ಬೆಂಗಳೂರಿನಲ್ಲಿ ಸೈನ್ಸ್ ಸಿಟಿ, ಎಲ್ಲಾ ಜಿಲ್ಲೆಗಳಲ್ಲಿ ಸೈನ್ಸ್ ಸೆಂಟರ್, 11 ಜಿಲ್ಲೆಗಳಲ್ಲಿ ಪ್ಲಾನಿಟೇರಿಯಂ ಸ್ಥಾಪನೆ: ಸಿದ್ದರಾಮಯ್ಯ
ಬೆಂಗಳೂರು, ಮಾರ್ಚ್ 6: ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ (Bio Technology), ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತೇಜಿಸಲು ಬಜೆಟ್ನಲ್ಲಿ ಸಿದ್ದರಾಮಯ್ಯ (Siddaramaiah) ಹಲವು ಕ್ರಮಗಳನ್ನು ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಹೊಸ ಸೈನ್ಸ್ ಸಿಟಿ ಸ್ಥಾಪಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ. ಇಂದು ನಾಲ್ಕೂವರೆ ಲಕ್ಷ ಕೋಟಿ ರೂ ಮೊತ್ತದ ದಾಖಲೆಯ ಬಜೆಟ್ (Karnataka Budget 2026) ಮಂಡಿಸಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಆದಿನಾರಾಯಣ ಹೊಸಹಳ್ಳಿಯಲ್ಲಿ ‘ವಿಜ್ಞಾನ ನಗರ’ (Science City) ಸ್ಥಾಪಿಸಲಾಗುವುದು ಎಂದಿದ್ದಾರೆ. ಈ ಸೈನ್ಸ್ ಸಿಟಿಯನ್ನು 233 ಕೋಟಿ…