ರಷ್ಯಾದ ಬಳಿ ವಾಣಿಜ್ಯ ಹಡಗಿನ ಮೇಲೆ ದಾಳಿ; ಭಾರತೀಯ ನಾವಿಕ ಸಾವಿಗೆ ಭಾರತ ಖಂಡನೆ – Kannada News | Indian sailor killed in strike on commercial vessel in Black Sea near Russia MEA condemns attack
ನವದೆಹಲಿ, ಜುಲೈ 24: ರಷ್ಯಾ ಮತ್ತು ಉಕ್ರೇನ್ (Russia-Ukraine War) ನಡುವೆ ನಿರಂತರವಾಗಿ ನಡೆಯುತ್ತಿರುವ ಸಂಘರ್ಷದ ನಡುವೆಯೇ ರಷ್ಯಾಕ್ಕೆ ಹತ್ತಿರವಿರುವ ಕಪ್ಪು ಸಮುದ್ರದ ಜಲಪ್ರದೇಶದಲ್ಲಿ ವಾಣಿಜ್ಯ ಹಡಗೊಂದರ ಮೇಲೆ ನಡೆದ ದಾಳಿಯಲ್ಲಿ ಭಾರತೀಯ ನಾವಿಕರೊಬ್ಬರು ದುರಂತವಾಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆ ಹಡಗಿನಲ್ಲಿದ್ದ ಉಳಿದ ಇಬ್ಬರು ಭಾರತೀಯ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ದೃಢಪಡಿಸಿದೆ. ಹಾಗೇ, ಭಾರತೀಯ ನಾವಿಕನ ಸಾವಿಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಮಾರ್ಷಲ್ ಐಲ್ಯಾಂಡ್ಸ್‌ನ ಧ್ವಜ ಹೊಂದಿದ್ದ ‘ಎಮ್‌ವಿ ಒಮೊರ್ಫಿ’…