‘ಮೋದಿ ನಿರ್ಧರಿಸಿದರೆ ಪಾಕ್ ಕ್ರಿಕೆಟ್ ದಿವಾಳಿ ಆಗುತ್ತೆ’; ಮಾಜಿ ನಾಯಕ ರಮೀಜ್ ರಾಜಾ – Kannada News | PCB Financial Crisis: Ramiz Raja Warns India’s Power Amid T20 WC Stance
ಟೀಂ ಇಂಡಿಯಾ ವಿರುದ್ಧ ಟಿ20 ವಿಶ್ವಕಪ್ ಪಂದ್ಯವನ್ನಾಡುವುದಿಲ್ಲ ಎಂದಿರುವ ಪಾಕಿಸ್ತಾನಕ್ಕೆ ಮುಂದೆ ಎದುರಾಗಲಿರುವ ಸಮಸ್ಯೆಗಳ ಬಗ್ಗೆ ಅರಿವಿಲ್ಲ ಎಂದೆನಿಸುತ್ತದೆ. ಏಕೆಂದರೆ ಈಗಾಗಲೇ ನೂರಾರು ಸಮಸ್ಯೆಗಳಿಂದ ಬಳಲುತ್ತಿರುವ ಪಾಕ್ ಕ್ರಿಕೆಟ್ ಮಂಡಳಿ ಇದೀಗ ಐಸಿಸಿ ಈವೆಂಟ್ನಿಂದ ಬರುತ್ತಿದ್ದ ನೂರಾರು ಕೋಟಿ ರೂಗಳ ಆದಾಯವನ್ನು ಕಳೆದುಕೊಂಡಿದೆ. ಇದರ ಜೊತೆಗೆ ಐಸಿಸಿಯ ಕೋಪಕ್ಕೆ ಗುರಿಯಾಗಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಕಷ್ಟಕ್ಕೊಳಗಾಗುವುದಂತೂ ಖಚಿತ. ಇದೆಲ್ಲದರ ನಡುವೆ ಪಾಕಿಸ್ತಾನದ ಮಾಜಿ ನಾಯಕ ಮತ್ತು ಮಾಜಿ ಪಿಸಿಬಿ ಮುಖ್ಯಸ್ಥ ರಮೀಜ್ ರಾಜಾ…