ಗೋಲ್ಡ್ ಇಟ್ಟಿಲ್ಲ, ಲೋನ್ ಪಡೆದಿಲ್ಲ: ಮತ್ತೊಂದು ಕೆನರಾ ಬ್ಯಾಂಕಿನಿಂದ ಮಹಾ ಮೋಸ
ಮೈಸೂರು (ಡಿಸೆಂಬರ್ .29) : ಬ್ಯಾಂಕ್‌ನಲ್ಲಿ ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರಿಗೆ ವಂಚಿಸುತ್ತಿದ್ದ ಪ್ರಕರಣವೊಂದು ಮೈಸೂರಿನ ಕೆನರಾ ಬ್ಯಾಂಕ್‌ನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕ್‌ನ ಅಧಿಕೃತ ಅಕ್ಕಸಾಲಿಗ (Appraiser) ಅಶ್ವಿನ್ ಆಚಾರ್ ಎಂಬುವವರ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸ್ನ ಕೆನರಾ ಬ್ಯಾಂಕ್‌ನಲ್ಲಿ ಇಂತದ್ದೇ ಘಟನೆ ನಡೆದಿದೆ. ಹೌದು… ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸ್ನ ಕೆನರಾ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ ಮ್ಯಾನೇಂಜರ್…