ಮಹಾರಾಷ್ಟ್ರದ ಮುಂದಿನ ಉಪಮುಖ್ಯಮಂತ್ರಿಯಾಗುತ್ತಾರಾ ಸುನೇತ್ರಾ ಪವಾರ್? ಶುರುವಾಯ್ತು ಬಿಸಿ-ಬಿಸಿ ಚರ್ಚೆ – Kannada News | Ajit Pawar Wife Sunetra Pawar for Deputy CM praful Patel and Bhujbal meet adds to speculation
ಪುಣೆ, ಜನವರಿ 29: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ವಿಮಾನ ಅಪಘಾತದಲ್ಲಿ ನಿಧನ ಹೊಂದಿದ ನಂತರ ಆ ಸ್ಥಾನಕ್ಕೆ ಯಾರ ನೇಮಕವಾಗುತ್ತದೆ ಎಂಬ ಚರ್ಚೆಗಳು ಶುರುವಾಗಿವೆ. ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಎನ್‌ಸಿಪಿಯ ನಾಯಕತ್ವ ವಹಿಸಿಕೊಳ್ಳುವುದರ ಜೊತೆಗೆ ಉಪಮುಖ್ಯಮಂತ್ರಿ ಹುದ್ದೆಯನ್ನೂ ಅಲಂಕರಿಸಬೇಕೆಂದು ಎನ್‌ಸಿಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ. ಮೂಲಗಳ ಪ್ರಕಾರ, ಸುನೇತ್ರಾ ಪವಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ಪ್ರಸ್ತಾಪವನ್ನು ಮಾಡಲಾಗುವುದು. ಸುನೇತ್ರಾ ಪವಾರ್ ಅವರು ಅಜಿತ್ ಪವಾರ್ ಅವರ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಬಹುದು….