Karnataka Weather Forecast: ರಾಜ್ಯದೆಲ್ಲೆಡೆ ವರುಣಾರ್ಭಟ; ಕಡಲತೀರದ ಜಿಲ್ಲೆಗಳಿಗೆ ಮುಂದಿನ ಮೂರು ದಿನ ಆರೆಂಜ್ ಅಲರ್ಟ್! – Kannada News | Karnataka Weather Forecast: Heavy Rain Alert, Orange Alert in Uttara Kannada Until July 2
ಬೆಂಗಳೂರು, ಜೂನ್ 30: ಮಲೆನಾಡು, ಕರಾವಳಿ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಹಳ್ಳಗಳಂತೆ ತುಂಬಿ ಹರಿಯುತ್ತಿವೆ. ಉತ್ತರ ಕನ್ನಡದಲ್ಲಂತೂ ಭಾರೀ ಮಳೆಗೆ (Weather) ಗೋಕರ್ಣ ದೇವಾಲಯದ ಗರ್ಭಗುಡಿಗೂ ನೀರು ನುಗ್ಗಿತ್ತು. ಇಂದೂ ಸಹ ರಾಜ್ಯದ ಹಲವೆಡೆ ಮಳೆಯಾಗಲಿದ್ದು, ಕರಾವಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಜನಸಾಮಾನ್ಯರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಉತ್ತರ ಕನ್ನಡದಲ್ಲಿ ಭಾರೀ ಮಳೆ ಕರಾವಳಿ ತೀರದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಹಾಗೂ…