WPL ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಡೆಲ್ಲಿ ಕ್ಯಾಪಿಟಲ್ಸ್
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಜೆಮಿಮಾ ರೊಡ್ರಿಗಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 168 ರನ್ ಕಲೆಹಾಕಿತು. ಈ ಗುರಿಯನ್ನು…