ಪೂರೈಕೆ ವ್ಯತ್ಯಯದ ನಡುವೆ LPG ಸಿಲಿಂಡರ್ಗೆ ಕಳ್ಳರ ಕಾಟ: ಮನೆಯ ಕಾಂಪೌಂಡ್ಗೆ ನುಗ್ಗಿ ಕದ್ದು ಎಸ್ಕೇಪ್!
ರಾಮನಗರ, ಮಾರ್ಚ್ 13: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಹಡಗುಗಳು ಬಾರದೆ ದೇಶದ ಬಹುತೇಕ ರಾಜ್ಯಗಳಲ್ಲಿ ಎಲ್ಪಿಜಿ ವಾಣಿಜ್ಯ ಸಿಲಿಂಡರ್ಗಳ ಅಭಾವ ತಲೆದೋರಿದೆ. ಅದರಲ್ಲಿಯೂ ಕರ್ನಾಟಕದಲ್ಲಿ ಸಮಸ್ಯೆ ತೀರಾ ಹದಗೆಟ್ಟಿದ್ದು, ಸಿಲಿಂಡರ್ಗಳ ಅಲಭ್ಯತೆಯ ಹಿನ್ನೆಲೆ ಬಹುತೇಕ ಹೋಟೆಲ್ಗಳು ಭಾಗಶಃ ಬಂದ್ ಆಗಿವೆ. ಇಲ್ಲವೇ ಗಣನೀಯವಾಗಿ ಮೆನು ಕಡಿತಗೊಳಿಸಿ ಗ್ರಾಹಕರಿಗೆ ಸೇವೆ ನೀಡುತ್ತಿವೆ. ಪಿಜಿಗಳು ಮತ್ತು ಸರಕಾರಿ ಶಾಲೆಗಳಲ್ಲಿ ಊಟ ತಯಾರಿಕೆಗೂ ಸಂಕಷ್ಟ ಬಂದೊದಗಿದ್ದು, ಹೆಚ್ಚಿನ ಹಣ ಕೊಡುತ್ತೇವೆ ಎಂದರೂ ಸಿಲಿಂಡರ್ಗಳು ಸಿಗುತ್ತಿಲ್ಲ ಎಂದು ಆಹಾರೋದ್ಯಮಿಗಳು ಅಲವತ್ತುಕೊಳ್ಳುತ್ತಿದ್ದಾರೆ. ಇದೇ ಸ್ಥಿತಿಯನ್ನು…