Headlines

ಇನ್ಸ್ಪೆಕ್ಟರ್ ಸಂದೇಶ್​ ಕಾಮಕಾಂಡ ಕೇಸ್​​ಗೆ ಬಿಗ್ ಟ್ವಿಸ್ಟ್: ಪೊಲೀಸ್ ವರದಿಯಲ್ಲಿ ಸ್ಫೋಟಕ ಸತ್ಯ ಬಯಲು

ಮಂಗಳೂರು, ಮಾರ್ಚ್​ 21: ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ (Police inspector Sandesh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಇನ್ಸ್‌ಪೆಕ್ಟರ್‌ ಸಂದೇಶ್ ವಿರುದ್ಧ ಮಾಡಿರುವ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದೆ ಎಂದು ಹೇಳಲಾಗುತ್ತಿದೆ. ಮಾಧ್ಯಮಗಳ ಮುಂದೆ ಬಂದಿದ್ದ ಆ ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಮಹಿಳೆಯರ ಆರೋಪ ಸುಳ್ಳು ಹಾಗೂ ಪ್ರೇರಿತ ಎಂಬುದು ಸಾಬೀತಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್…

Read More

IND-W vs SL-W: ಶತಕ ವಂಚಿತರಾದರೂ ತಮ್ಮದೇ ಹಳೆಯ ದಾಖಲೆ ಮುರಿದ ಸ್ಮೃತಿ- ಶಫಾಲಿ

ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್​ಗಳಲ್ಲಿ ದಾಖಲೆಯ 221 ರನ್ ಕಲೆಹಾಕಿತು. ಇದು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಟೀಂ ಇಂಡಿಯಾ ಕಲೆಹಾಕಿದ ಅತ್ಯಧಿಕ ಮೊತ್ತ ಎಂಬ ದಾಖಲೆಯನ್ನು ಬರೆಯಿತು. ಟೀಂ ಇಂಡಿಯಾದ ಈ ಸಾಧನೆಗೆ ಕಾರಣವಾಗಿದ್ದು, ತಂಡದ ಆರಂಭಿಕ ಜೋಡಿ. ಈ ಪಂದ್ಯದಲ್ಲಿ ಆರಂಭದಿಂದಲೂ ಅಬ್ಬರಿಸಿದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಮೊದಲ ವಿಕೆಟ್​ಗೆ ದಾಖಲೆಯ 162 ರನ್​ಗಳ…

Read More

ಥಾಣೆಯ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ; ಶಿವಸೇನಾ ಕಾರ್ಪೊರೇಟರ್ ಬಂಧನ – Kannada News | Maharashtra Shiv Sena corporator Ramesh Mhatre arrested for attacking doctors at Thane hospital

ಥಾಣೆ, ಜುಲೈ 8: ಕಲ್ಯಾಣ್-ಡೊಂಬಿವ್ಲಿ ಮುನ್ಸಿಪಲ್ ಕಾರ್ಪೊರೇಷನ್ (KDMC) ವ್ಯಾಪ್ತಿಯ ಶಾಸ್ತ್ರಿನಗರ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಿವಸೇನಾ ಕಾರ್ಪೊರೇಟರ್ ರಮೇಶ್ ಮ್ಹಾತ್ರೆ ಅವರನ್ನು ಬಂಧಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ರಮೇಶ್ ಮ್ಹಾತ್ರೆ ಸೇರಿ 6 ಜನರ ವಿರುದ್ಧ ಪೊಲೀಸ್ ಮೊಕದ್ದಮೆ ದಾಖಲಾದ ಬೆನ್ನಲ್ಲೇ ಈ ಬಂಧನ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುನ್ಸಿಪಲ್ ಆಸ್ಪತ್ರೆಯಲ್ಲಿ ನವಜಾತ ಶಿಶುವೊಂದರ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಮತ್ತೊಂದು ಸುಸಜ್ಜಿತ ಆಸ್ಪತ್ರೆಗೆ ಕರೆದುಕೊಂಡು…

Read More

ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ: ಆಮೇಲೇನಾಯ್ತು? – Kannada News | Smoke Detected on IndiGo Flight Before Takeoff at Kempegowda Airport in Devanahalli

ದೇವನಹಳ್ಳಿ, ಮೇ 26: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಟೇಕಾಫ್‌ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನದ ಇಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕಾಫ್‌ಗಾಗಿ ರನ್‌ವೇಗೆ ಚಲಿಸುತ್ತಿದ್ದ ವೇಳೆ ಇಂಜಿನ್ ಬಳಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನವನ್ನು ರನ್‌ವೇನಲ್ಲೇ ನಿಲ್ಲಿಸಿದರು. ಸ್ಥಳಕ್ಕೆ ಕೆಐಎಬಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಹಿರಿಯ ತಾಂತ್ರಿಕ ಅಧಿಕಾರಿಗಳು ದೌಡಾಯಿಸಿ ಪರಿಶೀಲಿಸಿದರು. ಮುಂಜಾಗ್ರತಾ ಕ್ರಮವಾಗಿ ವಿಮಾನದಲ್ಲಿದ್ದ ಪ್ರಯಾಣಿಕರನ್ನು…

Read More

ರಶ್ಮಿಕಾ ವಿವಾಹ ಆಗುತ್ತಿರೋ ಹೋಟೆಲ್​​ ಸಖತ್ ದುಬಾರಿ; ಇಲ್ಲಿದೆ ದರ ವಿವರ – Kannada News | Rashmika Mandanna And Vijay Devarakonda Wedding Destination And Hotel Room rent

ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಫೆಬ್ರವರಿ 26 ರಂದು ಉದಯಪುರದ ಐಷಾರಾಮಿ ಹೋಟೆಲ್‌ನಲ್ಲಿ ವಿವಾಹ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಈ ವಿಷಯದಲ್ಲಿ ಎರಡೂ ನಟರ ಕುಟುಂಬಗಳಿಂದ ಅಥವಾ ಅಧಿಕೃತ ಮೂಲಗಳಿಂದ ಯಾವುದೇ ದೃಢೀಕರಣ ಬಂದಿಲ್ಲ.ಆದರೂ ಈ ವಿಷಯ ಜೋರಾಗಿಯೇ ಹರಿದಾಡುತ್ತಿದೆ. ರಶ್ಮಿಕಾ ವಿವಾಹವು ಅರಾವಳಿ ಪರ್ವತಗಳ ಸಮೀಪದಲ್ಲಿರುವ ಐಷಾರಾಮಿ ಐಟಿಸಿ ಮೆಮೆಂಟೋಸ್ ಏಕಾಯ ಉದಯಪುರದಲ್ಲಿ ನಡೆಯಲಿದೆ ಎಂಬ ಮಾತು ಕೇಳಿಬರುತ್ತಿದೆ. ಈ…

Read More

ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!

ಕಾರವಾರ, ಮಾರ್ಚ್ 16: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಭಾನುವಾರ ಸಂಜೆ ಅಬ್ಬರದ ಗಾಳಿ ಮಳೆ ಸುರಿದಿದೆ. ಪರಿಣಾಮವಾಗಿ ಬೃಹತ್ ಮರ ಧರೆಗುರುಳಿದೆ. ಮುಂಡಗೋಡ–ಪಾಳ–ಹಾನಗಲ್ ರಸ್ತೆಯಲ್ಲಿ ಮರ ಉರುಳಿಬಿದ್ದಿದೆ. ಆಲಿಕಲ್ಲು ಮಳೆಯೂ ಸಹ ಸುರಿದಿದೆ. ಮರ ಹೆದ್ದಾರಿಯ ಮಧ್ಯೆ ಬಿದ್ದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಡಬೇಕಾಯಿತು. ಇದರ ಮಧ್ಯೆ ದೇಶದ ಹಲವು ಭಾಗಗಳಲ್ಲಿ ಎಲ್‌ಪಿಜಿ ಗ್ಯಾಸ್ ಕೊರತೆ ಉಂಟಾಗಿರುವ ಹಿನ್ನೆಲೆ, ಸ್ಥಳೀಯರು ಮರವನ್ನು ಸೌದೆಗಾಗಿ ಕತ್ತರಿಸಿಕೊಳ್ಳಲು ಮುಗಿಬಿದ್ದರು. ಮಳೆ ಸುರಿಯುತ್ತಿದ್ದರೂ ಸಹ ಹಲವರು ಮರದ…

Read More

ಧಗಧಗಿಸಿದ ಮಲೆ ಮಹದೇಶ್ವರ ಬೆಟ್ಟಡ ಒಡಲು: 100 ಎಕರೆ ವನಸಂಪತ್ತು ನಾಶ – Kannada News | Chamarajanagar Wildfire: Over 100 Acres Burnt in Male Mahadeshwara Sanctuary

ಚಾಮರಾಜನಗರ, ಏಪ್ರಿಲ್​ 19: ಮಲೆ ಮಹದೇಶ್ವರ ವನ್ಯಜೀವಿಧಾಮದ ಒಡಲಿಗೆ ಬೆಂಕಿ ಬಿದ್ದಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಸುಮಾರು 100 ಎಕರೆಗೂ ಅಧಿಕ ವಿಸ್ತೀರ್ಣದ ಅಮೂಲ್ಯ ವನಸಂಪತ್ತು ಬೆಂಕಿಗಾಹುತಿಯಾಗಿದೆ. ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೆಬೋಳಿ ಬೆಟ್ಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಿಡಮೂಲಿಕೆಗಳ ಕಾಶಿಯಂತಿದ್ದ ಕಡೆಬೋಳಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ವನ್ಯ ಸಂಪತ್ತು ಮತ್ತು ಅಪರೂಪದ ಗಿಡಮೂಲಿಕೆಗಳು ಸುಟ್ಟು ಕರಕಲಾಗಿವೆ. ಬೇಸಿಗೆ ಆರಂಭಕ್ಕೂ ಮುನ್ನವೇ ಫೈರ್ ಲೇನ್ (ಬೆಂಕಿ ರೇಖೆ) ನಿರ್ಮಾಣ ಮಾಡಲಾಗಿದೆ…

Read More

ಒತ್ತಡಕ್ಕೆ ಬಲಿಯಾಯಿತೇ ಮರಿ?: ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆಯ ಮರಿಯೂ ಗರ್ಭದಲ್ಲೇ ಸಾವು!

ಶಿವಮೊಗ್ಗ, ಏ.11: ಕಳೆದ ಮಾರ್ಚ್ 19 ರಂದು ತ್ಯಾವರೆಕೊಪ್ಪ ಸಫಾರಿಯಲ್ಲಿ ತರಬೇತಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರು ಗರ್ಭಿಣಿ ನೀರಾನೆ ಹಂಸಿನಿಯ (Hamsini Hippo) ಆರೋಗ್ಯ ತಪಾಸಣೆ ನಡೆಸುತ್ತಿದ್ದಾಗ, ಹಂಸಿನಿ ಏಕಾಏಕಿ ದಾಳಿ ಮಾಡಿ ಅವರ ಸಾವಿಗೆ ಕಾರಣವಾಗಿತ್ತು. ಈಗ ಅದೇ ನೀರಾನೆಯ ಮರಿಯು ಗರ್ಭದಲ್ಲೇ ಸಾವನ್ನಪ್ಪಿದೆ. ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಹೀಗೆ ಸರಣಿ ದುರಂತಗಳು ನಡೆಯುತ್ತಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಕೂಡ ಹೆಚ್ಚಿನ ತನಿಖೆಯನ್ನು…

Read More