ಯೂಬ್‌ ಮೂಲಕವೇ ತಿಂಗಳಿಗೆ ಲಕ್ಷಾಂತರ ರೂಪಾಯಿ ಹಣ ಸಂಪಾದನೆ ಮಾಡುತ್ತಿದ್ದಾರೆ. ನೀವು ಕೂಡ ಫ್ಯಾಷನ್‌, ಲೈಫ್‌ ಸ್ಟೈಲ್‌, ಕುಕ್ಕಿಂಗ್‌ ಡೈಲಿ ವ್ಲಾಗಿಂಗ್‌ ಸೇರಿದಂತೆ ಹಲವು ವಿಡಿಯೋಗಳನ್ನು ಶೂಟ್‌ ಮಾಡಿ ಹರಿ ಬಿಡುವ ಮೂಲಕ ಯೂಟ್ಯೂಬ್‌ನಿಂದ ಹಣವನ್ನು ಗಳಿಸಬಹುದು.  ಲಕ್ಷಾಂತರ ರೂಪಾಯಿ ಹಣ ಸಂಪಾದನೆ ಮಾಡಲು ಇದೊಂದು ಬೆಸ್ಟ್‌ ಪ್ಲಾಟ್‌ಫಾರ್ಮ್‌ ಅಂತಾನೇ ಹೇಳಬಹುದು. ಇದಲ್ಲದೆ ಇನ್‌ಸ್ಟಾಗ್ರಾಮ್‌, ಫೇಸ್‌ಬುಕ್‌ನಲ್ಲಿ ಕಂಟೆಂಟ್‌ ಕ್ರಿಯೇಟರ್‌ ಆಗಿಯೂ ಹಣ ಸಂಪಾದಿಸಬಹುದು.

ಆನ್‌ಲೈನ್‌ ಟೀಚಿಂಗ್, ಇ ಟ್ಯೂಷನ್:‌ ನೀವು ಒಂದು ವಿಷಯದಲ್ಲಿ ಪರಿಣಿತರಾಗಿದ್ದರೆ, ಆ ಜ್ಞಾನವನ್ನು ಕಲಿಸಲು ಬಳಸಿ. ಈ ಮೂಲಕ ಹಣವನ್ನು ಸಂಪಾದನೆ ಮಾಡಬಹುದು.  ಹೌದು TutorMe, Chegg, Vedantu ನಂತಹ ವೆಬ್‌ಸೈಟ್‌ಗಳು ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಬೋಧನೆ ಮಾಡಲು ನಿಮಗೆ ಅವಕಾಶ ನೀಡುತ್ತವೆ. ನಿಮ್ಮ ಪರಿಣತಿಯ ಆಧಾರದ ಮೇಲೆ ನೀವು ತರಗತಿಗಳು ಮತ್ತು ವಿಷಯಗಳನ್ನು ಆಯ್ಕೆ ಮಾಡಬಹುದು.

ವೆಬ್ ಡಿಸೈನಿಂಗ್: Wix ಮತ್ತು WordPress ನಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ವೆಬ್‌ಸೈಟ್‌ಗಳನ್ನು ವಿನ್ಯಾಸಗೊಳಿಸುವ ಮೂಲಕ ಮತ್ತು ಸಣ್ಣ ವ್ಯವಹಾರ ಯೋಜನೆಗಳಲ್ಲಿ ಕೆಲಸ ಮಾಡುವ ಮೂಲಕ ನೀವು ಹಣ ಗಳಿಸಬಹುದು.

ಬ್ಲಾಗಿಂಗ್:‌ ಬ್ಲಾಗ್‌ ಬರೆಯುವ ಮೂಲಕವೂ ನೀವು ಹಣ ಗಳಿಸಬಹುದು. ಮನೆಯಲ್ಲಿ ಕುಳಿತು ನಿಮಗೆ ತಿಳಿದಿರುವ ವಿಷಯಗಳ ಬಗ್ಗೆ ಬ್ಲಾಗ್‌ ಬರೆಯುವ ಮೂಲಕ ನೀವು ಹಣ ಗಳಿಸಬಹುದು.‌ನಿಮಗೆ ಬೇಕಾಗಿರುವುದು ಲ್ಯಾಪ್‌ಟಾಪ್ ಮತ್ತು ಇಂಟರ್ನೆಟ್ ಸಂಪರ್ಕ. ನೀವು ದೊಡ್ಡ ಪ್ರಮಾಣದಲ್ಲಿ ಬ್ಲಾಗಿಂಗ್ ಪ್ರಾರಂಭಿಸಲು ಬಯಸಿದರೆ, ನೀವು ನಿಮ್ಮ ಸ್ವಂತ ವೆಬ್‌ಸೈಟ್ ಅನ್ನು ಸಹ ರಚಿಸಬಹುದು. ಈ ಡಿಜಿಟಲ್ ಯುಗದಲ್ಲಿ ಬ್ಲಾಗಿಂಗ್ ಹೆಚ್ಚು ಜನಪ್ರಿಯವಾಗುತ್ತಿದೆ.

ಡಿಜಿಟಲ್‌ ಪ್ರಾಡೆಕ್ಟ್:‌ ನೀವು ಇ ಪುಸ್ತಕ, ಕೋರ್ಸ್‌ ಇತ್ಯಾದಿಗಳನ್ನು ರಚಿಸಬಹುದು. ಮತ್ತು ಅದನ್ನು ಮಾರಾಟ ಮಾಡಬಹುದು. ಅಲ್ಲದೆ ಕಸ್ಟಮೈಸ್ಡ್‌ ಉತ್ಪನ್ನಗಳನ್ನು ತಯಾರಿಸಿ ಅದನ್ನು ಮಾರಾಟ ಮಾಡುವ ಮೂಲಕವೂ ಹಣ ಸಂಪಾದನೆ ಮಾಡಬಹುದು.

ಇದನ್ನೂ ಓದಿ: ಕೆಲಸಗಳ ಮಾಡೋ ಮುನ್ನ ನೂರು ಬಾರಿ ಯೋಚಿಸಿ, ಇಲ್ಲಾಂದ್ರೆ ಪಶ್ಚಾತಾಪ ಪಡಬೇಕಾಗುತ್ತದೆ

ಸಾಮಾಜಿಕ ಮಾಧ್ಯಮ ನಿರ್ವಹಣೆ: ಅನೇಕ ವ್ಯವಹಾರಗಳಿಗೆ ತಮ್ಮ ಸಾಮಾಜಿಕ ಮಾಧ್ಯಮ ಪೇಜ್‌ಗಳನ್ನು ನಿರ್ವಹಿಸಲು ಸಹಾಯದ ಅಗತ್ಯವಿರುತ್ತದೆ. ನೀವು ಸೋಷಿಯಲ್‌ ಮೀಡಿಯಾ ಹ್ಯಾಂಡಲ್‌ ಮಾಡುವುದರಲ್ಲಿ ಎಕ್ಸ್‌ಪರ್ಟ್‌ ಆಗಿದ್ರೆ, ಕೆಲವೊಂದು ಬ್ರಾಂಡ್‌ಗಳ ಸೋಷಿಯಲ್‌ ಮೀಡಿಯಾ ಖಾತೆಗಳನ್ನು ನಿರ್ವಹಿಸುವ ಮೂಲಕ  ಮನೆಯಲ್ಲಿಯೇ ಕುಳಿತು ಹಣ ಸಂಪಾದಿಸಬಹುದು.

ಷೇರು ವ್ಯಾಪಾರ ಮತ್ತು ಹೂಡಿಕೆ: ನಿಮಗೆ ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದರೆ  ನೀವು ಷೇರು ವ್ಯಾಪಾರ ಅಥವಾ ಹಣಕಾಸು ಮಾರುಕಟ್ಟೆಗಳಲ್ಲಿ ಹೂಡಿಕೆ ಮಾಡಬಹುದು. ಅನೇಕ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಷೇರುಗಳು, ಕ್ರಿಪ್ಟೋಕರೆನ್ಸಿಗಳು ಅಥವಾ ಇತರ ಹಣಕಾಸು ಮೂಲಗಳನ್ನು ಖರೀದಿಸಲು ಮತ್ತು ಮಾರಾಟ ಮಾಡಲು ಬಳಕೆದಾರ ಸ್ನೇಹಿ ಇಂಟರ್ಫೇಸ್‌ಗಳನ್ನು ನೀಡುತ್ತವೆ. ಆದರೆ ಈ ಕ್ಷೇತ್ರವನ್ನು ಆಯ್ಕೆ ಮಾಡುವ ಮೊದಲು ಸಂಪೂರ್ಣ ಸಂಶೋಧನೆ ನಡೆಸುವುದು ಮತ್ತು ಇದರ ಸಾಧಕ ಬಾಧಕಗಳನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು

ಬೆಂಗಳೂರು, ಏಪ್ರಿಲ್​ 09: ಬೆಂಗಳೂರಿನ ಆರ್‌ವಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿ ಗಮನ ಸೆಳೆದಿದ್ದಾರೆ. ನಿಹಾರಿಕಾ, ಅಭಿಜ್ಞಾ ಹಾಗೂ ಪ್ರಿಯಾ 600ಕ್ಕೆ 597 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ತಮ್ಮ ಮಕ್ಕಳ ಸಾಧನೆ ಕುರಿತು ಮಾತನಾಡಿದ ಪೋಷಕರು ಭಾವುಕರಾದರು. ನಮ್ಮ ಮಕ್ಕಳಿಗೆ ಯಾವುದೇ ರೀತಿಯ ಒತ್ತಡವನ್ನು ಹೇರದೆ, ಅವರ ಆಸಕ್ತಿಗಳಿಗೆ ಮತ್ತು ಆಯ್ಕೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾಗಿ ಹೇಳಿದ್ದಾರೆ. ತಮ್ಮ ಮಕ್ಕಳ ಸಾಧನೆಗೆ ಅತೀವ ಸಂತೋಷ ಮತ್ತು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಲ್ಲಿಕ್ ಮಾಡಿ.

Source link

ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್

ಇರಾನ್ ಯುದ್ಧದ ಪರಿಣಾಮದಿಂದಾಗಿ ಎಲ್​ಪಿಜಿ (LPG) ಅಭಾವ ಉಂಟಾಗಿದೆ. ಆಟೋ ಚಾಲಕರು ಗ್ಯಾಸ್ ಇಲ್ಲದೇ ಪರದಾಡುವಂತಾಗಿದೆ. ಹಾಗಾಗಿ ನಟ ವಿನೋದ್ ರಾಜ್ ಅವರು ಆಟೋ ಚಾಲಕರ ನೆರವಿಗೆ ಬಂದಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ತಾಯಿ, ನಟಿ ಲೀಲಾವತಿ ಸಮಾಧಿ ಬಳಿ ದಿನಸಿ ಕಿಟ್ ವಿತರಣೆ ಮಾಡಿದ್ದಾರೆ. ನೂರಾರು ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಲಾಗಿದೆ. ತಾಯಿಯ ಹೆಸರಿನಲ್ಲಿ ವಿನೋದ್ ರಾಜ್ (Vinod Raj) ಅವರು ಈ ಕಾರ್ಯ ಮಾಡಿದ್ದಾರೆ. ಈ ವೇಳೆ ಆಟೋ ಚಾಲಕರಿಗೆ ಅವರು ಊಟ ಹಾಕಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ವರದಿ: ಮಂಜುನಾಥ್, ನೆಲಮಂಗಲ

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಬೆಂಗಳೂರು, (ಏಪ್ರಿಲ್ 09): 2025-26ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu bangarappa) ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770 (88.70%) ಬಾಲಕಿಯರು ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಇನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5,46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಫಸ್ಟ್‌ ಟೈಂ ಶೇ.86.48 ಫಲಿತಾಂಶ ಬಂದಿದೆ. ಇದು ಐತಿಹಾಸಿಕ ದಿನ ಎಂದು ಸಚಿವ ಮಧು ಬಂಗಾರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಭಾಗವಾರು ಫಲಿತಾಂಶ

ಕಲಾ ವಿಭಾಗದಲ್ಲಿ 98,310 (72.86%) ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 1,82,317(88.04%) ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ 2,66,071( 86.48%) ಉತ್ತೀರ್ಣರಾಗಿದ್ದಾರೆ. ಈ ಪೈಕಿ ನಗರ ವಿಭಾಗದಲ್ಲಿ 3,71,853 (85.95%) ಮಕ್ಕಳು, ಗ್ರಾಮೀಣ ವಿಭಾಗದ 1,74,845 (87.62%) ಮಕ್ಕಳು ಉತ್ತೀರ್ಣರಾಗಿದ್ದಾರೆ. ಉನ್ನತ ಶ್ರೇಣಿಯಲ್ಲಿ 1,70,529 ಮಕ್ಕಳು, ಪ್ರಥಮ ದರ್ಜೆಯಲ್ಲಿ 2,95,385 ಮಕ್ಕಳು, ದ್ವೀತಿಯ ದರ್ಜೆಯಲ್ಲಿ 63,957 ಮಕ್ಕಳು ಉತ್ತೀರ್ಣರಾಗಿದ್ದು, 16,827 ಮಕ್ಕಳು ಜಸ್ಟ್‌ ಪಾಸ್‌ ಆಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 2nd PUC District Wise Result 2026: ಯಾವ ಜಿಲ್ಲೆ ಫಸ್ಟ್, ಯಾವುದು ಲಾಸ್ಟ್? ಇಲ್ಲಿದೆ ಜಿಲ್ಲಾವಾರು ಲಿಸ್ಟ್

ಇನ್ನೂ 5,577 ವಿದ್ಯಾರ್ಥಿಗಳು 35% ನಿಂದ 33% ಪಾಸಿಂಗ್ ಅಂಕದಿಂದ ಪಾಸ್ ಆಗಿದ್ದಾರೆ. ಮಕ್ಕಳಿಗೆ ಫಲಿತಾಂಶ ಮೊದಲು ಕೊಡಬೇಕು ಅಂತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟ ಮಾಡಿದ್ದೇವೆ. ಅಂಕಪಟ್ಟಿ ಕೂಡ ಇಂದೇ ಲಭ್ಯವಾಗಿದೆ. ಡಿಜಿ ಲಾಕರ್‌ನಲ್ಲೂ ಅಂಕಪಟ್ಟಿ ಸಿಗಲಿದೆ. ರಾಜ್ಯದಲ್ಲಿ ಫಸ್ಟ್‌ ಟೈಮ್‌ 86.48% ಫಲಿತಾಂಶ ಬಂದಿದೆ ಎಂದು ತಿಳಿಸಿದರು.

ಏ. 30ರಿಂದ ದ್ವಿತೀಯ ಪಿಯುಸಿ ಎರಡನೇ ಪರೀಕ್ಷೆ

ಪರೀಕ್ಷೆ 1ರಲ್ಲಿ ಅನುತ್ತೀರ್ಣರಾದವರು ಯಾವುದೇ ಬೇಸರ ಮಾಡಿಕೊಳ್ಳದೆ ಧೈರ್ಯವಾಗಿ ಫೇಲ್ ಆದ ವಿಷಯಗಳ ಪರೀಕ್ಷೆಯನ್ನು ಮತ್ತೊಮ್ಮೆ ಬರೆಯಲು ಅವಕಾಶ ಇದೆ. ದ್ವಿತೀಯ ಪಿಯುಸಿ ಎರಡನೇ ಪರೀಕ್ಷೆ (Exam-2) ಏಪ್ರಿಲ್ 30ರಿಂದ ಆರಂಭವಾಗಿ ಮೇ 13ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ತಮ್ಮ ಫಲಿತಾಂಶವನ್ನು ಸುಧಾರಿಸಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಬಾರಿ ಮೂರನೇ ಪರೀಕ್ಷೆ (Exam-3) ನಡೆಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಮರುಮೌಲ್ಯಮಾಪನ-ಮರುಎಣಿಕೆಗೆ ಅರ್ಜಿ

ಫಲಿತಾಂಶದ ಬಗ್ಗೆ ಅನುಮಾನ ಇರುವ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ (Revaluation) ಮತ್ತು ಮರುಎಣಿಕೆ (Recounting)ಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರಿಗಾಗಿ ಏಪ್ರಿಲ್ 13ರಿಂದ ಏಪ್ರಿಲ್ 19ರವರೆಗೆ ಸಮಯ ನಿಗದಿಪಡಿಸಲಾಗಿದೆ. ಮರುಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ 1670 ರೂ. ಶುಲ್ಕ ವಿಧಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮತ್ತೊಮ್ಮೆ ಪರಿಶೀಲಿಸಿಕೊಳ್ಳಬಹುದು.

Source link

ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!

ಭೂಪಾಲ್, ಏಪ್ರಿಲ್ 9: ಮಧ್ಯಪ್ರದೇಶದಲ್ಲಿ ಭಕ್ತರು ಧಾರ್ಮಿಕ ಆಚರಣೆಯ ಸಲುವಾಗಿ ನರ್ಮದಾ ನದಿಗೆ ಸುಮಾರು 11,000 ಲೀಟರ್ ಹಾಲನ್ನು ಸುರಿಯುತ್ತಿರುವ ವಿಡಿಯೋ ವೈರಲ್ (Viral Video) ಆಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆ ಮತ್ತು ತೀವ್ರ ಟೀಕೆಗೆ ಕಾರಣವಾಗಿದೆ. ಮಧ್ಯಪ್ರದೇಶದಲ್ಲಿ ನಡೆದಿದೆ ಎನ್ನಲಾದ ಈ ಘಟನೆಯು ಸಾಂಪ್ರದಾಯಿಕ ಆಧ್ಯಾತ್ಮಿಕ ಆಚರಣೆ ಅಥವಾ ಪ್ರತಿಜ್ಞೆಯ ಈಡೇರಿಕೆಯ ಭಾಗವಾಗಿ ಪವಿತ್ರವಾದ ನದಿಗೆ ಟ್ಯಾಂಕರ್​​ಗಟ್ಟಲೆ ಹಾಲನ್ನು ನೇರವಾಗಿ ಸುರಿಯುವ ದೊಡ್ಡ ಆಚರಣೆಯಾಗಿದೆ. ಅಂದಾಜಿನ ಪ್ರಕಾರ, ಇಷ್ಟು ಪ್ರಮಾಣದ ಹಾಲಿನ ಬೆಲೆ 5.5 ಲಕ್ಷ ರೂ.ನಿಂದ 7.7 ಲಕ್ಷ ರೂ.ವರೆಗೆ ಇರಲಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟಿಸಿಎಸ್‌ ವಿಶ್ವ 10ಕೆ ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ಸಿಎಂ, ಡಿಸಿಎಂಗೆ ತೇಜಸ್ವಿ ಸೂರ್ಯ ಆಗ್ರಹ

ಬೆಂಗಳೂರು, ಏಪ್ರಿಲ್​ 09: ‘ಎಂದೆಂದಿಗೂ ಬೆಂಗಳೂರು’ ಥೀಮ್‌ ಅಡಿಯಲ್ಲಿ 18 ಆವೃತ್ತಿಯ ಟಿಸಿಎಸ್ ವಿಶ್ವ 10 ಓಟವು ಏಪ್ರಿಲ್​ 26ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಕಳೆದ ವರ್ಷ ರಸ್ತೆಗಳಲ್ಲಿ ಎಲ್ಲೆಡೆ ಗುಂಡಿಗಳೇ ತುಂಬಿದ್ದರಿಂದ ಓಟಗಾರರು ತೊಂದರೆ ಅನುಭವಿಸಿದ್ದರು. ಆದರೆ ಈ ಭಾರಿ ಹಾಗಾಗಬಾರದು. ಈ ನಿಟ್ಟಿನಲ್ಲಿ ರೇಸ್ ನಡೆಯುವ ಮಾರ್ಗದಲ್ಲಿನ ರಸ್ತೆ ಗುಂಡಿಗಳನ್ನು ಸರಿಪಡಿಸುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಿಎಂ, ಡಿಸಿಎಂ ಮತ್ತು ಜಿಬಿಎ ಆಯುಕ್ತರಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಈ ರೇಸ್ ಬೆಂಗಳೂರಿನ ಹೆಮ್ಮೆ. ಭಾರತದಾದ್ಯಂತ ಓಟಗಾರರು ಭಾಗವಹಿಸುತ್ತಾರೆ. ಅವರಿಗೆ ನಿರಾಶೆಯಾಗಬಾರದು. ನಗರದ ಎಲ್ಲಾ ರಸ್ತೆಗಳನ್ನು ಸರಿಪಡಿಸುವುದು ನಿಮ್ಮಿಂದ ತುಂಬಾ ಕಷ್ಟ ಎಂದು ನಮಗೆ ಗೊತ್ತು, ಹಾಗಾಗಿ 10 ಕಿ.ಮೀ ರಸ್ತೆಯನ್ನು ದುರಸ್ತಿ ಮಾಡುವಂತೆ ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

WTC: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ​ ತಂಡಗಳ ಸಂಖ್ಯೆ ಹೆಚ್ಚಳಕ್ಕೆ ನಿರ್ಧಾರ

ಐಪಿಎಲ್ ನಡುವೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಅದರಂತೆ ಟೆಸ್ಟ್ ವಿಶ್ವಕಪ್ ಎಂದೇ ಬಿಂಬಿತವಾಗಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ (WTC) ಮಹತ್ವದ ಬದಲಾವಣೆ ಮಾಡಲು ಐಸಿಸಿ ನಿರ್ಧರಿಸಿದೆ. ವಾಸ್ತವವಾಗಿ ಜಯ್​ ಶಾ (Jay Shah) ಅವರು ಐಸಿಸಿ (ICC) ಅಧ್ಯಕ್ಷರಾದ ಬಳಿಕ ಟೆಸ್ಟ್ ಕ್ರಿಕೆಟ್ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಇದೀಗ ಅದಕ್ಕೆ ಪೂರಕವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 9 ತಂಡಗಳ ಬದಲಿಗೆ 12 ತಂಡಗಳನ್ನು ಕಣಕ್ಕಿಣಿಸುವ ಯೋಜನೆಯನ್ನು ಐಸಿಸಿ ಹಾಕಿಕೊಂಡಿದೆ. ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಹೊಸದಾಗಿ 3 ತಂಡಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ.

ಆ ಹೊಸ 3 ತಂಡಗಳು ಯಾವುವು?

ಜಯ್ ಶಾ ನೇತೃತ್ವದ ಐಸಿಸಿ, ಜಿಂಬಾಬ್ವೆ, ಐರ್ಲೆಂಡ್ ಮತ್ತು ಅಫ್ಘಾನಿಸ್ತಾನವನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಸೇರಿಸಲು ಯೋಚಿಸಿದೆ ಎಂದು ವರದಿಯಾಗಿದೆ. ಈ ಮೂರು ತಂಡಗಳು ಈಗ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಇಂಗ್ಲೆಂಡ್, ಬಾಂಗ್ಲಾದೇಶ ಮತ್ತು ಶ್ರೀಲಂಕಾ ವಿರುದ್ಧ ಸ್ಪರ್ಧಿಸಲಿವೆ.

WTC ಯ ನಿಯಮಗಳು ಯಾವುವು?

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ, ಪ್ರತಿ ಎರಡು ವರ್ಷಗಳಿಗೊಮ್ಮೆ, ಪ್ರತಿ ತಂಡವು ತಮ್ಮ ಆಯ್ಕೆಯ ಆರು ತಂಡಗಳ ವಿರುದ್ಧ ತವರು ಮತ್ತು ವಿದೇಶ ಸರಣಿಯನ್ನು ಆಡುತ್ತದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್‌ಗಳ ಪಟ್ಟಿಯಲ್ಲಿ ಹೆಚ್ಚು ಅಂಕಗಳನ್ನು ಹೊಂದಿರುವ ತಂಡವು ಫೈನಲ್‌ಗೆ ಮುನ್ನಡೆಯುತ್ತದೆ. ಮೂರು ಹೊಸ ತಂಡಗಳ ಸೇರ್ಪಡೆಯೊಂದಿಗೆ, ನಿಯಮಗಳು ಬದಲಾಗಬಹುದು. ಆದಾಗ್ಯೂ, ಹೊಸ ಮೂರು ತಂಡಗಳ ಸೇರ್ಪಡೆಗೆ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಪಂದ್ಯಾವಳಿಯಲ್ಲಿ ಮೂರು ಸಣ್ಣ ತಂಡಗಳನ್ನು ಸೇರಿಸುವ ಐಸಿಸಿ ಈ ನಿರ್ಧಾರವು ಈ ದೇಶಗಳಲ್ಲಿ ಕ್ರಿಕೆಟ್ ಅಭಿವೃದ್ಧಿಗೆ ಪ್ರಯೋಜನಕಾರಿಯಾಗಲಿದೆ.

ICC Awards: ಐಸಿಸಿ ಪ್ರಶಸ್ತಿಗೆ ಬುಮ್ರಾ, ಸ್ಯಾಮ್ಸನ್ ನಡುವೆ ಪೈಪೋಟಿ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದ ತಂಡಗಳು

ಇಲ್ಲಿಯವರೆಗೆ ಮೂರು ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದಿವೆ. ನ್ಯೂಜಿಲೆಂಡ್ 2019-2021 ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದರೆ, ಆಸ್ಟ್ರೇಲಿಯಾ 2021-23 ಚಾಂಪಿಯನ್‌ಶಿಪ್ ಗೆದ್ದಿದೆ. ದಕ್ಷಿಣ ಆಫ್ರಿಕಾ 2023-25 ರ​​ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದಿದೆ. ಇನ್ನು ಭಾರತ ಎರಡೂ ಟೆಸ್ಟ್ ಚಾಂಪಿಯನ್‌ಶಿಪ್‌ಗಳಲ್ಲಿ ಫೈನಲ್ ತಲುಪಿದೆಯಾದರೂ ಚಾಂಪಿಯನ್‌ಶಿಪ್ ಗೆಲ್ಲಲು ಸಾಧ್ಯವಾಗಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version