Headlines

ಒಂದೇ ಸಮುದಾಯಕ್ಕೆ ಸೀಮಿತಾವಾಯ್ತಾ ಒಬಿಸಿ ಅನುದಾನ? ಕುರುಬ ಸಮುದಾಯದ 89 ಸಂಸ್ಥೆಗಳಿಗೆ ಬಂಪರ್ – Kannada News

ಬೆಂಗಳೂರು, (ಜೂನ್ 11): ಒಂದು ಸರ್ಕಾರ ಅಧಿಕಾರದಿಂದ ನಿರ್ಗಮಿಸುವ ಅಥವಾ ನಾಯಕತ್ವ ಬದಲಾವಣೆಯಾಗುವ ಸಂಕ್ರಮಣ ಕಾಲದಲ್ಲಿ ಅತ್ಯಂತ ತರಾತುರಿಯಲ್ಲಿ ಕೈಗೊಳ್ಳುವ ನಿರ್ಧಾರಗಳು ಯಾವಾಗಲೂ ಅನುಮಾನದ ಕಣ್ಣೋಟಕ್ಕೆ ಗುರಿಯಾಗುತ್ತವೆ. ಹೌದು..ಹಿಂದುಳಿದ ವರ್ಗಗಳ ಅನುದಾನ (Karnataka Backward Classes fund) ಹಂಚಿಕೆಯಲ್ಲೂ ಬೇಧ ಭಾವ ತಾರತಮ್ಯ ಎಸಗಿದ ಮತ್ತೊಂದು ಮುಖ ಹೊರ ಬಿದ್ದಿದೆ‌. ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಪ್ರಮಾಣವಚನಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗ, ಆರ್ಥಿಕ ಇಲಾಖೆಯ ಮೂಲಕ 155 ವಿವಿಧ ಸಂಸ್ಥೆಗಳಿಗೆ 71.85…

Read More

ಗಾಂಧಿ ಗ್ರಾಮ ಪುರಸ್ಕೃತ ಪಂಚಾಯತ್​​ ವ್ಯಾಪ್ತಿಯಲ್ಲಿಲ್ಲ ಕನಿಷ್ಠ ಮೂಲಸೌಕರ್ಯ: ಹನಿ ನೀರಿಗೂ ಜನರ ಪರದಾಟ! – Kannada News | Bidar: Gandhi Grama Awarded Jambagi Lacks Basic Infrastructure

ನೀರಿಗಾಗಿ ಮಹಿಳೆಯರ ಪರದಾಟImage Credit source: Tv9 Kannada ಬೀದರ್​​, ಏಪ್ರಿಲ್​​ 16: ತೆಲಂಗಾಣ ರಾಜ್ಯದ ಜೊತೆ ಗಡಿ ಹಂಚಿಕೊಂಡಿರುವ ಬೀದರ್ ಜಿಲ್ಲೆಯ ಔರಾದಾ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್​​ 2025ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ. ಹೀಗಿದ್ದರೂ ಈ ಪಂಚಾಯತ್​​ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಎಂಬುದು ಮಾತ್ರ ಇನ್ನೂ ಮರೀಚಿಕೆಯಾಗಿಯೇ ಉಳಿದಿದೆ. ಕುಡಿಯುವ ನೀರಿಗೂ ಜನರು ಪರದಾಡಬೇಕಾದ ಸ್ಥಿತಿ ಇದ್ದು, ಸ್ವಚ್ಛತೆ ಎಂಬುದಂತೂ ಬಲು ದೂರದ ಮಾತು. ಜಂಬಗಿ ಸೇರಿದಂತೆ ಐದು ಗ್ರಾಮಗಳು ಈ ಪಂಚಾಯತ್​​…

Read More

PWD ಕಚೇರಿಯಲ್ಲಿ ಮಳೆಗೆ ಮಹತ್ವದ ದಾಖಲೆಗಳು ನೀರುಪಾಲು! ಹಪ್ಪಳದಂತೆ ಫೈಲ್‌ಗಳನ್ನು ಒಣಗಿಸುತ್ತಿರುವ ಸಿಬ್ಬಂದಿ – Kannada News | Major Records Damaged as Rainwater Floods PWD Office in Bengaluru; Files Dried Like Papads

PWD ಕಚೇರಿಯಲ್ಲಿ ಮಳೆಗೆ ಮಹತ್ವದ ದಾಖಲೆಗಳು ನೀರುಪಾಲು! ಬೆಂಗಳೂರು, ಮೇ 10: ಸರ್ಕಾರಿ ಕಚೇರಿಗಳಲ್ಲಿನ ಕಡತಗಳ ಸಂರಕ್ಷಣೆ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದ್ದರೂ, ಬೆಂಗಳೂರಿನ (Bengaluru) ಕೆ.ಆರ್. ಸರ್ಕಲ್‌ನಲ್ಲಿರುವ ಲೋಕೋಪಯೋಗಿ ಇಲಾಖೆ (PWD) ಕಚೇರಿಯಲ್ಲಿ ಅಧಿಕಾರಿಗಳ ಭಾರೀ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಮಳೆ ನೀರಿನಿಂದಾಗಿ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವ್ಯವಹಾರಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ನೀರು ಪಾಲಾಗಿವೆ. ಮುಖ್ಯಾಂಶಗಳು ಬೆಂಗಳೂರಿನ ಪಿಡಬ್ಲ್ಯೂಡಿ ಕಚೇರಿಗೆ ಮಳೆ ನೀರು ನುಗ್ಗಿ ಮಹತ್ವದ ದಾಖಲೆಗಳು ಹಾನಿ. ವಿಶೇಷ ಭೂಸ್ವಾಧೀನಾಧಿಕಾರಿ…

Read More

ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಹಲವು ಪ್ರಯಾಣಿಕರ ಸ್ಥಿತಿ ಗಂಭೀರ

ಕಾರವಾರ, (ಏಪ್ರಿಲ್ 03): ಎರಡು ಬಸ್​​ಗಳ ನಡುವೆ ಭೀಕರ ಅಪಘಾತ (Two Bus Accident) ಸಂಭವಿಸಿದ್ದು, ಬಸ್​​​ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆ ಶಿರಸಿ (sirsi) ತಾಲೂಕಿನ ಕೊಳಗಿಬೀಸ್ ಬಳಿ ನಡೆದಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್ಆರ್​ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಸರ್ಕಾರಿ ಬಸ್, ಖಾಸಗಿ ಬಸ್​ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಇನ್ನು ಎರಡು ಬಸ್​​ನಲ್ಲಿ…

Read More

‘ಟಾಕ್ಸಿಕ್’ ಮತ್ತೊಂದು ಪವರ್​ಫುಲ್ ಪಾತ್ರದ ಪರಿಚಯ: ಯಾರಿದು ಬೀರ? – Kannada News | Balaji Manohar as BHEERA in Yash starrer Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಟೀಸರ್​​ ತುಂಬೆಲ್ಲ ಯಶ್ ಆವರಿಸಿಕೊಂಡಿದ್ದಾರೆ. ಯಶ್ ಅವರ ಎರಡು ಲುಕ್​​ಗಳ ಸಖತ್ ವೈರಲ್ ಆಗಿವೆ. ‘ಟಾಕ್ಸಿಕ್’ ಸಿನಿಮಾನಲ್ಲಿ ಯಶ್ ಜೊತೆಗೆ ಹಲವು ನಟಿಯರು ನಟಿಸಿದ್ದು, ಟೀಸರ್​ ಬಿಡುಗಡೆಗೆ ಮುಂಚೆಯೇ ನಟಿಯರ ಲುಕ್​​ಗಳನ್ನು ಅವರ ಪಾತ್ರದ ಕಿರು ಪರಿಚಯವನ್ನು ಮಾಡಿಕೊಡಲಾಗಿತ್ತು. ಇದೀಗ ಸಿನಿಮಾದ ಇತರೆ ಕೆಲವು ಪ್ರಮುಖ ಪಾತ್ರಗಳ ಕಿರು ಪರಿಚಯ ಮಾಡಿಕೊಡುತ್ತಿದೆ ಚಿತ್ರತಂಡ. ಇದೀಗ ‘ಬೀರ’ ಹೆಸರಿನ ಪಾತ್ರದ ಲುಕ್ ಬಿಡುಗಡೆ ಮಾಡಲಾಗಿದೆ. ಕನ್ನಡ…

Read More

Daily Devotional: ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ? – Kannada News | What Happens when you envy someone’s success

ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಾಮಾನ್ಯವಾಗಿ, ಒಬ್ಬ ವ್ಯಕ್ತಿಯ ಪ್ರಗತಿಯು ಆತನ ಪರಿಶ್ರಮ, ಮನಸ್ಸತ್ವ ಮತ್ತು ಸಾಧನೆಯ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ, ಮತ್ತೊಬ್ಬರ ಅಭಿವೃದ್ಧಿ, ಕೀರ್ತಿ, ಅಥವಾ ಹೆಸರನ್ನು ಕಂಡಾಗ ಅಸೂಯೆ ಪಡುವ ಭಾವನೆ ಹೆಚ್ಚಾಗುತ್ತಿದೆ. ಮತ್ತೊಬ್ಬರ ಏಳಿಗೆ ನೋಡಿ ಅಸೂಯೆ ಪಟ್ಟರೆ ನಮ್ಮ ಸಮಯ ವ್ಯರ್ಥವಾಗುತ್ತದೆ, ದೇಹದ ಧನಾತ್ಮಕ ಶಕ್ತಿಗಳು ಹೊರಟುಹೋಗುತ್ತವೆ ಮತ್ತು ದೈವಬಲ ಕುಂದುತ್ತದೆ. ಇಂತಹ…

Read More

ಭಾರತದ ಷೇರುಪೇಟೆ ಭರ್ಜರಿ ಕುಸಿತ; 8 ಲಕ್ಷ ಕೋಟಿ ರೂ ನಷ್ಟ; ಶೇ 80 ಷೇರುಗಳಿಗೆ ಹಿನ್ನಡೆ – Kannada News | Stock market nifty, sensex down by 2pc, investors face 8 trillion Rs loss

ನವದೆಹಲಿ, ಮಾರ್ಚ್ 4: ಭಾರತದ ಈಕ್ವಿಟಿ ಮಾರುಕಟ್ಟೆಯಲ್ಲಿ (Stock Market) ಕರಡಿ ಕುಣಿತ ಮುಂದುವರಿದಿದೆ. ಇಂದು ಬಿಎಸ್​ಇ ಮತ್ತು ಎನ್​ಎಸ್​ಇಯ ಹೆಚ್ಚಿನ ಸೂಚ್ಯಂಕಗಳು ಕೆಂಪು ಬಣ್ಣಕ್ಕೆ ತಿರುಗಿವೆ. ನಿಫ್ಟಿ, ಸೆನ್ಸೆಕ್ಸ್ ಶೇ. 2ರವರೆಗೂ ಕುಸಿತ ಕಂಡಿವೆ. ಹೂಡಿಕೆದಾರರಿಗೆ ಬರೋಬ್ಬರಿ 8 ಲಕ್ಷ ಕೋಟಿ ರೂ ನಷ್ಟ ಎದುರಾಗಿದೆ. ಇರಾನ್ ಯುದ್ಧ ನಡೆಯುತ್ತಿರುವುದರಿಂದ ಷೇರು ಮಾರುಕಟ್ಟೆ ಕುಸಿತ ಅನಿರೀಕ್ಷಿತವೇನಲ್ಲ. ಭಾರತದಲ್ಲಿ ಮಾತ್ರವಲ್ಲ, ವಿಶ್ವದ ಎಲ್ಲಾ ಷೇರು ಮಾರುಕಟ್ಟೆಗಳು ಹಿನ್ನಡೆ ಕಾಣುತ್ತಿವೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಸೂಚ್ಯಂಕ 1,523…

Read More

ಪಾಂಡ್ಯ ಕ್ಯಾಪ್ಟನ್ಸಿಗೆ ಕೋಕ್? ಸತತ ಸೋಲಿನ ಬಳಿಕ ತಲೆದಂಡದ ಎಚ್ಚರಿಕೆ – Kannada News | Hardik Pandya Captaincy Crisis: MI’s IPL Woes, Is Sacking Looming

ಐದು ಬಾರಿ ಚಾಂಪಿಯನ್ಸ್ ಪಟ್ಟಕ್ಕೇರಿದ ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಕಳೆದ ವರ್ಷವೂ ತಂಡದ ಸ್ಥಿತಿ ಇದೇ ರೀತಿ ಇತ್ತು. ಕೆಕೆಆರ್​ ವಿರುದ್ಧದ ಮೊದಲ ಪಂದ್ಯ ಗೆದ್ದಿದ್ದು ಬಿಟ್ಟರೆ, ಉಳಿದ ನಾಲ್ಕಕ್ಕೆ ನಾಲ್ಕು ಪಂದ್ಯವನ್ನು ಪಾಂಡ್ಯ ನೇತೃತ್ವದ ಮುಂಬೈ ಪಡೆ ಸೋತಿದೆ. ಈ ಬೆನ್ನಲ್ಲೇ ದೊಡ್ಡ ತಲೆದಂಡದ ಎಚ್ಚರಿಕೆ ಬಂದಿದೆ. ಹಾರ್ದಿಕ್ ಪಾಂಡ್ಯ ಕಳಪೆ ಆಟ ಹಾಗೂ ಕ್ಯಾಪ್ಟನ್ಸಿ ಕಾರಣದಿಂದ ಅವರನ್ನು ಸ್ಥಾನದಿಂದ ಕೆಳಕ್ಕೆ ಇಳಿಸಲಾಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ….

Read More

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಮತ್ತೆ ಮುಂದಕ್ಕೆ?

‘ಆರ್​​ಆರ್​​ಆರ್’ ಸಿನಿಮಾದ ಬಳಿಕ ರಾಮ್ ಚರಣ್ (Ram Charan) ನಟನೆಯ ಸತತ ಎರಡು ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಆಗಿವೆ. ‘ಗೇಮ್ ಚೇಂಜರ್’ ಮತ್ತು ‘ಆಚಾರ್ಯ’ ಎರಡೂ ಸಿನಿಮಾಗಳು ಹೀನಾಯ ಸೋಲು ಕಂಡಿವೆ. ಇದೀಗ ರಾಮ್ ಚರಣ್ ಅವರು ಗೆಲುವಿನ ಹುಡುಕಾಟದಲ್ಲಿದ್ದಾರೆ. ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಸಿನಿಮಾ ಬಹುತೇಕ ಮುಗಿಸಿದ್ದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 30 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ನಿರ್ಮಾಪಕರೊಬ್ಬರು ಸಿನಿಮಾದ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟಿರುವ ಬಗ್ಗೆ ಸುಳಿವು…

Read More

ಇಂಧನ ಕೊರತೆ ವದಂತಿ: ಕೊಪ್ಫಳದಲ್ಲಿ ಪೆಟ್ರೋಲ್​​ ತುಂಬಿಸಲು ಬ್ಯಾರಲ್​​ ತಂದ ಜನ!

ಕೊಪ್ಪಳ, ಮಾರ್ಚ್​​ 29: ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯ ವದಂತಿಗಳು ಹಬ್ಬಿದ್ದು, ಇದು ಜನರಲ್ಲಿ ಆತಂಕ ಸೃಷ್ಟಿಸಿದೆ. ಪೆಟ್ರೋಲ್ ಬಂಕ್‌ಗಳಲ್ಲಿ ಬ್ಯಾರಲ್, ಬಾಟಲ್ ಹಾಗೂ ಕ್ಯಾನ್‌ಗಳಲ್ಲಿ ಇಂಧನ ಸಂಗ್ರಹಿಸಲು ಜನರು ಮುಗಿಬಿದ್ದಿದ್ದಾರೆ. ಬಂಕ್ ಸಿಬ್ಬಂದಿ ಇಂಧನ ಲಭ್ಯತೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಮನವಿ ಮಾಡುತ್ತಿದ್ದರೂ, ಬೆಲೆ ಏರಿಕೆ ಅಥವಾ ಪೂರೈಕೆ ವ್ಯತ್ಯಯದ ಭೀತಿಯಿಂದ ಜನರು ಇದಕ್ಕೆ ಕಿವಿಗೊಡುತ್ತಿಲ್ಲ.ಮುಂದೆ ಸಮಸ್ಯೆ ಆಗಬಹುದು ಅಥವಾ ಬೆಲೆ ಹೆಚ್ಚಳ ಆಗಬಹುದು ಎಂಬ ಭೀತಿಯಿಂದ ಜನರು ಇದನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ….

Read More