IPL 2026: ಇದು RCB vs SRH ಪಂದ್ಯವಲ್ಲ.. ಭಾರತ vs ಪಾಕ್ ನಡುವಿನ ಪಂದ್ಯ ಎಂದ ಸೆಹ್ವಾಗ್
ಐಪಿಎಲ್ 2026 ಇದೇ ಮಾರ್ಚ್ 28 ರಿಂದ ಪ್ರಾರಂಭವಾಗಲಿದೆ. ಈ ಆವೃತ್ತಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಅಭಿಮಾನಿಗಳು ಕೂಡ ಕಾದು ಕುಳಿತಿದ್ದಾರೆ. ಇದೆಲ್ಲದರ ನಡುವೆ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಈ ಪಂದ್ಯದ ಬಗ್ಗೆ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಐಪಿಎಲ್ನ ಉದ್ಘಾಟನಾ ಪಂದ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ…