ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ: ಕೂಡಲೇ ಸಚಿವರನ್ನ ಕರೆದೊಯ್ದ ಸಿಬ್ಬಂದಿ – Kannada News | Fire Breaks Out at Sindhanur Mass Wedding Due to Short Circuit
ರಾಯಚೂರು, ಮೇ 03: ಜಿಲ್ಲೆಯ ಸಿಂಧನೂರಿನಲ್ಲಿ 151 ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವಘಡವೊಂದು ಸಂಭವಿಸಿದೆ. ವೇದಿಕೆ ಮೇಲಿಂದ ಡಿಸಿಎಂ ಡಿಕೆ ಶಿವಕುಮಾರ್ ತೆರಳಿದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಇದೇ ವೇಳೆ ಸಚಿವ ಈಶ್ವರ ಖಂಡ್ರೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಸಿಬ್ಬಂದಿ ಕೂಡಲೇ ಅವರನ್ನು ಪಕ್ಕಕ್ಕೆ ಕರೆದುಕೊಂಡ ಹೋದರು. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸುತ್ತಿದ್ದಂತೆ ಕೆಲಕಾಲ ಆತಂಕ ಉಂಟಾಗಿತ್ತು. ಹೊಗೆ ಹೆಚ್ಚಾದ ಹಿನ್ನೆಲೆ ಸ್ಥಳೀಯರು ಕೂಡ ಗಾಬರಿಗೊಂಡಿದ್ದರು. ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ…