Headlines

ರಿಲೀಸ್​​ಗೂ ಮೊದಲೇ ದೊಡ್ಡ ಲಾಭ ಕಂಡ ‘ಟಾಕ್ಸಿಕ್’; ‘ಧುರಂಧರ್ 2’ ಹಿಂದಿಕ್ಕಿದ ಯಶ್ ಚಿತ್ರ – Kannada News | Yash’s Toxic Music Rights Outsell Dhurandhar 2: Sandalwood Sets New Record

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ. ಇದರ ಜೊತೆಗೆ ದಕ್ಷಿಣ vs ಬಾಲಿವುಡ್, ಸ್ಯಾಂಡಲ್​​ವುಡ್​ vs ಬಾಲಿವುಡ್ ಎಂಬಿತ್ಯಾದಿ ಚರ್ಚೆಗಳು ಕೂಡ ನಡೆಯುತ್ತಿವೆ. ಹೀಗಿರುವಾಗಲೇ ಯಶ್ ಅವರ ‘ಟಾಕ್ಸಿಕ್’ ಸಿನಿಮಾ (Toxic Movie) ಮ್ಯೂಸಿಕ್ ‘ಧುರಂಧರ್ 2’ ಚಿತ್ರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟ ಆಗಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ತಂಡ ಒಂದು ದೊಡ್ಡ ಅಪ್​​​ಡೇಟ್ ಬಿಟ್ಟುಕೊಂಡಿದೆ….

Read More

ಮಂಗಳೂರಿಗೆ ಮತ್ತೊಂದು ಗುಡ್​​​ ನ್ಯೂಸ್​​ ನೀಡಿದ ಕೇಂದ್ರ: ಬರಲಿದೆ ಹೊಸ ಎಕ್ಸ್‌ಪ್ರೆಸ್ ರೈಲು, ಸಮಯ, ನಿಲ್ದಾಣಗಳ ಪಟ್ಟಿ ಇಲ್ಲಿದೆ – Kannada News | Amrit Bharat Express: Mangaluru to Nagercoil Weekly Train Service Details

ಮಂಗಳೂರು, ಜ.23: ಮಂಗಳೂರಿನ ಜನರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ ಕೇಂದ್ರ ಸರ್ಕಾರ, ನಾಗರಕೋಯಿಲ್ ಮತ್ತು ಮಂಗಳೂರು ನಡುವಿನ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು (Amrit Bharat Express) ಶೀಘ್ರದಲ್ಲೇ ಆರಂಭವಾಗಲಿದೆ. ಈ ಹೊಸ ರೈಲು ತಮಿಳುನಾಡಿನಿಂದ ಕೇರಳದ ಮೂಲಕ ಕರಾವಳಿ ಕರ್ನಾಟಕಕ್ಕೆ ಸಂಪರ್ಕಿಸಲಿದೆ. ಇದು ಪಶ್ಚಿಮ ಕರಾವಳಿ ರೈಲು ಸಂಪರ್ಕವನ್ನು ಬಲಪಡಿಸುತ್ತದೆ. ನಾಗರಕೋಯಿಲ್-ಮಂಗಳೂರು ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು ಕೈಗೆಟುಕುವ ದರದಲ್ಲಿ ದೂರು ಊರುಗಳನ್ನು ಪ್ರಯಾಣಿಸುವ ಅವಕಾಶವನ್ನು ನೀಡಲಿದೆ. ಇದು ಪ್ರವಾಸೋದ್ಯಮ, ಮೀನುಗಾರಿಕೆ, ಸಣ್ಣ ವ್ಯಾಪಾರ ಮತ್ತು…

Read More

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ ಪ್ರಕರಣ: ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದ ರಾಷ್ಟ್ರೀಯ ಮಹಿಳಾ ಆಯೋಗ – Kannada News | BJP Worker Disrobed by Police: NCW Orders Action, Seeks Report in 5 Days

ಹುಬ್ಬಳ್ಳಿ, ಜ.8: ಬಿಜೆಪಿ ಕಾರ್ಯಕರ್ತೆಯನ್ನ (BJP Worker) ಬಟ್ಟೆಬಿಚ್ಚಿ ಪೊಲೀಸರು ಥಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಈ ಬಗ್ಗೆ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಕೂಡ ಬರೆದಿದೆ. ಹುಬ್ಬಳ್ಳಿಯಲ್ಲಿ ಮಹಿಳಾ ಕಾರ್ಯಕರ್ತೆಯೊಬ್ಬರನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದಿರುವ ಆಕ್ಷೇಪಾರ್ಹ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ರೀಮತಿ…

Read More

ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಶೀರ್ಷಿಕೆ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್ ನೀನಾಸಂ – Kannada News | Sathish Ninasam talks about The Rise of Ashoka movie title

ಸತೀಶ್ ನೀನಾಸಂ ಅಭಿನಯಿಸಿದ ‘ದಿ ರೈಸ್ ಆಫ್ ಅಶೋಕ’ (The Rise of Ashoka) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾದ ಶೀರ್ಷಿಕೆ ಬಗ್ಗೆ ಕೆಲವರು ತಕರಾರು ತೆಗೆದಿದ್ದರು. ಕನ್ನಡದ ಸಿನಿಮಾಗೆ ಇಂಗ್ಲಿಷ್ ಶೀರ್ಷಿಕೆ ಯಾಕೆ ಎಂಬುದು ಪ್ರಶ್ನೆ. ಅದಕ್ಕೆ ‘ಟಿವಿ9’ ವಿಶೇಷ ಸಂದರ್ಶನದಲ್ಲಿ ಸತೀಶ್ ನೀನಾಸಂ (Sathish Ninasam) ಅವರು ಉತ್ತರ ನೀಡಿದ್ದಾರೆ. ‘ಅಶೋಕನ ಬೆಳವಣಿಗೆ ಅಂತ ಇಡೋಕೆ ಆಗಲ್ಲ. ಅಶೋಕ ಎದ್ದ ಅನ್ನೋಕೆ ಅಲ್ಲ. ದಿ ರೈಸ್ ಆಫ್ ಅಶೋಕ ಎಂದರೆ ಅದರಲ್ಲಿ ಒಂದು…

Read More

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು – Kannada News | Case against Toxic movie actor Yash for Birthday banner in Bengaluru

ರಾಕಿಂಗ್ ಸ್ಟಾರ್ ಯಶ್ (Yash) ಅವರು ಜನವರಿ 8ರಂದು ಹುಟ್ಟುಹಬ್ಬ ಆಚರಿಸಿಕೊಂಡರು. ಅವರ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಗಾಲ್ಫ್​​ ಕ್ಲಬ್​ ರಸ್ತೆ ಬಳಿಯಿರುವ ​ಮನೆ ಎದುರು ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಜಿಬಿಎ ಸಹಾಯಕ ಇಂಜಿನಿಯರ್​ ಪೂಜಾರಪ್ಪ ಅವರು ದೂರು ನೀಡಿದ್ದರು. ಕರ್ನಾಟಕ ತೆರೆದ ಸ್ಥಳಗಳ ವಿರೂಪಗೊಳಿಸುವಿಕೆ ಕಾಯ್ದೆಯಡಿ ಕೇಸ್​ ಹಾಕಲಾಗಿದೆ. ಅದರ ಅನ್ವಯ ಕಾಯ್ದೆ 1951 ಮತ್ತು 1981ರಡಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಯಶ್​ ಹೆಸರು ಉಲ್ಲೇಖಿಸಿ ಜಿಎಸ್​ ಕ್ರಿಯೇಷನ್ಸ್​ ಮತ್ತು ವೇಣು ಗ್ರೂಪ್ಸ್​ ವಿರುದ್ಧ…

Read More