U19 World Cup: 6ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾ
ಜಿಂಬಾಬ್ವೆಯ ಹರಾರೆ ಮೈದಾನದಲ್ಲಿ ಯುವ ಭಾರತ ತಂಡ ಇತಿಹಾಸ ಸೃಷ್ಟಿಸಿದೆ. ಅಂಡರ್ 19 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಬರೋಬ್ಬರಿ 100 ರನ್ಗಳಿಂದ ಸೋಲಿಸಿತು. ಇದರೊಂದಿಗೆ, ಭಾರತ ಆರನೇ ಬಾರಿಗೆ ಅಂಡರ್ 19 ವಿಶ್ವಕಪ್ ಎತ್ತಿಹಿಡಿಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 411 ರನ್ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 311 ರನ್ಗಳಿಗೆ ಆಲೌಟ್ ಆಗುವ ಮೂಲಕ 100 ರನ್ಗಳಿಂದ…