ಕಾಕನೂರು SBI ದರೋಡೆ ಕೇಸ್: ಮತ್ತಿಬ್ಬರು ಆರೋಪಿಗಳು ಲಾಕ್; ಹಣ, ಬಂಗಾರ ಜಪ್ತಿ – Kannada News | Kakanur SBI Robbery: Two More Arrested; Police Seize Gold and Cash
ಬಾಗಲಕೋಟೆ, ಡಿಸೆಂಬರ್ 25: ಕಾಕನೂರು ಗ್ರಾಮದಲ್ಲಿ ಎಸ್ಬಿಐ ದರೋಡೆ ಪ್ರಕರಣ ಸಂಬಂಧ ಇಬ್ಬರು ಖತರ್ನಾಕ್ ಕಳ್ಳರನ್ನು ಬಾದಾಮಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಚಿಕಲಿ ತಾಲೂಕಿನ ನಯಗಾಂವ್ ನಿವಾಸಿಗಳಾದ ಅಕ್ಷಯ್ ಅಂಬೋರೆ ಮತ್ತು ಕುನಾಲ್ ಚವ್ಹಾಣ್ ಬಂಧಿತ ಆರೋಪಿಗಳು. ಬಂಧಿತರಿಂದ ಹಣ, ಚಿನ್ನಾಭರಣ, ವಾಹನ ಸೇರಿ ಹಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಘಟನೆ ಏನು? 2025ರ ಸೆಪ್ಟೆಂಬರ್ 2ರಂದು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕಾಕನೂರಿನ ಎಸ್ಬಿಐ ಲಾಕರ್ ಒಡೆದು ಚಿನ್ನಾಭರಣ ಮತ್ತು ಹಣ ದರೋಡೆ ಮಾಡಲಾಗಿತ್ತು….